Wednesday, October 5, 2022

‘ಸಾದಿ ಓಲಕ್ಕ’ ಎಂದು ಕೇಳಿ ಬಂಟ್ವಾಳದಲ್ಲಿ ಕರಿಮಣಿ ಎಗರಿಸಿದ ಭೂಪ..!

ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ನಿಲ್ಲಿಸಿ ದಾರಿ ಕೇಳಿ ಬಳಿಕ ಮಹಿಳೆ ವಿಳಾಸ ಹೇಳುವ ಸಂದರ್ಭ ಕರಿಮಣಿಸರವನ್ನು ಸೆಳೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಮಾರ್ನಬೈಲು ಸಮೀಪ ನಡೆದಿದೆ.

ಮಾರ್ನಬೈಲು ಬೊಳ್ಳಾಯಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವತ್ಸಲಾ ನಾರಾಯಣ ಎಂಬವರ ಬಳಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯವೆಸಗಿದ್ದು,

ಸುಮಾರು 12 ಗ್ರಾಂ ತೂಕದ ಕರಿಮಣಿ ಸರ ಕದ್ದೊಯ್ದಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...