Connect with us

LATEST NEWS

ಕಾರ್ಕಳ – ಬೆಂಕಿ ಬಿದ್ದಿದೆ ಅಂದರೆ ನಮ್ಮಲ್ಲಿ ಗಾಡಿ ಇಲ್ಲ ಎಂದ ಅಗ್ನಿಶಾಮಕದಳ

Published

on

ಕಾರ್ಕಳ ಮಾರ್ಚ್ 22: ಕಾರ್ಕಳದ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್‌ಶೆಡ್ ಕೂಡ ಸುಟ್ಟು ಕರಕಲಾಗಿದೆ.

ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ. ಮೇಯಲು ಕಟ್ಟಿದ್ದ ಹಲವು ಜಾನುವಾರುಗಳನ್ನು ಕೂಡಲೇ ಸ್ಥಳೀಯರು ರಕ್ಷಿಸಿದ್ದಾರೆ. ಕೃಷಿ ತೋಟಕ್ಕೆ ಬೆಂಕಿ ಬಿದ್ದು ಉರಿಯುತ್ತಿರುವ ಸಂದರ್ಭದಲ್ಲಿ ಸ್ಥಳೀಯರು ಕಾರ್ಕಳದ ಅಗ್ನಿಶಾಮಕದಳದವರನ್ನು ಫೋನ್ ಮಾಡಿ ಸಂಪರ್ಕಿಸಿದಾಗ ಸರಿಯಾದ ಸ್ಪಂದನೆ ಸಿಕ್ಕಿಲ್ಲವೆಂದು ಆರೋಪಿಸಿದ್ದಾರೆ. ನಮ್ಮಲ್ಲಿರುವ ಎರಡೂ ವಾಹನಗಳು ಬೇರೆ ಕಡೆ ಹೋಗಿವೆ ಎಂದು ತಿಳಿಸಿದ್ದು, ಬಳಿಕ ಮೂಡುಬಿದ್ರೆಯ ಅಗ್ನಿಶಾಮಕದಳವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಮೂಡಬಿದ್ರೆಗೆ ಸಂಪರ್ಕಿಸಿದಾಗ, ನಮ್ಮ ವಾಹನಗಳು ನೀರನ್ನು ತುಂಬಿಸಲು ಹೋಗಿದೆ ಎಂದು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸುಮಾರು 2-3 ಎಕರೆಯಷ್ಟು ಜಮೀನಿಗೆ ಬೆಂಕಿ ಬಿದ್ದು ಸುಟ್ಟು ಹೋದರೂ ಅಗ್ನಿಶಾಮಕದಳದವರ ಸರಿಯಾದ ಸ್ಪಂದನೆಯೇ ಸಿಗದೆ, ಸ್ಥಳೀಯರೇ ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.

LATEST NEWS

ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ!

Published

on

ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದಾಳೆ. ಕೇರಳದ ಜಿಲುಮೋಲ್​​ ಮರಿಯೆಟ್ ಥಾಮಸ್. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿದ್ದ ಮರಿಯೆಟ್ ಥಾಮಸ್ ಚಿಕ್ಕ ವಯಸ್ಸಿನಲ್ಲೇ ಕಾಲಿನ ಮೂಲಕವೇ ದೈನಂದಿನ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಂಡಿದ್ದಳು. ಇದೀಗ ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ ದೇಶದ ಗಮನ ಸೆಳೆದಿದ್ದಾಳೆ.

ಇದಲ್ಲದೇ ಎರಡು ಕೈಗಳಿಲ್ಲದೇ ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.

ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸುವುದರ ಜೊತೆಗೆ ಚಿತ್ರಕಲೆಯಲ್ಲೂ ಸೈ ಎನಿಸಿಕೊಂಡಿರುವ ಈಕೆ ಸಾಕಷ್ಟು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಇದೀಗ ದೇಶದಾದ್ಯಂತ ಖ್ಯಾತಿಯನ್ನು ಪಡೆದಿರುವ ಈಕೆಯನ್ನು ಅನೇಕ ಸೆಲೆಬ್ರಿಟಿಗಳು ಕೂಡ ಭೇಟಿಯಾಗುತ್ತಿದ್ದಾರೆ.

Continue Reading

DAKSHINA KANNADA

ವೋಟ್ ಮಾಡಿ, ಊಟ ಮಾಡಿ: ಹೋಟೆಲ್‌ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!

Published

on

ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್‌ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.

ವೋಟ್ ಮಾಡಿ, ಊಟ ಮಾಡಿ:

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್‌ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.

ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್​​ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್‌ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.

SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.

ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್‌ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

Continue Reading

LATEST NEWS

ಇಂದಿನಿಂದ 5 ದಿನ ರಾಜ್ಯದಲ್ಲಿ ಬಿಸಿಗಾಳಿ; ಕರ್ನಾಟಕಕ್ಕೆ ಆರೆಂಜ್ ಅಲರ್ಟ್

Published

on

ಬೆಂಗಳೂರು: ಅಬ್ಬಾ.. ಸಾಕಪ್ಪಾ ಸಾಕು ಅನ್ನೋ ಬೇಸಿಗೆಯ ಬಿಸಿ ಮತ್ತೆ ಏರಿಕೆಯಾಗುತ್ತಿದೆ. ಗರಿಷ್ಠ ತಾಪಮಾನ ಸಹಿಸಿಕೊಳ್ಳಲಾಗದೇ ಪರದಾಡುತ್ತಿರುವ ಜನರಿಗೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ಬಂದಿದೆ. ಇಂದಿನಿಂದ ಅಂದ್ರೆ ಏಪ್ರಿಲ್ 25ರಿಂದ ಮುಂದಿನ 5 ದಿನಗಳವರೆಗೆ ಬಿಸಿಗಾಳಿ ಮತ್ತು ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ.

ನಾಳೆ ದೇಶದ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ನಾಳೆ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಬಿಸಿಗಾಳಿಯ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ ರಾಜ್ಯಕ್ಕೆ ರೆಡ್‌ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ನಾಳೆ ಕೇರಳ, ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿನ ಉಷ್ಣಾಂಶ ಇರುವ ಮುನ್ಸೂಚನೆ ನೀಡಲಾಗಿದೆ. ಕೇರಳ ರಾಜ್ಯದಲ್ಲಿ 36-40 ಡಿಗ್ರಿ ಉಷ್ಣಾಂಶ ದಾಖಲಾಗುವ ಮುನ್ಸೂಚನೆ ಇದೆ. ಚುನಾವಣಾ ಆಯೋಗವು ಬಿಸಿ ಗಾಳಿ ಸಮಸ್ಯೆ ಎದುರಿಸಲು ಟಾಸ್ಕ್ ಪೋರ್ಸ್ ರಚಿಸಿದೆ. ಪೋಲಿಂಗ್ ಬೂತ್‌ಗಳಲ್ಲಿ ಕುಡಿಯುವ ನೀರು, ಫ್ಯಾನ್‌ಗಳ ವ್ಯವಸ್ಥೆಯನ್ನು ಚುನಾವಣಾ ಆಯೋಗ ಮಾಡಿದೆ.

ಏಪ್ರಿಲ್ 25ರಿಂದ ಏಪ್ರಿಲ್ 29ರವರೆಗೆ ಬಿಸಿಗಾಳಿ, ತೀವ್ರ ಬಿಸಿಗಾಳಿ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಾಗಿರುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಶುಷ್ಕ ವಾತಾವರಣವು ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Continue Reading

LATEST NEWS

Trending