ಉಡುಪಿ ಜಿಲ್ಲೆಯ ಕಾರ್ಕಳದ ಮನೆಯೊಂದರಿಂದ ಚಿನ್ನಾಭರಣ, ನಗದು ಹಣ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳದ ಮನೆಯೊಂದರಿಂದ ಚಿನ್ನಾಭರಣ, ನಗದು ಹಣ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ಮಾರುತಿ ನಗರದ ಚಂದ್ರಗೌಡ ಪಾಟೀಲ್ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರಿಂದ ಬಂಧಿತನಾದ ಆರೋಪಿಯಾಗಿದ್ದಾನೆ.
ಆತನಿಂದ ಐದೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ವಶಪಡಿಸಿದ್ದಾರೆ.
ಎಸ್ಪಿ ಅಕ್ಷಯ ಹಾಕೆ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ರಾಘವೇಂದ್ರ ಭಟ್ ಎಂಬವರ ಮನೆಯ ಕಪಾಟಿನ ಬಾಗಿಲನ್ನು ಮುರಿದ ಈತ ಸುಮಾರು ಐದೂವರೆ ಲಕ್ಷ ಬೆಲೆಬಾಳುವ ಚಿನ್ನದ ಆಭರಣಗಳು ಮತ್ತು ನಗದು 5500 ದೋಚಿ ಪರಾರಿಯಾಗಿದ್ದ.
ಈ ಬಗ್ಗೆ ಅವರು ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಆಧಾರಿಸಿ ಕಾರ್ಕಳ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಚಿನ್ನಾಭರಣದೊಂದಿಗೆ ಬಂಧಿಸಿದ್ದಾರೆ.