ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!
ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಯುವತಿ ಸಾವನ್ನಪ್ಪಿದ್ದು ಉಳಿದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಮೃತ ಯುವತಿಯನ್ನು 24 ವರ್ಷದ ಹರ್ಷಿತಾ ಸಲ್ದಾನ ಎಂದು ಗುರುತ್ತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಕಾಪು ಹಳೇ ಮೆಸ್ಕಾಂ ಕಛೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ಉರುಳಿ ಬಿದ್ದಿದೆ.
ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಚಾಲಕ ನಿಹಾಲ್ ಸೇರಿ ಮೂವರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಎಸ್ಸೈ ರಾಜಶೇಖರ ಬಿ. ಸಾಗನೂರು, ಕ್ರೈಂ ಎಸ್ಸೈ ಐ.ಆರ್. ಗಡ್ಡೇಕರ್ ಮೊದಲಾದವರು ಭೇಟಿ ನೀಡಿದ್ದಾರೆ.