DAKSHINA KANNADA
ಕರ್ನಾಟಕ ವಿಧಾನ ಸಭಾ ಚುನಾವಣೆ ದಿನಾಂಕ ಘೋಷಣೆ -ಮೇ 10ಕ್ಕೆ ಮತದಾನ, 13ಕ್ಕೆ ಮತ ಎಣಿಕೆ..!
Published
2 years agoon
By
Adminನವದೆಹಲಿ : ಬಹು ನಿರೀಕ್ಷಿತ ಕರ್ನಾಟಕ ವಿಧಾನ ಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ರಾಜ್ಯದಲ್ಲಿನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಕ್ರೀಯೆಯ ಸಂಪೂರ್ಣ ಮಾಹಿತಿ ನೀಡಿದರು. ಮೇ 10ಕ್ಕೆ ಮತದಾನ, 13ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು ಒಂದೇ ಹಂತದಲ್ಲಿ ರಾಜ್ಯ ಚುನಾವಣೆ ನಡೆಯಲಿದೆ ಎಂದರು.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಮತದಾನ ನಡೆಯಲಿದೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ಮೇ 10ರ ಬುಧವಾರದಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರದಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಈ ಬಾರಿ 52173579 ಮತದಾನಕ್ಕೆ ಅರ್ಹರಾಗಿದ್ದಾರೆ. ಅಂದರೆ ಕರ್ನಾಟಕದಲ್ಲಿ 5 ಕೋಟಿ 59 ಲಕ್ಷ ಮತದಾರರಿದ್ದಾರೆ.2,62,42,561 ಪುರುಷ ಮತದಾರರು ಇದ್ದರೆ, 2, 59, 26,319 ಮಹಿಳಾ ಮತದಾರರು ಮತ್ತು
555073 ವಿಕಲ ಚೇತನರು ಹಾಗೂ 4,699 ಸಲಿಂಗ ಮತದಾರರಿದ್ದಾರೆ. 18-19 ವರ್ಷದ ಮತದಾರರು 9,17, 241 ಇದ್ದಾರೆ. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇದೇ ಮೊದಲ ಬಾರಿ ವಿಕಲ ಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಇವರು ಮೊದಲೇ ಚುನಾವಣಾ ಆಯೋಗದಲ್ಲಿ ನೋಂದಾಯಿಸಿಕೊಳ್ಳಬೇಕು,ಚುನಾವಣಾ ಅಧಿಕಾರಿಗಳು ಮನೆ ಬಾಗಿಲಿಗೇ ಬರಲಿದ್ದಾರೆ ಮುಖ್ಯ ಚುನಾವಣಾ ಆಯುಕ್ತರು ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 24,063 ಮತಗಟ್ಟೆಗಳ ಸ್ಥಾಪನೆ, ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆ, ಮಹಿಳಾ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆಗಳ ಸಂಖ್ಯೆ 1,320, 224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ.
ಚುನಾವಣಾ ಅಕ್ರಮ ತಡೆಯಲು 2,400 ವಿಚಕ್ಷಣ ತಂಡ ನಿಯೋಜನೆ ಮಾಡಲಾಗಿದೆ. 9 ಗಡಿಜಿಲ್ಲೆಗಳಲ್ಲಿ 171 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಬ್ಯಾಂಕ್ ವ್ಯವಹಾರಗಳ ಮೇಲೂ ಕಣ್ಣು ಇಡಲಾಗಿದೆ. 2,016 ಫ್ಲೈಯಿಂಗ್ ಸ್ಕ್ಯಾಂಡ್ಸ್ ನಿರ್ಮಾಣ ಮಾಡಲಾಗಿದ್ದು ಜೊತೆಗೆ
ಅಬಕಾರಿ ಅಧಿಕಾರಿಗಳಿಂದ 24 ಗಂಟೆ ಹದ್ದಿನ ಕಣ್ಣು ಇರಲಿದೆ. ಎಲ್ಲಾ ವಿಮಾನ ನಿಲ್ದಾಣ, ಬಂದರು, ಹೆದ್ದಾರಿಗಳಲ್ಲಿ ಹದ್ದಿನ ಕಣ್ಣು ಇಡಲಿದೆ. ಎಲ್ಲಾ ನಗರ, ಜಿಲ್ಲಾ ಕೇಂದ್ರಗಳ ಗೋದಾಮುಗಳ ಮೇಲೆ ನಿಗಾ ಇಡಲಾಗುತ್ತೆ. ಬ್ಯಾಂಕ್ ವಹಿವಾಟಿನ ಮೇಲೆ ಚುನಾವಣಾ ಆಯೋಗ ನಿಗಾ ಇಡಲಿದೆ. ಹಣದ ವ್ಯವಹಾರ, ಮದ್ಯ ಸಾಗಣೆ ಮೇಲೆ ನಿಗಾ ವಹಿಸಲಾಗುವುದು. ಮತದಾರರಿಗೆ ಗಿಫ್ಟ್ ಹಂಚಿಕೆ, ಹಣ ಹಂಚುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತೆ. ಮತದಾರರಿಗೆ ಆಮಿಷವೊಡ್ಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಲಾಗುತ್ತೆ ಎಂದು ಎಚ್ಚರಿಸಿದರು.
ಚುನಾವಣೆ ನೀತಿ ಸಂಹಿತೆ (Code of Conduct) ಜಾರಿಯಾಗಿದ್ದರಿಂದ ರಾಜ್ಯ ಸರ್ಕಾರ ಮಂತ್ರಿ ಮಂಡಲ ವಿಸರ್ಜನೆಗೊಂಡಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಪ್ರವಾಸಗಳನ್ನು ರದ್ದು ಮಾಡಿದ್ದಾರೆ. ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಗಳು ರದ್ದುಗೊಳ್ಳಲಿವೆ. ಇನ್ನು ಈ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆ ರಾಜ್ಯ ಪ್ರವಾಸ ರದ್ದುಗೊಳಿಸುತ್ತಿದ್ದೇನೆ. ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೇನೆ ಎಂದು ಹೇಳಿದ್ದಾರೆ.
You may like
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
10 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
bangalore
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
Published
11 hours agoon
21/11/2024By
NEWS DESK3ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
DAKSHINA KANNADA
ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
Published
13 hours agoon
21/11/2024By
NEWS DESK3ಮಂಗಳೂರು/ಮಧ್ಯಪ್ರದೇಶ: ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಜತ್ ಪಾಟಿದಾರ್ ಅವರಿಗೆ ನಾಯಕತ್ವ ಒದಗಿ ಬಂದಿದೆ.
ರಜತ್ ಪಟಿದಾರ್ ಆರ್ ಸಿಬಿ ತಂಡದಲ್ಲಿ ಪ್ರಮುಖ ಆಟಗಾರ ಹಾಗೂ ಈ ಬಾರಿ ತಂಡ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದೀಗ ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ರಜತ್ ಪಾಟಿದಾರ್ ಗೆ ರಾಜ್ಯ ತಂಡದ ನಾಯಕತ್ವ ನೀಡಲಾಗಿದೆ.
ನವೆಂಬರ್ 23 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ 15 ಸದಸ್ಯರ ಮಧ್ಯಪ್ರದೇಶ ತಂಡವನ್ನು ಘೋಷಿಸಲಾಗಿದೆ.
ಇದನ್ನು ಓದಿ: ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ
ಮಧ್ಯಪ್ರದೇಶ ತಂಡದ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಒಂದು ವೇಳೆ ಮುಂಬರುವ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ ತಂಡವು ಫೈನಲ್ ಗೆ ತಲುಪಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ರೇಸ್ ನಲ್ಲಿ ರಜತ್ ಪಾಟಿದಾರ್ ಕೂಡ ತೀವ್ರ ಪೈಪೋಟಿ ಕೊಡಲಿದ್ದಾರೆ.
ಆರ್ ಸಿಬಿ ಪರ 24 ಇನ್ನಿಂಗ್ಸ್ ಆಡಿರುವ ರಜತ್ ಪಾಟಿದಾರ್ 1 ಶತಕ 7 ಅರ್ಧಶತಕಗಳೊಂದಿಗೆ ಒಟ್ಟು 799 ರನ್ ಕಲೆಹಾಕಿದ್ದಾರೆ. ಈಗಗಾಲೇ ಆರ್ ಸಿ ಬಿ ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ತಂಡದಿಂದ ಹೊರಬಿದಿದ್ದಾರೆ. ಇದರಿಂದ ನಾಯಕತ್ವ ಯಾರ ಪಾಲಾಗಲಿದೆ ಎಂಬುವುದು ತ್ರೀವ್ರ ಕುತೂಹಲ ಮೂಡಿಸಿದೆ.
LATEST NEWS
‘ಓಲಾ ಎಲೆಕ್ಟ್ರಿಕ್ ಕಂಪನಿ’ಯಿಂದ 500 ಉದ್ಯೋಗಿಗಳು ವಜಾ
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
ನೀವು ಹೀಗೆ ಮಾಡಿದ್ರೆ ‘ಗೂಗಲ್ ಪೇ’ನಲ್ಲಿ ಸುಲಭವಾಗಿ 1,000 ರೂಪಾಯಿ ಪಡೆಯಬಹುದು
ತಾಯಂದಿರಿಂಲೇ ಮಕ್ಕಳ ಅ*ಪಹರಣ; ಉದ್ದೇಶ ಕೇಳಿದ್ರೆ ನೀವೆ ಶಾಕ್ ಆಗ್ತೀರ !!
ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ
Trending
- LATEST NEWS1 day ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS3 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS1 day ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ