ಬೆಂಗಳೂರು: ವಾಕಿಂಗ್ಗೆ ತೆರಳಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕನ್ನಡ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಜೆ.ಪಿ. ನಗರದ ಅವರ ನಿವಾಸದ ಬಳಿ ವಾಕಿಂಗ್ಗೆ ತೆರಳಿದ್ದಾಗ ಅಪಘಾತ ನಡೆದಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿ ಆಗದೇ ನಿಧನರಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಆನೇಕಲ್ ಬಾಲರಾಜ್ ಅವರು ‘ಕರಿಯ’ ಸಿನಿಮಾ ನಿರ್ಮಾಣ ಮಾಡಿ ಬಾಲರಾಜ್ ಅವರು ಯಶಸ್ಸು ಕಂಡಿದ್ದರು.
ಇದೀಗ ಅವರ ನಿಧನದ ಸುದ್ದಿ ಕೇಳಿ ಕನ್ನಡ ಚಿತ್ರರಂಗ ಸಂತಾಪ ಸೂಚಿಸಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
ತುಮಕೂರು: ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ಪೊಟರೆಗೆ ಸಿಲುಕಿಕೊಂಡ ಘಟನೆ ತುಮಕೂರು ತಾಲೂಕಿನ ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿ ಭಾನುವಾರ (ಅ.27) ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ ಸಿಬ್ಬಂದಿ, ಇಂದು (ಅ.28) ಆಕೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. 12 ಗಂಟೆಗಳ ಕಾರ್ಯಾಚರಣೆ ಬಳಿಕ ಯುವತಿ ಬದುಕಿ ಬಂದಿದ್ದಾರೆ.
ಕೊಚ್ಚಿಯಿಂದ ಹತ್ತು ಜನ ಸ್ನೇಹಿತರು ಕೊಡೈಕೆನಾಲ್‌ಗೆ ಹೋಗುತ್ತಾರೆ. ಕಮಲ್ ಹಾಸನ್ ಅಭಿನಯದ ಗುಣ ಚಿತ್ರದಲ್ಲಿನ ಗುಹೆಗಳನ್ನು ನೋಡಲೆಂದು ತೆರಳುತ್ತಾರೆ. ನಿರ್ಬಂಧಿತ ಪ್ರದೇಶ ಎಂದು ಗೊತ್ತಿದ್ದರೂ ಆಳವಾದ ಗುಹೆಗಳನ್ನು ಪ್ರವೇಶಿಸುತ್ತಾರೆ. ಆದರೆ, ಸ್ನೇಹಿತನೊಬ್ಬ ಆಕಸ್ಮಿಕವಾಗಿ ಆಳವಾದ ಕಣಿವೆಯಲ್ಲಿ ಬೀಳುತ್ತಾನೆ. ಉಳಿದ ಸ್ನೇಹಿತರು ಅವನನ್ನು ಹೇಗೆ ಹೊರಗೆ ಕರೆತಂದರು ಎಂಬುದೇ ಮಂಜುಮ್ಮೆಲ್ ಬಾಯ್ಸ್ ಸಿನಿಮಾದ ಕತೆ.
ನಿನ್ನೆ (ಅ.27) ತುಮಕೂರು ನಗರದ ಸಮೀಪದ ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿರುವ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಹಂಸ (20) ಕೆಳಕ್ಕೆ ಬಿದ್ದು ಕಾಣೆಯಾಗಿದ್ದಳು. ಸಂಜೆಯಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿತ್ತು. ಅಲ್ಲದೆ, ಒಂದು ಹಂತದಲ್ಲಿ ಹಂಸ ಸತ್ತೇ ಹೋಗಿದ್ದಾಳೆ ಎಂದು ಭಾವಿಸಲಾಗಿತ್ತು. ಆದರೆ, ಅದೃಷ್ಟವಶಾತ್ ಹಂಸ ಬದುಕಿದ್ದಾಳೆ. ಪೊಟರೆಯಲ್ಲಿ ಸಿಲುಕಿಕೊಂಡಿದ್ದ ಆಕೆಯನ್ನು ಇದೀಗ ರಕ್ಷಣೆ ಮಾಡಲಾಗಿದೆ.
ಗುಬ್ಬಿ ತಾಲೂಕಿನ ಶಿವಪುರದ ಸೋಮನಾಥ್ ಎಂಬುವವರ ಪುತ್ರಿ ಹಂಸ ಸ್ನೇಹಿತರೊಂದಿಗೆ ಮೈದಾಳ ಕೆರೆ ನೋಡಲು ತೆರಳಿದ್ದರು. ಈ ವೇಳೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು.
ಮಂಗಳೂರು/ಬೆಂಗಳುರು : ನಿನ್ನೆ (ಅ.26) ತಡರಾತ್ರಿ ಸುಲ್ತಾನ್ ತಿಪ್ಪಸಂದ್ರದ ಅಮ್ಜಾದ್ ಎಂಬಾತ ರೋಹಿದ್ ಅಲಿಯಾಸ್ ಅರ್ಬಾಜ್ನನ್ನು ಕೊ*ಲೆ ಮಾಡಿರುವ ಘಟನೆ ಜಮಾಲ್ ಷಾ ನಗರದಲ್ಲಿ ನಡೆದಿದೆ.
ರೋಹಿದ್ ಅಲಿಯಾಸ್ ಅರ್ಬಾಜ್(26) ಮೃ*ತ ವ್ಯಕ್ತಿ.
ಘಟನೆ ಹಿನ್ನಲೆ :
ರೋಹಿದ್ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಹೀಗಿರುವಾಗ ಅಮ್ಜಾದ್ ಆಗಾಗ ರೋಹಿದ್ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್ ಅಣ್ಣನ ಹೆಂಡತಿ ಅಂದರೆ ಅತ್ತಿಗೆ ಮೇಲೆ ಕಣ್ಣು ಹಾಕಿದ್ದಾನೆ. ರೋಹಿದ್‌ಗೆ ತಿಳಿಯದಂತೆ ತನ್ನ ಅತ್ತಿಗೆ ಮೊಬೈಲ್ ನಂಬರ್ ಪಡೆದುಕೊಂಡು ಆಗ್ಗಾಗ ಫೋನ್ ಹಾಗೂ ವಿಡಿಯೋ ಕಾಲ್ ಮಾಡಿ ರೋಹಿದ್ ಅತ್ತಿಗೆಗೆ ಪಿಡಿಸುತ್ತಿದ್ದ ವಿಷಯ ತಿಳಿದ ರೋಹಿದ್ ಮತ್ತು ಸಂಬಂಧಿಕರು ಕಳೆದ ಎರಡು ತಿಂಗಳ ಹಿಂದೆ ಅಮ್ಜಾದ್ ಮನೆ ಬಳಿ ಹೋಗಿ ಗಲಾಟೆ ಮಾಡಿ ಎಚ್ಚರಿಕೆ ಕೊಟ್ಟು ಬಂದಿದ್ದರು.
ಇಷ್ಟಾದರೂ ಅಮ್ಜಾದ್ ಮಾತ್ರ ತನ್ನ ದುರ್ಬುದ್ದಿಯನ್ನು ನಿಲ್ಲಿಸಿರಲಿಲ್ಲ. ಎರಡು ತಿಂಗಳು ಸುಮ್ಮನಿದ್ದು ಮತ್ತೆ ಫೋನ್ ಮಾಡೋದಕ್ಕೆ ಶುರುಮಾಡಿದ್ದಾನೆ. ಅಷ್ಟೇ ಅಲ್ಲದೆ ಅಮ್ಜಾದ್ ಕಳೆದ ಮೂರು ದಿನಗಳ ಹಿಂದೆ ರೋಹಿದ್ ಎದುರಲ್ಲಿಯೇ ಅವರ ಅತ್ತಿಗೆಗೆ ವಿಡಿಯೋ ಕಾಲ್ ಮಾಡಿದ್ದಾನೆ. ಇದನ್ನು ನೋಡಿದ್ದ ರೋಹಿದ್ ಗಲಾಟೆ ಮಾಡಿ ವಾರ್ನಿಂಗ್ ಮಾಡಿದ್ದ. ಇದಕ್ಕೆ ಅಮ್ಜಾದ್ ಕೂಡ ಕೋಪ ಮಾಡಿಕೊಂಡಿದ್ದ.
ನಿನ್ನೆ (ಅ.26) ಬೆಂಗಳೂರಿಗೆ ಕೆಲಸದ ಮೇಲೆ ಹೋಗಿದ್ದ ರೋಹಿದ್ ರಾತ್ರಿ ವಾಸಪ್ ಬರುತ್ತಿದ್ದಂತೆ ‘ನಿನ್ನ ಜೊತೆಗೆ ಮಾತನಾಡಬೇಕು ಬಾ’ ಎಂದು ಅಮ್ಜಾದ್ ಜಮಾಲ್ ಷಾ ನಗರದ ಹೊರಗೆ ಕರೆದಿದ್ದಾನೆ. ಅಮ್ಜಾದ್ ಕರೆದ ಜಾಗಕ್ಕೆ ರೋಹಿದ್ ಹೋಗಿದ್ದಾನೆ. ಈ ವೇಳೆ ಜಗಳ ತೆಗೆದು ರೋಹಿದ್ ಎದೆಗೆ ಚಾಕು*ವಿನಿಂದ ಇ*ರಿದು ಅಲ್ಲಿಂದ ಅಮ್ಜಾದ್ ಪರಾರಿಯಾಗಿದ್ದಾನೆ.
ಆರೋಪಿ ಬಂಧನ :
ಇನ್ನು ವಿಷಯ ತಿಳಿಯುತ್ತಿದ್ದಂತೆ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕ್ಷಿಪ್ರಕಾರ್ಯಾಚರಣೆ ನಡೆಸಿ ಕೊ*ಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಮ್ಜದ್ನನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆ*ಹಾಕುತ್ತಿದ್ದಾರೆ. ಇತ್ತ ಮಾಡಿದ ತಪ್ಪನ್ನು ಪ್ರಶ್ನೆ ಮಾಡಿದ್ದಕ್ಕೆ ರೋಹಿದ್ ಕುಟುಂಬ ಇವತ್ತು ಅನಾಥವಾಗಿ ಕಣ್ಣೀಕು ಹಾಕುವಂತಾಗಿದೆ.