Connect with us

DAKSHINA KANNADA

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಕಾರ್ಕಳ ಎಸೈ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

Published

on

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ ಎಂಬವರಿಗೆ ಕಾರ್ಕಳ ನಗರ ಪೊಲೀಸ್ ಠಾಣಾ ಎಸ್ಸೈ ಮಧು ಹಲ್ಲೆ ನಡೆಸಿದ್ದಾಗಿ ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸದ್ಯ ಗಾಯಾಳು ರಾಧಾಕೃಷ್ಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಡುಪಿ ಪೊಲೀಸ್‌ ಅಧೀಕ್ಷಕ ಎನ್‌.ವಿಷ್ಣುವರ್ಧನ್‌ ತನಿಖೆಗೆ ಆದೇಶಿಸಿದ್ದಾರೆ.

2020 ಆಗಸ್ಟ್‌ನಲ್ಲಿ ಕಾರ್ಕಳ ನಗರದ ಹಿಂದೂಜಾಗರಣ ವೇದಿಕೆ ಗುಂಡಾಜೆ ಘಟಕದ ಅಧ್ಯಕ್ಷ ಸಂದೀಪ್‌ ಎನ್ನುವವರು ಫೇಸ್‌ಬುಕ್‌ನಲ್ಲಿ ಯೋಧರು ಹಾಗೂ ಭಾರತೀಯ ಸೇನೆಯ ಯೋಧರನ್ನು ಅವಮಾನಿಸಿದ್ದಾರೆ ಎಂದು ರಾಧಾಕೃಷ್ಣ ಅವರ ವಿರುದ್ಧ ಕಾರ್ಕಳ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಾಧಾಕೃಷ್ಣ ಅವರನ್ನು ವಿಚಾರಣೆಗೆ ಕಾರ್ಕಳ ಪೊಲೀಸರು ಕರೆಸಿಕೊಂಡಿದ್ದರು. ಆದರೆ ರಾಧಾಕೃಷ್ಣ ಅವರು ನಿರಂತರ 11 ತಿಂಗಳು ವಿಚಾರಣೆಗೆ ಹಾಜರಾಗಿರಲಿಲ್ಲ ಎನ್ನಲಾಗಿದೆ. ಜೊತೆಗೆ ತನ್ನ ಹೆಸರಿನಲ್ಲಿ ನಕಲಿ ಅಕೌಂಟ್ ಮಾಡಿ ಈ ಪೋಸ್ಟ್ ಹಾಕಲಾಗಿದೆ ಎಂದು ರಾಧಾಕೃಷ್ಣ ವಾದಿಸುತ್ತಾ ಬಂದಿದ್ದರು.

ದೂರು ನೀಡಿದ ವೇಳೆ ಉದ್ಯೋಗ ನಿಮಿತ್ತ ರಾಧಾಕೃಷ್ಣ ಬೆಂಗಳೂನಲ್ಲಿದ್ದರು. ತನ್ನ ವಿರುದ್ಧ ದೂರು ಬಂದ ವಿಚಾರ ಗಮನಕ್ಕೆ ಬಂದ ವೇಳೆ ಬೆಂಗಳೂರು ಉತ್ತರ ಗಂಗಮ್ಮ ನ ಗುಡಿ ಪೊಲೀಸ್ ಠಾಣೆಯಲ್ಲಿ ತನ್ನ ಹೆಸರಿನ ಫೇಕ್ ಐಡಿ ಮೂಲಕ ಕಿಡಿಗೇಡಿಗಳು ಮಾಡಿದ ಪೋಸ್ಟ್ ಇದಾಗಿದೆ ಎಂದು ಹಾಗೂ ಇದರ ವಿರುದ್ದ ಕ್ರಮ ಕೈಗೊಳ್ಳುವಂತೆ 2020ರ ಆಗಸ್ಟ್ ನಲ್ಲಿ ರಾಧಾಕೃಷ್ಣ ಅವರು ದೂರು ನೀಡಿದ್ದರು.

ಇತ್ತೀಚೆಗೆ ಬೆಂಗಳೂರಿನಿಂದ ಊರಿಗೆ ವಾಪಸಾಗಿದ್ದ ರಾಧಾಕೃಷ್ಣ ಅವರನ್ನು ತನಿಖೆಗೆ ಬರುವಂತೆ ಪೊಲೀಸರು ಸೂಚಿಸಿದ್ದರು. ಅದರಂತೆ ತನಿಖೆಗೆ ಹಾಜರಾದ ವೇಳೆ ಎಸ್ಐ ಮಧು ಅವರು ತನ್ನ ಹಲ್ಲೆ ನಡೆಸಿದ್ದಾಗಿ ರಾಧಾಕೃಷ್ಣ ದೂರಿದ್ದಾರೆ. ವರ್ಷದಷ್ಟು ಹಳೆಯ ಪೋಸ್ಟಿಗೆ ಮತ್ತೆ ಠಾಣೆಗೆ ಕರೆಸಿಕೊಂಡು, ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‌ ಮೂಲಕ ತನಿಖೆಗೆ ಆಗ್ರಹ

ಎರಡು ಬಾರಿ ಹೃದಯಾಘಾತವಾಗಿ ಸ್ಟಂಟ್‌ ಅಳವಡಿಸಿದ್ದರು. ಆದರೂ ಹಲ್ಲೆ ನಡೆಸಿರುವುದು ಅಮಾನವೀಯ ಎಂದು ಕಾಂಗ್ರೆಸ್ ನಾಯಕರು ಆಕ್ಷೇಪಿಸಿದ್ದಾರೆ. ಸದ್ಯ ರಾಧಾಕೃಷ್ಣ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಶಾಸಿ ಶಕುಂತಳಾ ಶೆಟ್ಟಿ, ಮಿಥುನ್‌ ರೈ ಟ್ವೀಟ್ ಮಾಡಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

ತನಿಖೆಗೆ ಆದೇಶಿಸಿದ ಎಸ್‌ಪಿ

ಈ ಘಟನೆಯ ಕುರಿತು ಈಗಾಗಲೇ ತನಿಖೆಗೆ ಆದೇಶಿಸಿದ್ದು, ಡಿವೈಎಸ್ಪಿ ಶ್ರೀಕಾಂತ್ ಅವರಿಗೆ ತನಿಖಾ ವರದಿ ಸಲ್ಲಿಸುವಂತೆ ಹೇಳಿದ್ದೇನೆ. ಇದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

DAKSHINA KANNADA

ಪುತ್ತೂರಿನಲ್ಲಿ ಕಳವುಗೈದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ..!

Published

on

ಪುತ್ತೂರು: ಅಂತರ್‌ ಜಿಲ್ಲಾ ಕಳವು ಪ್ರಕರಣದ ಕುಖ್ಯಾತ ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಚಿಕ್ಕಮಂಗಳೂರು ತಾಲೂಕಿನ ಉಪ್ಪಳ್ಳಿ ಮನೆ ನಿವಾಸಿಯಾಗಿದ್ದು, ಆತನ ಮೇಲೆ ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ 80 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ 2023 ರಲ್ಲಿಯೇ ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಡಿಸೆಂಬರ್‌ 19 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BANTWAL

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

Published

on

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ ಸ್ಟೆಬಲ್‌ ಗಣೇಶ್ ಪ್ರಸಾದ್ ಮತ್ತು ಕಾನ್‌ ಸ್ಟೆಬಲ್‌ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Continue Reading

DAKSHINA KANNADA

ಮಂಗಳೂರಿನಲ್ಲಿ ಮೂರು ದಿನ ನೀರು ಪೂರೈಕೆ ವ್ಯತ್ಯಯ

Published

on

ಮಂಗಳೂರು: ಮಂಗಳೂರು ಮಹಾ ನಗರಪಾಲಿಕೆಯು ನೀರು ಸರಬರಾಜು ವ್ಯವಸ್ಥೆಯ ಕೊಳವೆಯನ್ನು ಬಲಪಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ. 6 ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಡಿ. 8 ರ ಶುಕ್ರವಾರ ಬೆಳಗ್ಗೆ 6 ಗಂಟೆಯ ವರೆಗೆ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ವ್ಯತ್ಯಯಗೊಳ್ಳಲಿದೆ ಎಂದು ಪಾಲಿಕೆಯ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ತಿಳಿಸಿದ್ದಾರೆ.

ತುಂಬೆ- ಬೆಂದೂರ್‌ವೆಲ್–ಪಣಂಬೂರು ಪ್ರದೇಶಗಳಿಗೆ ನೀರು ಪೂರೈಸುವ 1 ಸಾವಿರ ಮಿಲಿ ಮೀಟರ್ ವ್ಯಾಸದ ಮುಖ್ಯ ಕೊಳವೆಯನ್ನು ನಾಗುರಿ ಮಾರುಕಟ್ಟೆ ಬಳಿ ಬಲಪಡಿಸುವುದು, ತುಂಬೆ ರಾಮಲ್‌ಕಟ್ಟೆ ಬಳಿ ಕೆಯುಐಡಿಎಫ್‌ಸಿ ವತಿಯಿಂದ ಬಲ್ಕ್‌ ಫ್ಲೋ ಮೀಟರ್‌ ಅಳವಡಿಕೆ ಹಾಗೂ ಪಾಲಿಕೆ ವತಿಯಿಂದ 900 ಮಿ.ಮೀ ವ್ಯಾಸದ ಕೊಳವೆಯನ್ನು ಕೆಐಒಸಿಎಲ್‌ ಬಳಿ ಬದಲಾಯಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮಂಗಳೂರಿನ ಬೆಂದೂರ್‌ವೆಲ್‌ಗಿಂತ ತಗ್ಗಿನಲ್ಲಿರುವ ಪ್ರದೇಶಗಳಾದ ಪಿ.ವಿ.ಎಸ್, ಲೇಡಿಹಿಲ್, ಬಂದರು ಹಾಗೂ ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್‌ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯು ಭಾಗಶಃ ಸ್ಥಗಿತಗೊಳ್ಳಲಿದೆ. ಕಾನ, ಬಾಳ, ಕುಳಾಯಿ, ಮುಕ್ಕ, ಪಣಂಬೂರು ಪ್ರದೇಶಗಳಿಗೆ ನೀರು ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತ ಮಾಡಲಾಗುತ್ತದೆ ಎಂದವರು ತಿಳಿಸಿದ್ದಾರೆ.

Continue Reading

LATEST NEWS

Trending