ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಸೋಮವಾರ ನಡೆದಿದೆ.
ಕಾರ್ಕಳ : ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಸೋಮವಾರ ನಡೆದಿದೆ.
ಮೃತಪಟ್ಟವರನ್ನು ರತ್ನಾವತಿ ನಾಯಕ್ (85) ಎಂದು ಗುರುತಿಸಲಾಗಿದೆ.
ಇವರ ಕಿರಿಯ ಮಗ ನಿನ್ನೆ ಸಂಜೆ ವೇಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಇದೇ ನೋವಿನಿಂದ ರತ್ನಾವತಿ ನಾಯಕ್ ಅವರು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಮಗ ಚಂದ್ರಶೇಖರ್ ನಾಯಕ್ ನೀಡಿದ ದೂರಿನಂತೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.