Connect with us

    BANTWAL

    BJPಯ ಮೊದಲ ಪಟ್ಟಿ ರಿಲೀಸ್ – ದ. ಕ. ದಲ್ಲಿ 2 ಹೊಸಮುಖ- ಉಡುಪಿಯಲ್ಲಿ ಭಾರಿ ಬದಲಾವಣೆ..!

    Published

    on

    ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಬಿಜೆಪಿ ಸಂಸದೀಯ ಮಂಡಳಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬಿಡುಗಡೆ ಮಾಡಿದೆ.

    ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಬಿಜೆಪಿ ಸಂಸದೀಯ ಮಂಡಳಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬಿಡುಗಡೆ ಮಾಡಿದೆ.

    ದೆಹಲಿಯ ಕೇಂದ್ರ ಕಚೇರಿಯಲ್ಲಿ ಪ್ರಧಾನ ಮಂತ್ರಿ  ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜ್ಯದ ಪಕ್ಷದ ವರಿಷ್ಟರಾದ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಸೇರಿದಂತೆ ಮತ್ತಿತರ ಪ್ರಮುಖರುಗಳೊಂದಿಗೆ ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿ ಅಂತಿಮ ಸುತ್ತಿನ ಸಮಾಲೋಚನೆ ನಡೆಸಿ ಬಳಿಕ ಇಂದು(ಮಂಗಳವಾರ) ರಾತ್ರಿ 9 ಗಂಟೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದರು. ಪಟ್ಟಿ ಬಿಡುಗಡೆಗೂ ಮುನ್ನ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಸುಮಾರು 25 ಸಾವಿರ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ಹೇಳಿದರು.ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭ್ಯರ್ಥಿಗಳ ಹೆಸರುಗಳನ್ನು ಘೊಷಣೆ ಮಾಡಿದರು.

    189 ಅಭ್ಯರ್ಥಿಗಳಲ್ಲಿ 52 ಮಂದಿ ಹೊಸ ಮುಖಗಳಿಗೆ ಈ ಬಾರಿ ಆದ್ಯತೆ ನೀಡಲಾಗಿದೆ.  ಒಬಿಸಿಯ 32 ಮಂದಿಗೆ ಟಿಕೆಟ್ ಘೋಷಿಸಲಾಗಿದೆ. 8 ಮಂದಿ ಮಹಿಳೆಯರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪೈಕಿ 5 ಮಂದಿ ಶಿಕ್ಷಕರು, 52 ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. 9 ಡಾಕ್ಟರ್‌ಗಳು, 1 ನಿವೃತ್ತ ಐಎಎಸ್ ಅಧಿಕಾರಿ, 1 ನಿವೃತ್ತ ಐಪಿಎಸ್ ಅಧಿಕಾರಿಗಳು, 31 ಪದವೀಧರರು ಹಾಗೂ 8 ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ.

    ಉಡುಪಿಯಲ್ಲಿ ರಘೂಪತಿ ಭಟ್‌ಗೆ ಕೋಕ್- ಯಶ್‌ಪಾಲ್‌ಗೆ ಲಕ್..!

    ಕರಾವಳಿಯಲ್ಲಿ ಭಾರಿ ಬದಲಾವಣೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಕುಂದಾಪುರ ಕ್ಷೇತ್ರದಿಂದ ಹೊಸ ಮುಖ ಕಿರಣ್‌ ಕುಮಾರ್‌ ಕೋಡ್ಗಿ, ಉಡುಪಿ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿದ್ದ ರಘುಪತಿಭಟ್ ಬದಲಿಗೆ ಯಶ್ಪಾಲ್‌ ಸುವರ್ಣ, ಕಾಪು ಕ್ಷೇತ್ರದಲ್ಲಿ ಲಾಲಾಜಿ ಮೆಂಡನ್ ಬದಲಿಗೆ ಸುರೇಶ್‌ ಶೆಟ್ಟಿ ಗುರ್ಮೆ, ಕಾರ್ಕಳ ಕ್ಷೇತ್ರದಲ್ಲಿ ಹಾಲಿ ಶಾಸಕ ಸುನೀಲ್‌ ಕುಮಾರ್‌ಗೆ ಅವಕಾಶ ನೀಡಲಾಗಿದೆ. ಬೈಂದೂರು ಕಾದಿಸಲಾಗಿದೆ.

    ದಕ್ಷಿಣ ಕನ್ನಡದ ಪುತ್ತೂರು ಮತ್ತು ಸುಳ್ಯದಲ್ಲಿ ಭಾರಿ ಶಾಕ್ :  ಸುಳ್ಯ ಮತ್ತು ಪುತ್ತೂರಿನಲ್ಲಿ ಮಹಿಳಾ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಹಾಲಿ ಶಾಸಕ ಹರೀಶ್‌ ಪೂಂಜಾ, ಮಂಗಳೂರು ಉತ್ತರದಿಂದ ಹಾಲಿ ಶಾಸಕ ವೈ ಭರತ್‌ ಶೆಟ್ಟಿ, ದಕ್ಷಿಣದಿಂದ ವೇದವ್ಯಾಸ್‌ ಕಾಮತ್‌, ಉಳ್ಳಾಲದಲ್ಲಿ ಸತೀಶ್‌ ಕುಂಪಲ, ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ, ಸುಳ್ಯ ಕ್ಷೇತ್ರದಿಂದ ಶ್ರೀಮತಿ ಭಾಗೀರತಿ ಮುರುಳ್ಯ ಅವರಿಗೆ ಅವಕಾಶ ನೀಡಲಾಗಿದೆ.

    ಶಿಗ್ಗಾವಿ –ಬಸವರಾಜ ಬೊಮ್ಮಾಯಿ,ಗೋಕಾಕ್ –ರಮೇಶ್ ಜಾರಕಿಹೊಳಿ,ರಾಯಭಾಗ- ದುರ್ಯೋಧನ ಐಹೊಳೆ,ಹುಕ್ಕೇರಿ – ನಿಖಿಲ್ ಕತ್ತಿ

    ನಿಪ್ಪಾಣಿ –ಶಶಿಕಲಾ ಜೊಲ್ಲೆ,ಬೆಳಗಾವಿ ದಕ್ಷಿಣ –ಅಭಯ ಪಾಟೀಲ್,ಬೆಳಗಾವಿ ಉತ್ತರ –ರವಿ ಪಾಟೀಲ್,ಬೆಳಗಾವಿ ಗ್ರಾಮಾಂತರ –

    ಅಥಣಿ – ಮಹೇಶ್ ಕುಮಟಳ್ಳಿ,ಕಾಗವಾಡ – ಶ್ರೀಮಂತ್ ಪಾಟೀಲ್,ಖಾನಾಪುರ –ವಿಠ್ಠಲ ಹಲಗೇಕರ್,ಕಿತ್ತೂರ್ –ಮಹಾಂತೇಶ್ ಗೌಡರ್

    ಬೈಲಹೊಂಗಲ –ಜಗದೀಶ್ ಚೆನ್ನಪ್ಪ,ಸವದತ್ತಿ ಯಲ್ಲಮ್ಮ – ರತ್ನ ವಿಶ್ವನಾಥ್ ಮಾಮನಿ,ಬೆಳಗಾವಿ ಉತ್ತರ –ರವಿ ಪಾಟೀಲ್,ಅರಬಾವಿ –ಬಾಲಚಂದ್ರ ಜಾರಕಿಹೊಳಿ,ತೇರದಾಳ –ಸಿದ್ದು ಸವದಿ,ಬದಾಮಿ –ಶಾಂತಗೌಡ ಪಾಟೀಲ್,,ಕುಡಚಿ –ಪಿ. ರಾಜೀವ್,ಬಬಲೇಶ್ವರಿ –ವಿಜುಗೌಡ ಪಾಟೀಲ್,ವಿಜಯಪುರ ನಗರ – ಯತ್ನಾಳ್,ಅಫ್ಜಲಪುರ –ಮಾಲೀಕಯ್ಯ ಗುತ್ತೇದಾರ್,ಜೇವರ್ಗಿ –ಶಿವಾನಂದ ಗೌಡ ಪಾಟೀ ಲ್ ಶಹಾ ಪುರ –ರಾಜೂ ಗೌಡ (ನರಸಿಂಹ ನಾಯಕ್),ಗುಲ್ಬರ್ಗಾ ಗ್ರಾಮೀಣ – ಬಸವರಾಜ,ಕಲಬುರಗಿ ಉತ್ತರ –ಚಂದ್ರಕಾಂತ್ ಪಾಟೀಲ್

    ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವೀಯ, ರಾಜ್ಯ ಬಿಜೆಪಿ ಸಹ ಚುನಾವಣಾ ಉಸ್ತುವಾರಿ ಕೆ.ಅಣ್ಣಾ ಮಲೈ, ಕೇಂದ್ರ ಗಣಿ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.

     

     

     

     

     

     

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending