ಬೆಂಗಳೂರು: ವಾಕಿಂಗ್ಗೆ ತೆರಳಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕನ್ನಡ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಜೆ.ಪಿ. ನಗರದ ಅವರ ನಿವಾಸದ ಬಳಿ ವಾಕಿಂಗ್ಗೆ ತೆರಳಿದ್ದಾಗ ಅಪಘಾತ ನಡೆದಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿ ಆಗದೇ ನಿಧನರಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಆನೇಕಲ್ ಬಾಲರಾಜ್ ಅವರು ‘ಕರಿಯ’ ಸಿನಿಮಾ ನಿರ್ಮಾಣ ಮಾಡಿ ಬಾಲರಾಜ್ ಅವರು ಯಶಸ್ಸು ಕಂಡಿದ್ದರು.
ಇದೀಗ ಅವರ ನಿಧನದ ಸುದ್ದಿ ಕೇಳಿ ಕನ್ನಡ ಚಿತ್ರರಂಗ ಸಂತಾಪ ಸೂಚಿಸಿದೆ.