Connect with us

    DAKSHINA KANNADA

    ಕಾರ್ಕಳ : ಕಬಡ್ಡಿ ಆಡುತ್ತಿರುವಾಗಲೇ ಕುಸಿದು ಬಿದ್ದು ಆಟಗಾರ ಸಾ*ವು

    Published

    on

    ಕಾರ್ಕಳ : ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಕಾರ್ಕಳ ಮುಟ್ಲುಪಾಡಿಯ 26ರ ಹರೆಯದ ಯುವಕ ಪ್ರೀತಂ ಶೆಟ್ಟಿ ಹೃದಯಾ*ಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿ ಕಬಡ್ಡಿ ಆಡುತ್ತಿರುವಾಗಲೇ ಹೃದಯಾಘಾ*ತದಿಂದ ಪ್ರೀತಂ ಸಾ*ವನ್ನಪ್ಪಿದ್ದಾರೆ.

    ಕುಸಿದು ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಸಾ*ವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.  ಪ್ರತಿಭಾವಂತ ಕಬಡ್ಡಿ ಆಟಗಾರರಾಗಿದ್ದ ಪ್ರೀತಂ ಉಜಿರೆ ಎಸ್ ಡಿಎಂ ತಂಡದ ಮಾಜಿ ಆಟಗಾರರಾಗಿದ್ದರು. ಅಷ್ಟೇ ಅಲ್ಲದೇ, ಹಲವು ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದರು

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮೂಲ್ಕಿ: ವಿವಿಧ ರಂಗಗಳ ಸಾಧಕರಿಗೆ ‘ಅರಸು ಕಂಬಳ’ ಪ್ರಶಸ್ತಿ ಪ್ರದಾನ

    Published

    on

    ಮೂಲ್ಕಿ: ಮೂಲ್ಕಿ ಅರಸು ಕಂಬಳ ಸಂದರ್ಭ ಮೂಲ್ಕಿ ಸೀಮೆ ವ್ಯಾಪ್ತಿಯ ವಿವಿಧ ರಂಗಗಳ 14 ಮಂದಿ ಸಾಧಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಅರಮನೆಯ ಧರ್ಮ ಚಾವಡಿಯಲ್ಲಿ ಅರಸು ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮ ಡಿ. 22ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಅರಸರಾದ ದುಗ್ಗಣ್ಣ ಸಾವಂತರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಮೂಲ್ಕಿ ಅರಮನೆ ಟ್ರಸ್ಟ್ ಮತ್ತು ಹಳೆಯಂಗಡಿಯ ಪ್ರಿಯ ದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಸಹಭಾಗಿತ್ವದಲ್ಲಿ ಕಾಠ್ಯಕ್ರಮ ನಡೆ. ಯಲಿದೆ. ಶ್ರೀ ಅರುಣಾನಂದ ತೀರ್ಥ ಸ್ವಾಮೀ ಜಿ (ಸಾಧನಾ ಪ್ರಶಸ್ತಿ) ದಿ। ಎಚ್. ನಾರಾಯಣ ಸನಿಲ್ (ಮರಣೋತ್ತರ-ಸಮಾಜ ಸೇವೆ ಮತ್ತು ಶಿಕ್ಷಣ, ಸಹಕಾರಿ) ದಿ। ಎನ್. ಬಾಬು ಶೆಟ್ಟಿ (ಮರಣೋತ್ತರ-ಸಮಾಜ ಸೇವೆ), ಮೀರಾ ಬಾಯಿ ಕೆ. (ಶಿಕ್ಷಣ), ಎಚ್. ಶಕುಂತಳಾ ಭಟ್ (ಸಾಹಿತ್ಯ) ವಾಲ್ಟರ್ ಡಿ’ಸೋಜಾ (ಕೃಷಿ ಮತ್ತು ಪರಿಸರ), ಡಾ। ಹಸನ್ ಮುಬಾರಕ್ (ವೈದ್ಯಕೀಯ), ಸೀತಾರಾಮ್ ಕುಮಾರ್ ಕಟೀಲು (ಯಕ್ಷಗಾನ), ಪರಮಾನಂದ ಸಾಲ್ಯಾನ್ (ಸಾಹಿತ್ಯ), ಶಿವ ಸಂಜೀವಿನಿ ಸುರಗಿರಿ (ಸಂಘ ಸಂಸ್ಥೆ), ಮಾಧವ ಶೆಟ್ಟಿಗಾರ್ ಮತ್ತು ಚಂದ್ರಕುಮಾರ್ (ಸಾಮಾಜಿಕ ಕ್ಷೇತ್ರ) ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು (ಸಂಘಸಂಸ್ಥೆ) ವಿನಾಯಕಯಕ್ಷಗಾನ ಫೌಂಡೇಶನ್ ಕೆರೆಕಾಡು (ಯಕ್ಷಗಾನ ತಂಡ) ಇವರಿಗೆ ಪ್ರಶಸ್ತಿ ನೀಡಲಾಗುವುದು.

    ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆಳದಂಗಡಿ ಅರಮನೆಯ ತಿಮ್ಮಣ್ಣ ಅರಸರಾದ ಡಾ। ಪದ್ಮಪ್ರಸಾದ್ ಅಜಿಲರು, ದ.ಕ. ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿವೃತ್ತ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ಪಿ. ಮುಂತಾದವರು ಉಪಸ್ಥಿತರಿರುವರು ಎಂದರು. ಅರಮನೆಟ್ರಸ್ಟ್‌ನ ಗೌತಮ್ ಜೈನ್, ಪ್ರಿಯದರ್ಶಿನಿ ಸೊಸೈಟಿಯ ಅಧ್ಯಕ್ಷ ವಸಂತ್ ಬೆರ್ನಾಡ್ ಹಾಗೂ ಸಿಇಒ ಸುದರ್ಶನ್ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಅತಿ ವೇಗ ತಂದಿಟ್ಟ ಪ್ರಾ*ಣಾಪಾಯ; ಬಸ್‌ಗೆ ಡಿ*ಕ್ಕಿ ಹೊ*ಡೆದು ಬೈಕ್ ಸವಾರ ಸಾ*ವು

    Published

    on

    ಮಂಗಳೂರು: ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರೊಬ್ಬರು ರಸ್ತೆ ಅ*ಪಘಾ*ತದಲ್ಲಿ ಮೃ*ತಪಟ್ಟ  ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್‌ನಲ್ಲಿ ನನ್ನೆ (ಡಿ.20) ರಾತ್ರಿ ನಡೆದಿದೆ.

    ಮೃ*ತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ.

    ಕುಳಾಯಿಯಲ್ಲಿ ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆತರಲೆಂದು ರೆಮ್ಮಿ ತನ್ನ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ. ಕುಳಾಯಿಗುಡ್ಡೆ ಜಂಕ್ಷನ್ ಬಳಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸರು ರೆಮ್ಮಿಯನ್ನು ಎಚ್ಚರಿಸಿದ್ದರೂ ಗಮನಿಸದ ರೆಮ್ಮಿ ಸುರತ್ಕಲ್ ಕಡೆಗೆ ಅತಿ ವೇಗದಿಂದ ತನ್ನ ದ್ವಿಚಕ್ರ ವಾಹನವನ್ನು ತಿರುಗಿಸಿದಾಗ ಎದುರುರಿನಿಂದ ಬರುತ್ತಿದ್ದ ಖಾಸಗಿ ಸಿಟಿ ಬಸ್ ಡಿ*ಕ್ಕಿ ಹೊಡೆದಿತ್ತು.

     

    ಇದನ್ನೂ ಓದಿ : ಪುತ್ತೂರು: ಬಸ್-ಬೈಕ್ ಅಪಘಾತ, ಬೈಕ್ ಸವಾರ ಸಾ*ವು

     

    ಅ*ಪಘಾ*ತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರೆಮ್ಮಿ ಗಂ*ಭೀರ ಗಾ*ಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃ*ತಪಟ್ಟಿದ್ದಾರೆ.  ಅ*ಪಘಾ*ತ ನಡೆದ ಬೆನ್ನಲ್ಲೇ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು ಪೊಲೀಸರ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

    Continue Reading

    DAKSHINA KANNADA

    ಮೂಲ್ಕಿ : ಭೀ*ಕರ ಕೊ*ಲೆ ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್

    Published

    on

    ಮೂಲ್ಕಿ : ನಗರ ಸಮೀಪ ಶರಣಪ್ಪ (31) ಎಂಬವರ ಭೀಕರ ಕೊ*ಲೆಯಾಗಿದ್ದು, ಮುಲ್ಕಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 09/2020 ಕಲಂ 302 r/w 34 ಐಪಿಸಿಯಡಿ ಆರೋಪಿಗಳನ್ನು ಬಂಧಿಸಲಾಗಿದೆ.

    ದಿನಾಂಕ 30/01/2020 ರಂದು ರಾತ್ರಿ ಸುಮಾರು 10-00 ಗಂಟೆಗೆ ಮುಲ್ಕಿ ತಾಲ್ಲೂಕ್ ಕಾರ್ನಾಡ್ ಗ್ರಾಮದ ವನಭೋಜನ ಎಂಬಲ್ಲಿ ಬಿಹಾರ ಮೂಲದ ಸನ್ನಿಬಾಬು ಮತ್ತು ಗಲ್ಲುರಾಮ ಅಲಿಯಾಸ್ ಸಚಿನ್ ಅಲಿಯಾಸ್ ನವೀನ ಶರಣಪ್ಪನನ್ನು ಕೊ*ಲೆಗೈದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

    ಶರಣಪ್ಪನು ಆರೋಪಿಗಳಿಗೆ ಹಾಗೂ ಆರೋಪಿಗಳ ತಂದೆ -ತಾಯಿಗೆ ಬೇಡದ ಕೆ*ಟ್ಟ ಮಾತಿನಿಂದ ಬೈ*ದ ಎಂಬ ಕೋಪದಿಂದ ಶರಣಪ್ಪನ ಕುತ್ತಿಗೆಗೆ ಚೂ*ರಿಯಿಂದ ಚು*ಚ್ಚಿ-ಚು*ಚ್ಚಿ ಕೊ*ಯ್ದು ಕೊ*ಲೆ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ದಿನಾಂಕ 20/12/2024 ರಂದು ಮಾನ್ಯ 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕಾಂತರಾಜು ಎಸ್‌.ವಿ ರವರು ಆರೋಪಿಗಳಿಗೆ ಕಲಂ  302 ಐಪಿಸಿ ಗೆ ಜೀವಾವಧಿ ಶಿಕ್ಷೆ ಮತ್ತು ತಲಾ 10000 ದಂಡ, ಹಾಗೂ 341ಐಪಿಸಿ ಗೆ 01 ತಿಂಗಳ ಸಾಧ ಸಜೆ  ತಲಾ 500  ದಂಡ ವಿಧಿಸಿದೆ.

    ಮಾನ್ಯ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿಯನ್ನು ಮುಲ್ಕಿ ಠಾಣಾ ಪಿ ಐ ಜಯರಾಮ್ ಗೌಡ ರವರು ಸಲ್ಲಿಸಿದ್ದು ತನಿಖಾ ಸಹಾಯಕರಾಗಿ ASI ಉಮೇಶ್ ರವರು ಸಹಕರಿಸಿದ್ದು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಮೊತಿಲಾಲ್ ಚೌದರಿರವರು ಸಾಕ್ಷಿಗಳನ್ನು ಸಾಕ್ಷಿ ವಿಚಾರಣೆ ಮಾಡಿ ವಾದ ಮಂಡಿಸಿರುತ್ತಾರೆ.

    Continue Reading

    LATEST NEWS

    Trending