LATEST NEWS
Karkala: ನಗರದ ಹೆಡ್‌ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ ನಾಪತ್ತೆ..!
ಕಾರ್ಕಳ: ಕಾರ್ಕಳ ನಗರದ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಪತ್ತೆಯಾಗಿರುವ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾಗಿರುವ ವ್ಯಕ್ತಿಯನ್ನು ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ (35) ಎಂದು ಗುರುತಿಸಲಾಗಿದೆ.
ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ಹೆಡ್‌ಕಾನ್‌ಸ್ಟೇಬಲ್ ಭಡ್ತಿ ಹೊಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಗುರುವಾರ ರಾತ್ರಿ 7.30ಕ್ಕೆ ಹೆಂಡತಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.
2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಆಗಿ ಅ.17 ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಶೃತಿನ್ ಶೆಟ್ಟಿಯವರನ್ನು ಮಾಹಿತಿ ತಿಳಿದರೆ 0820-2555452 ನಂಬರ್ ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಕನ್ನಡ, ಇಂಗ್ಲಿಷ್, ಹಿಂದಿ, ತುಳು ಭಾಷೆ ಮಾತನಾಡುತ್ತಾರೆ.
LATEST NEWS
Kundapura: ಲಂಚ ಪ್ರಕರಣ- ಸಬ್ ಇನ್‌ಸ್ಪೆಕ್ಟ್ರರ್ ಶಂಭುಲಿಂಗಯ್ಯ ಅಮಾನತು
ಕುಂದಾಪುರ: ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಕಾಲೇಜಿನ ಆಡಳಿತ ಮಂಡಳಿಯೊಂದರ ಗಲಾಟೆಗೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಈ ಕುರಿತು ತನಿಖೆ ನಡೆಸಿ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅಚ್ಚಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಅವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್ ವಿರುದ್ದ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ದದ ದೂರಿಗೆ ಬಿ ರಿಪೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭು ಲಿಂಗಯ್ಯ ಲಂಚ ಪಡೆದಿದ್ದರು. ಅದರಲ್ಲೂ ಹತ್ತಿರದ ಸಂಬಂಧಿಯೋರ್ವರ ಖಾತೆಗೆ ಸ್ವಲ್ಪ ಮೊತ್ತದ ಹಣ ವರ್ಗಾಯಿಸಿಕೊಂಡಿದ್ದಾರೆ. ಈ ಬಗ್ಗೆ ದಾಖಲೆಗಳನ್ನು ನೀಡಲು ಸಿದ್ಧವಿದ್ದು ಠಾಣಾಧಿಕಾರಿಗಳನ್ನು ತತ್‌ಕ್ಷಣ ಅಮಾನತುಗೊಳಿಸಬೇಕು ಎಂದು ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಮುಖ ಎನ್ನಲಾದ ದಿನೇಶ್ ಗಾಣಿಗ ಕೋಟ ವೀಡಿಯೋ ಮೂಲಕ ಎಸ್ ಪಿ ಅವರನ್ನು ವಿನಂತಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಶಂಭುಲಿಂಗಯ್ಯ ಅವರನ್ನು ಈ ಹಿಂದೆ ಅಶಿಸ್ತಿನ ಕಾರಣಕ್ಕೆ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ನಿಯೋಜಿಸಲಾಗಿತ್ತು.
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bangalore
ಬಿಗ್ ಬಾಸ್ ಮನೆಯಲ್ಲಿ ನಮ್ರತಾ-ಸ್ನೇಹಿತ್ ಲವ್ವಿ-ಡವ್ವಿ
Bigboss: ಬಿಗ್ ಬಾಸ್ ಮನೆಯಲ್ಲಿ ಕಾರ್ತಿಕ್- ಸಂಗೀತಾ ಇಬ್ಬರ ಒಂದು ಜೋಡಿ ಆದರೆ ಇತ್ತ ಸ್ನೇಹಿತ್ ಮತ್ತು ನಮ್ರತಾ ಇವರಿಬ್ಬರ ಪ್ರೇಮ ಕತೆ ಶುರುವಾಗಿದೆ.
ಕ್ಯಾಪ್ಟೆನ್ಸಿ ವಿಚಾರದಲ್ಲಿ ನಮ್ರತಾ ಹಾಗೂ ಸ್ನೇಹಿತ್ ಮುನಿಸಿಕೊಂಡಿದ್ದು, ಇದೀಗ ಮತ್ತೇ ಅವರ ಫ್ರೆಂಡ್‌ಶಿಪ್ ಶುರುವಾಗಿದೆ. ‘ ನಾನು ನಿಮ್ಮ ಪ್ರೀತಿನ ಒಪ್ಪಿಕೊಂಡ್ರೆ ಏನು ಮಾಡ್ತೀರಾ ಎಂದು ಸ್ನೇಹಿತ್ ಗೆ ನಮ್ರತಾ ಹೇಳಿದ್ದಾರೆ. ಅವರ ಮಾತಿಗೆ ಸ್ನೇಹಿತ್ ನಾಚಿ ನೀರಾಗಿದ್ದಾರೆ. ಇದೀಗ ಇವರಿಬ್ಬರ ಲವ್ವಿ-ಡವ್ವಿಯಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ಸ್ನೇಹಿತ್ ಕ್ಯಾಪ್ಟನ್ ಆಗಿದ್ದಾಗ ಟಾಸ್ಕ್‌ನಿಂದ ನಮ್ರತಾ ಅವರನ್ನು ಹೊರಗೆ ಹಾಕಿದ್ದರು. ಬಳಿಕ ನಮ್ರತಾ ಅವರ ಜೊತೆ ಮಾತನಾಡುವುದನ್ನೇ ನಿಲ್ಲಿಸಿದ್ದರು.
ಕಳೆದ 60 ದಿನಗಳಿಂದ ನಡೆಯುತ್ತಿರೋ ಸೀನ್ ಅಂದರೆ ನಮ್ರತಾ ಹಿಂದೆ ಹೋಗೋದನ್ನ ಸ್ನೇಹಿತ್ ಬಿಟ್ಟಿಲ್ಲ. ನಮ್ರತಾಗೆ ಆಗಾಗ ಪ್ರೇಮ ನಿವೇದನೆ ಮಾಡುತ್ತಲೇ ಬಂದಿದ್ದಾರೆ. ನಮ್ರತಾ ಬೀಳಲ್ಲ, ಸ್ನೇಹಿತ್ ಬಿಡಲ್ಲ. ಇದೀಗ ಇದೆನ್ನೆಲ್ಲಾ ಗಮನಿಸಿ ನಮ್ರತಾ, ಸರಿ ನಾನು ನಿಮ್ಮ ಪ್ರೀತಿಯನ್ನ ಒಪ್ಪಿಕೊಂಡರೆ ಮುಂದೇನು? ಫ್ಯೂಚರ್ ಪ್ಲ್ಯಾನ್ ಏನು ಎಂದು ಕೇಳಿದ್ದಾರೆ. ಹೇಳಿ ಈಗ ನಾನು ಪ್ರೀತಿ ಮಾಡ್ತೀನಿ ಅಂದ್ರೆ ಏನು ಮಾಡ್ತೀರಿ ಎಂದು ನೇರವಾಗಿ ಪ್ರಶ್ನೆ ಎಸೆದರು.
ಆದರೆ, ಈ ಪ್ರಶ್ನೆಗೆ ಏನು ಉತ್ತರಿಸಬೇಕು ಎಂಬುದೇ ಸ್ನೇಹಿತ್‌ಗೆ ತಿಳಿಯಲಿಲ್ಲ. ಅವರು ನಕ್ಕು ಸುಮ್ಮನಾದರು. ಹೇಳಿ ಈಗ ನಾನು ಪ್ರೀತಿಸುತ್ತೇನೆ ಎಂದರೆ ಏನು ಮಾಡ್ತೀರಾ. ಇಷ್ಟು ದಿನ ಸುಮ್ಮನೆ ಕಾಳು ಹಾಕಿದ್ರಾ ಎಂದು ಮರು ಪ್ರಶ್ನೆ ಹಾಕಿದರು. ಬಿಗ್ ಬಾಸ್‌ನಿಂದ ಹೊರಗೆ ಹೋದ ಬಳಿಕ ಮನೆಯವರ ಜೊತೆ ಮಾತನಾಡೋಣ.
ಒಂದು ವರ್ಷ ಮದುವೆ ಆಗೋದು ಬೇಡ. ನಿಮ್ಮಿಷ್ಟದ ಜಾಗಕ್ಕೆ ಹೊಗೋಣ. ಸ್ವಿಜರ್‌ಲೆಂಡ್‌ಗೆ ಮೊದಲು ಹೋಗೋಣ ಎಂದರು ಸ್ನೇಹಿತ್. ಅವರ ಮಾತನ್ನು ಕೇಳಿ ನಮ್ರತಾ ನಕ್ಕರು. ನಮ್ರತಾ ನಗುತ್ತಲೇ ಪ್ರೀತಿಗೆ ಗ್ರೀನ್ ಸಿಗ್ನಲ್ ಕೊಟ್ರಾ? ಈ ಬಗ್ಗೆ ಕ್ಲ್ಯಾರಿಟಿ ಇಲ್ಲ. ಆದರೆ ನಮ್ರತಾ ನಗುವಿಗೆ ಸ್ನೇಹಿತ್ ಮಾತ್ರ ನಾಚಿ ನೀರಾಗಿದ್ದಾರೆ. ಅಂತೂ ಇಂತೂ ಕೋಪ ಮಾತನಾಡುತ್ತಿದ್ದಲ್ಲಾ ಅಂತ ಸಮಾಧಾನದಲ್ಲಿದ್ದಾರೆ ಸ್ನೇಹಿತ್.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್