Connect with us

DAKSHINA KANNADA

ನವದೆಹಲಿ: ಕರ್ಣಾಟಕ ಬ್ಯಾಂಕ್‌ಗೆ ಅತ್ಯುತ್ತಮ MSME ಗೌರವ

Published

on

ನವದೆಹಲಿ: ದೇಶದ ಅಗ್ರಗಣ್ಯ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಕರ್ಣಾಟಕ ಬ್ಯಾಂಕ್ , ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ವರ್ಷದ ಅತ್ಯುತ್ತಮ ಎಂಎಸ್‌ಎಂಇ ಬ್ಯಾಂಕ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ಅಸೋಚಾಮ್ ಸಂಸ್ಥೆಯು ದೆಹಲಿಯಲ್ಲಿ ಆಯೋಜಿಸಿದ ಎಂಎಸ್‌ಎಂಇ ಆಧಾರಿತ 8ನೇ ಶೃಂಗಸಭೆ ಮತ್ತು ಪ್ರಶಸ್ತಿ ಸಮಾರಂಭದಲ್ಲಿ ಕೇಂದ್ರ ಎಂಎಸ್‌ಎಂಇ (ಸಣ್ಣ, ಅತಿ ಸಣ್ಣ ಮತ್ತು ಮದಸ್ಯಮ ಉದ್ದಿಮೆ) ಸಚಿವಾಲಯದ ಸಚಿವ ನಾರಾಯಣ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕರ್ಣಾಟಕ ಬ್ಯಾಂಕ್‌ನ ಪರವಾಗಿ ಕ್ರೆಡಿಟ್ ಮಾರ್ಕೆಟಿಂಗ್ ವಿಭಾಗದ ಡಿಜಿಎಂ ಗೋಪಾಲಕೃಷ್ಣ ಸಾಮಗ ಅವರು ಪ್ರಶಸ್ತಿ ಸ್ವೀಕರಿಸಿದರು.

ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಮಹಾಬಲೇಶ್ವರ ಎಂ.ಎಸ್ ಅವರು ಬ್ಯಾಂಕಿನ ಈ ಸಾಧನೆ ಬಗ್ಗೆ ಮಾತನಾಡಿದರು.

ಕರ್ನಾಟಕ ಬ್ಯಾಂಕ್ ವಿವಿಧ ಡಿಜಿಟಲ್ ಉತ್ಪನ್ನಗಳೊಂದಿಗೆ ಎಂಎಸ್‌ಎಂಇ ವಲಯದ ಸಾಲಗಳಿಗೆ ಆದ್ಯತೆ ನೀಡುತ್ತಿದೆ. ಎಲ್ಲ ಗುಣಮಟ್ಟದ ಮಾನದಂಡಗಳನ್ನು ಸರಿಯಾಗಿ ಅನುಸರಿಸುವ ಮೂಲಕ ಸಾಲಗಳನ್ನು ಬ್ಯಾಂಕ್ ತ್ವರಿತವಾಗಿ ವಿಲೇವಾರಿ ಮಾಡುತ್ತಿದೆ.

MSME ಆಧಾರಿತ ವಿವಿಧ ಸಾರ್ವಜನಿಕ / ಖಾಸಗಿ ಉಪಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ.

ಬ್ಯಾಂಕ್ MSME ವಲಯದ ಉದ್ಯಮಿಗಳಿಗೆ ನೀಡಿದ ಬೆಂಬಲಕ್ಕಾಗಿ ಆಸೋಚಾಮ್ ಮತ್ತು ಇತರ ರಾಷ್ಟ್ರಮಟ್ಟದ ಬ್ಯುಸಿನೆಸ್ ಚೇಂಬರ್‌ಗಳಿಂದ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದೆ.

MSME ವಲಯಕ್ಕೆ ನಾವು ನೀಡುತ್ತಿರುವ ಆದ್ಯತೆಯನ್ನು ಮುಂದುವರೆಸುವ ನಮ್ಮ ಸಂಕಲ್ಪವನ್ನು ಈ ಪ್ರಶಸ್ತಿ ಬಲಪಡಿಸುತ್ತದೆ ಎಂದು ಹೇಳಿದರು.

Click to comment

Leave a Reply

Your email address will not be published. Required fields are marked *

Ancient Mangaluru

ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

Published

on

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್‌ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?

ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಎಸ್.ಎಂ.ಎಸ್ ಮೂಲಕ ಮಾಹಿತಿ :

ಎಲ್ಲಾ ಏರ್‌ಲೈನ್ ಚೆಕ್-ಇನ್ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್‌ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.

Continue Reading

DAKSHINA KANNADA

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!

Published

on

ಕಡಬ: ವ್ಯಕ್ತಿಯೊಬ್ಬರು  ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ.  ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.

ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!

marriage

ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.  ಮಾರ್ಚ್‌1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್‌ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

DAKSHINA KANNADA

ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ

Published

on

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.

ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.

ಪ್ರೀಮಿಯರ್ ಶೋ

ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.

Continue Reading

LATEST NEWS

Trending