Connect with us

    DAKSHINA KANNADA

    ನಾಳೆ (ಮೇ10) ರಂದು ಕರ್ನಾಟಕ ವಿಧಾನಸಭೆ ಚುನಾವಣೆ : ವ್ಯವಸ್ಥೆಗಳೇನು…!?

    Published

    on

    10ರಂದು ಅಂದ್ರೆ ನಾಳೆ ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ.  ಪ್ರಜಾಪ್ರಭುತ್ವದ ಮಹಾಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ.

    ಬೆಂಗಳೂರು :  10ರಂದು ಅಂದ್ರೆ ನಾಳೆ ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ.  ಪ್ರಜಾಪ್ರಭುತ್ವದ ಮಹಾಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ.

    ಕರ್ನಾಟಕ ಚುನಾವಣೆ: ಮತದಾನ ಕೇಂದ್ರಗಳು ಹಾಗೂ ಮತದಾರರ ಸಂಖ್ಯೆ

    ಕರ್ನಾಟಕದಲ್ಲಿ ಈ ಬಾರಿ 5.24 ಕೋಟಿ ಮತದಾರರು ಮತಚಲಾಯಿಸಲಿದ್ದಾರೆ. ಈ ಪೈಕಿ 2.63 ಕೋಟಿ ಪುರುಷರು ಮತ್ತು 2.60 ಕೋಟಿ ಮಹಿಳೆಯರು. 100 ವರ್ಷ ದಾಟಿರುವ 16,976 ಮತದಾರರಿದ್ದರೆ, 18ರಿಂದ 19 ವರ್ಷದ ಯುವ ಮತದಾರರ ಸಂಖ್ಯೆ 9.58 ಲಕ್ಷ. 80 ವರ್ಷ ದಾಟಿದವರ ಸಂಖ್ಯೆಯೂ (12.15 ಲಕ್ಷ) ಗಣನೀಯ ಪ್ರಮಾಣದಲ್ಲಿದೆ.

    ರಾಜ್ಯದಲ್ಲಿ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಮತಗಟ್ಟೆಗೆ ಸರಾಸರಿ ಮತದಾರರನ್ನು 883 ಎಂದು ನಿಗದಿಪಡಿಸಲಾಗಿದೆ. ಒಟ್ಟು 1,320 ಮತಗಟ್ಟೆಗಳನ್ನು ಮಹಿಳಾ ಅಧಿಕಾರಿಗಳು ನಿರ್ವಹಿಸುತ್ತಾರೆ.

    ಇವುಗಳನ್ನು ‘ಪಿಂಕ್ ಬೂತ್’ಗಳೆಂದು ಗುರುತಿಸಲಾಗಿದೆ. ಇನ್ನು 5.24 ಕೋಟಿಗೂ ಅಧಿಕ ಮತದಾರರಲ್ಲಿ ಸುಮಾರು 5.60 ಲಕ್ಷಕ್ಕೂ ಹೆಚ್ಚಿನ ಮಂದಿ ವಿಶೇಷ ಚೇತನರಿದ್ದಾರೆ.

    ಮೇ10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ
    ಕರ್ನಾಟಕ ಚುನಾವಣೆಯಲ್ಲಿ ಸರಕಾರಿ ಮತ್ತು ಕೈಗಾರಿಕಾ ನೌಕರರಿಗೆ ಸೇರಿದಂತೆ ಎಲ್ಲಾ ಕನ್ನಡಿಗರಿಗೂ ಗೋವಾ ಸರಕಾರ ವೇತನ ಸಹಿತ ರಜೆ ಘೋಷಿಸಿದೆ.

    ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಅಲ್ಲಿನ ಈ ಸರಕಾರ ಈ ನಿರ್ಧಾರ ಕೈಗೊಂಡಿದ್ದು, ಪ್ರತಿಪಕ್ಷಗಳು ಟೀಕಿಸಿವೆ.

    ಮತ ಹಾಕದೆ ಪ್ರವಾಸಿ ತಾಣಕ್ಕೆ ಹೋಗುವಂತಿಲ್ಲ

    ನಾಳೆ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯ ರಜೆಯನ್ನು ಪ್ರವಾಸಕ್ಕೆ ಹೋಗಲು ಬಳಸುವವರಿಗೆ ಕಡಿವಾಣ ಹಾಕಲು ಕ್ರಮಕೈಗೊಳ್ಳಲಾಗಿದೆ.

    ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹಾಕಲಾಗಿದ್ದು, ಮತ ಚಲಾಯಿಸದೆ ಹೋಗುವಂತಿಲ್ಲ.

    ಮತ ಹಾಕಿದವರಿಗೆ ಮಾತ್ರ ಪ್ರವಾಸ ಕೈಗೊಳ್ಳಲು ಅವಕಾಶ ನೀಡಲು ಮೈಸೂರು ಜಿಲ್ಲಾ ಟ್ರ್ಯಾವಲ್ಸ್ ಮಾಲೀಕರು ನಿರ್ಧರಿಸಿದ್ದಾರೆ.

    ಮತದಾರರಿಗೆ ತಮ್ಮೂರಿಗೆ ತೆರಳಿ ಮತದಾನ ಮಾಡಲು ಹೆಚ್ಚುವರಿ ರೈಲು, ಹೆಚ್ಚುವರಿ ಕೋಚ್‌ ವ್ಯವಸ್ಥೆ

    ವಿವಿಧ ರಾಜ್ಯಗಳು, ವಿವಿಧ ನಗರಗಳಿಂದ ತಮ್ಮ ಮತಗಟ್ಟೆಗಳಿಗೆ ಆಗಮಿಸುವವರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್‌, ಹೆಚ್ಚುವರಿ ರೈಲು, ಹೆಚ್ಚುವರಿ ರೈಲು ಕೋಚುಗಳ ವ್ಯವಸ್ಥೆಯನ್ನು ಮಾಡಲಾಗಿದೆ.

    ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದೆ. ಇದರೊಂದಿಗೆ ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್‌ಗಳನ್ನು ಅಳವಡಿಸಲಾಗುತ್ತಿದೆ.

    ಬೆಂಗಳೂರು-ಹುಬ್ಬಳ್ಳಿ ಜನಶತಾಬ್ಧಿ ಎಕ್ಸ್​​ಪ್ರೆಸ್​, ಬಾಗಲಕೋಟೆ, ಮೈಸೂರು, ಬಸವ ಎಕ್ಸ್​​ಪ್ರೆಸ್, ಬೆಂಗಳೂರು ನಾಂದೇಡ್ ವಯಾ ರಾಯಚೂರು, ಯಾದಗಿರಿ ರೈಲು, ಬೆಂಗಳೂರು-ಕಾರವಾರ ರೈಲಿಗೆ ಹೆಚ್ಚುವರಿ ಕೋಚ್‌ಗಳನ್ನು ಅಳವಡಿಸಲಾಗಿದೆ.

    ಬೆಂಗಳೂರು ಹಾಗೂ ಬೆಳಗಾವಿ ನಡುವೆ ಹುಬ್ಬಳ್ಳಿ ಮಾರ್ಗವಾಗಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

    ಬೆಂಗಳೂರಿನಿಂದ ಬೀದರ್​ಗೆ ಕಲಬುರಗಿ ಮಾರ್ಗವಾಗಿ ರೈಲು ವ್ಯವಸ್ಥೆ ಮಾಡಲಾಗಿದೆ. . ಬೆಂಗಳೂರಿನಿಂದ (ಯಶವಂತಪುರ) ಮುರುಡೇಶ್ವರಕ್ಕೆ ವಿಶೇಷ ರೈಲು ಪ್ರಯಾಣಿಸಲಿದೆ ಎಂದು ವರದಿಗಳು ತಿಳಿಸಿವೆ.

    Click to comment

    Leave a Reply

    Your email address will not be published. Required fields are marked *

    Baindooru

    ಕದ್ರಿ ಪಾರ್ಕ್‌ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್‌ನಿಂದ ಲಾಂಛನ ಬಿಡುಗಡೆ

    Published

    on

    ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಶರಧಿ ಪ್ರತಿಷ್ಟಾನವು ಆಯೋಜಿಸುವ ‘ ಕಲಾ ಪರ್ಬ ‘ ಇದರ ಲಾಂಛನ ಮತ್ತು ಕರಪತ್ರವನ್ನು ಇಂದು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಬಿಡುಗಡೆ ಗೊಳಿಸಿದರು.

    ಕಲಾವಿದರೆಲ್ಲರನ್ನೂ ಒಗ್ಗೂಡಿಸಿ ವಿವಿಧ ಕಲಾ ಪ್ರಕಾರಗಳನ್ನು ಒಂದೇ ಕಡೆ ಅಭಿವ್ಯಕ್ತ ಪಡಿಸುವ ಮತ್ತು ಇದರ ಮೂಲಕ ಕಲಾ ಕ್ಷೇತ್ರ ಇನ್ನಷ್ಟು ವಿಕಸನವಾಗುವ ಉದ್ದೇಶವನ್ನು ಇಟ್ಟುಕೊಂಡು ಈ ಕಲಾ ಪರ್ಬವನ್ನು ಆಯೋಜಿಸಲಾಗುತ್ತಿದೆ. ಇಲ್ಲಿ ಮೂರ್ತ – ಅಮೂರ್ತ, ಹಿರಿಯ – ಕಿರಿಯ ಎಂಬ ಯಾವುದೇ ಅಂತರ, ಬೇಧ ಇಲ್ಲದೇ ಎಲ್ಲಾ ಕಲಾವಿದರು ತಮ್ಮ ಕಲಾ ಪ್ರಕಾರಗಳನ್ನು ಕಲಾ ವೀಕ್ಷಕರಿಗೆ, ಕಲಾಭಿಮಾನಿಗಳಿಗೆ ಕಲಾಕೃತಿಗಳ ಪ್ರದರ್ಶನ, ಮಾರಾಟ ಮತ್ತು ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸುವುದು ಪ್ರಮುಖವಾಗಿರುತ್ತದೆ. ಚಿತ್ರ ಕಲೆ, ಶಿಲ್ಪಕಲೆ ಮತ್ತು ನೃತ್ಯ ಪ್ರಕಾರಗಳ ವಿವಿಧ ರೂಪಗಳ ಅಭಿವ್ಯಕ್ತ ಹರಿವು, ಸೆಳವುಗಳ ಮೂಲಕ ಮೇಳದ ರೂಪದಲ್ಲಿ ಇಲ್ಲಿ ಆಗುತ್ತಿರುವುದು ಕಲಾ ಸಂಭ್ರಮ ಮತ್ತು ಕಲಾ ಜಂಗಮ.

    ಸುಮಾರು 200 ಮಳಿಗೆಗಳಲ್ಲಿ ಕಲಾಕೃತಿ, ಛಾಯಾ ಚಿತ್ರ 30 ಮಳಿಗೆಗಳಲ್ಲಿ ಶಿಲ್ಪ ಕಲಾ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಇರುವುದು. ಕಲಾಕೃತಿಗಳನ್ನು ಮಿತ ದರದಲ್ಲಿ ಖರೀದಿಸುವವರಿಗೆ ಉತ್ತಮ ಅವಕಾಶವಿದು.

    ಲಾಂಛನದ ಅರ್ಥ :

    ಈ ಕಲಾಪರ್ಬದ ಲಾಂಛನವು ಒಂದು ಸಂದೇಶವನ್ನು ನೀಡುತ್ತಿದೆ. ಇಲ್ಲಿ ಒಂದು ಕ್ಯಾನ್ವಾಸ್ ನಲ್ಲಿ 3 ಬಣ್ಣಗಳ ಸಂಗಮ ( K ) ಇಲ್ಲಿ ಕ್ಯಾನ್ವಾಸ್ ಕಲಾಕೃತಿಯ ಪ್ರತೀಕವಾದರೂ ನಮ್ಮ ಸಮಾಜವೇ ಒಂದು ರೀತಿಯ ಕ್ಯಾನ್ವಾಸ್ ಎಂಬ ಚೌಕಟ್ಟು. ಈ ಬದುಕಿನ ಚೌಕಟ್ಟಿನ ಒಳಗೆ ಎಲ್ಲರದ್ದೂ ಒಂದು ರೀತಿಯ ಬಣ್ಣದ ಬದುಕು. ನಮ್ಮ ನಿತ್ಯ ದಿನಚರಿ, ಚಟುವಟಿಕೆಗಳಿಂದ ಸಮಾಜಕ್ಕೆ, ಪ್ರಕೃತಿಗೆ ಒಂದು ಕೊಡುಗೆಯನ್ನು ನೀಡಬೇಕಾದರೆ ನಮ್ಮ ಸೀಮಿತ ಚೌಕಟ್ಟಿನಿಂದ ವಾದ ಮತ್ತು ಪಾದಗಳನ್ನು ಹೊರಗಿಡಲೇ ಬೇಕು. ಇದರ ಪ್ರತಿ ರೂಪವಾಗಿ ಕ್ಯಾನ್ವಾಸ್ ನಿಂದ ಒಂದು ಕಡೆ ಕುಂಚ ( ವಾದ…ತತ್ವ, ಸಿದ್ದಾಂತ ) ಹೊರಗೆ ಬಂದಿರುತ್ತದೆ. ಇನ್ನೊಂದು ಕಡೆ ಹೆಜ್ಜೆ ( ಪಾದ…ನಡೆ, ನಡತೆ ) ಹೊರಗೆ ಬಂದಿರುತ್ತದೆ.

    ಅಂದರೆ ಕಲಾಕ್ಷೇತ್ರದಲ್ಲಿ ಆಗಲಿ, ಸಮಾಜದಲ್ಲಾಗಲಿ ನಾವು ನಮ್ಮದೇ ಸೀಮಿತ ಬಣ್ಣ, ಬದುಕು ಎಂಬ ಚೌಕಟ್ಟಿನಲ್ಲಿ ಕಂಡು ಕೊಂಡದ್ದಕ್ಕಿಂತ, ನಾವು ಚೌಕಟ್ಟು ಮೀರಿ ಹೊರ ಆಯಾಮವನ್ನು ತಲುಪಲು ಪ್ರಯತ್ನಿಸಿದರೆ ( ಖಾಸಗಿ ಬದುಕಿನಿಂದ ಸಾಮಾಜಿಕ ಬದುಕಿಗೆ ) ಉತ್ತಮವಾದ ಕಲಾಕೃತಿಯನ್ನು ಮತ್ತು ಸಮಾಜವನ್ನು ರೂಪಿಸಬಹುದು ಎಂಬುದು ಈ ಲಾಂಛನದ ಒಳಾರ್ಥ.

    ಅದೇ ರೀತಿ ಕರ ಪತ್ರದಲ್ಲಿ ಬಣ್ಣದ ಹುಡುಗಿಯೊಬ್ಬಳು ಸಂಭ್ರಮಿಸುತ್ತಿದ್ದಾಳೆ. ಆಕೆಯ ಮುಖ ಬಣ್ಣದ ಪಾಲೇಟ್ ಮತ್ತು ನೀರಿನ ಹೂಜಿ, ಕೈ, ಕಾಲುಗಳು ಕುಂಚ ( ಚಿತ್ರ ಕಲಾ ಮೇಳ ಆಗಿರುವುದರಿಂದ ) ಕೆಳಗಿನ ಪಾದದ ಕುಂಚಗಳಲ್ಲಿ ಹೆಜ್ಜೆ – ಗೆಜ್ಜೆ ( ಈ ಪರ್ಬದಲ್ಲಿ ನೃತ್ಯವೂ ಇರುವುದರಿಂದ ) ಉಟ್ಟ ಲಂಗವು ಶಿಲಾ ಹಾಸುಗಳ ಪ್ರತಿರೂಪ ( ಈ ಪರ್ಬದಲ್ಲಿ ಶಿಲ್ಪ ಕಲೆಯೂ ಇರುವುದರಿಂದ ) ಎದೆ ಭಾಗದಲ್ಲಿ ಕ್ಯಾಮೆರಾ ಲೆನ್ಸ್ ( ಈ ಪರ್ಬದಲ್ಲಿ ಛಾಯಾ ಚಿತ್ರ ಪ್ರದರ್ಶನವೂ ಇರುವುದರಿಂದ ) ಇದೆಲ್ಲರ ಪ್ರತೀಕವಾಗಿ ಈ ಚಿತ್ರವನ್ನು ರಚಿಸಲಾಗಿದೆ.

    ಬನ್ನಿ ಕಲಾ ಪರ್ಬ ನಿಮ್ಮದೇ…ಬಣ್ಣದ ಲೋಕದಲ್ಲಿ ಸಂಭ್ರಮಿಸೋಣ. ನಿಮ್ಮ ಬೆಂಬಲವೇ ಈ ಪರ್ಬದ ಯಶಸ್ಸು

    Continue Reading

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending