ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದ್ದು ಸಮರೋಪದಿಯಲ್ಲಿ ಕಾರ್ಯವನ್ನು ಜಿಲ್ಲೆಯಾದ್ಯಂತ ಮಾಡುತ್ತಿದೆ.
ಕೊರೊನಾದಂತಹ ಮಾಹಾಮಾರಿಯಿಂದ ಜನ ಸಂಕಷ್ಟದಲ್ಲಿರುವಾಗ ಅವರ ನೆರವಿಗೆ ನಿಂತ ಜಿಲ್ಲಾಡಳಿತಕ್ಕೆ ಬೆನ್ನೆಲುಬಾಗಿ ನಿಂತು ಆರ್ಥಿಕ ಸಹಾಯ ಮಾಡುತ್ತಿದೆ ಕರ್ಣಾಟಕ ಬ್ಯಾಂಕ್.
ಈ ಹಿಂದೆಯೂ ಬ್ಯಾಂಕ್ ಕೊರೊನಾ ಸಂಕಷ್ಟ ಸಂದರ್ಭದಲ್ಲಿ 10 ಲಕ್ಷ ರೂಪಾಯಿಗಳನ್ನು ಜಿಲ್ಲಾಡಳಿತಕ್ಕೆ ನೀಡಿ ಸ್ಪಂದಿಸಿತ್ತು.
ಇದೀಗ ಮತ್ತೆ ಕಣಾರ್ಟಕ ಬ್ಯಾಂಕ್‌ನ ಸಿಎಸ್‌ಆರ್ ಅನುದಾನದಡಿ 19 ಲಕ್ಷದ 39 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ನೀಡಿದೆ.
ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕರು ಹಾಗೂ ಸಿಇಒ ಮಹಾಬಲೇಶ್ವರ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರಿಗೆ 19 ಲಕ್ಷದ.39 ಸಾವಿರ ರೂಪಾಯಿ ಚೆಕ್ಕನ್ನು ಹಸ್ತಾಂತರ ಮಾಡಿದರು.
ಬ್ಯಾಂಕಿನ ಎಜಿಎಂ ಶ್ರೀನಿವಾಸ ದೇಶಪಾಂಡೆ ಈ ಸಂದರ್ಭ ಉಪಸ್ಥಿತರಿದ್ದರು. ಕೊರೊನಾವನ್ನು ನಿಗ್ರಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ- ಜಿಲ್ಲಾಡಳಿತ ಮಾಡುವ ಕಾರ್ಯವನ್ನು ಮಹಾಬಲೇಶ್ವರ ಅವರು ಶ್ಲಾಘಿಸಿದರು..
ಕೊರೊನಾದಂತಹ ವಿಕೋಪ ಜಿಲ್ಲೆಯಲ್ಲಿದ್ದು ಅದನ್ನು ನಿಗ್ರಹಿಸುವ ಕಾರ್ಯದಲ್ಲಿ ಜಿಲ್ಲಾಡಳಿತಕ್ಕೆ ಸಹಾಯ ನೀಡಿದ್ದಕ್ಕೆ ಕರ್ಣಾಟಕ ಬ್ಯಾಂಕ್ ಆಡಳಿತ ನಿರ್ದೇಶಕರು ಹಾಗೂ ಸಿಇಒ ಅವರಿಗೆ ಜಿಲ್ಲಅಧಿಕಾರಿ ಸಿಂಧೂ ಬಿ. ರೂಪೇಶ್ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಹಿಂದೆಯೂ ಬ್ಯಾಂಕ್ ಕೊರೊನಾ ಸಂಕಷ್ಟ ಸಂದರ್ಭದಲ್ಲಿ 10 ಲಕ್ಷ ರೂಪಾಯಿಗಳನ್ನು ಜಿಲ್ಲಾಡಳಿತಕ್ಕೆ ನೀಡಿ ಸ್ಪಂದಿಸಿತ್ತು. ಇದೀಗ ಮತ್ತೆ ಕಣಾರ್ಟಕ ಬ್ಯಾಂಕ್‌ನ ಸಿಎಸ್‌ಆರ್ ಅನುದಾನದಡಿ 19 ಲಕ್ಷದ 39 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ನೀಡಿದೆ.
ಜನ ಸಂಕಷ್ಟದಲ್ಲಿರುವಾಗ ಅವರ ಸಹಾಯಕ್ಕೆ ನಿಂತ ಜಿಲ್ಲಾಡಳಿತಕ್ಕೆ ಬೆನ್ನೆಲುಬಾಗಿ ನಿಂತು ಆರ್ಥಿಕ ಸಹಾಯ ಮಾಡುತ್ತಿದೆ ಕರ್ಣಾಟಕ ಬ್ಯಾಂಕ್. ಈ ಹಿಂದೆಯೂ ಬ್ಯಾಂಕ್ ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಸ್ಪಂದಿಸಿತ್ತು.
ಇದೀಗ ಮತ್ತೆ ಸ್ಪಂದಿಸಿ ಈ ಕಾರ್ಯಕ್ಕೆ ಕರ್ಣಾಟಕ ಬ್ಯಾಂಕ್‌ನ ಸಿಎಸ್‌ಆರ್ ಅನುದಾನದಡಿ 10 ಲಕ್ಷ ರೂಪಾಯಿ ಹಾಗೂ ಇತರ ಆರ್ಥಿಕ ನೆರವನ್ನೂ ನೀಡಿದೆ.
ಈ ಹಿಂದೆಯೂ ಬ್ಯಾಂಕ್ ಕೊರೊನಾ ಸಂಕಷ್ಟ ಸಂದರ್ಭದಲ್ಲಿ 10 ಲಕ್ಷ ರೂಪಾಯಿಗಳನ್ನು ಕರ್ಣಾಟಕ ಬ್ಯಾಂಕ್ ಜಿಲ್ಲಾಡಳಿತಕ್ಕೆ ನೀಡಿತ್ತು. ಆ ಹಣದಿಂದ ತುರ್ತಾಗಿ ಒಂದು ಸಾವಿರ ಅಕ್ಸಿ ಮೀಟರುಗಳನ್ನು ಖರೀದಿ ಮಾಡಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದೆ.
ಇದೀಗ ಇಂದು ನೀಡಿದ 19 ಲಕ್ಷದ 39 ಸಾವಿರ ರೂಪಾಯಿಗಳ ನೆರವಿನಿಂದ ಕೋವಿಡ್ 19 ರೋಗಿಗಳನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಅಗತ್ಯವಿರುವ ಆ್ಯಂಬುಲೆನ್ಸ್ ಗಳನ್ನು ಜಿಲ್ಲಾಡಳಿತ ಖರೀದಿ ಮಾಡಲಿದೆ.
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೊಲೆರೋ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಪಿಕಪ್ ಹೆದ್ದಾರಿ ಬದಿಯ ಅಪಘಾತ ತಡೆಗೆ ಹಾಕಿದ್ದ ತಡೆ ಬೇಲಿಗೆ ಡಿಕ್ಕಿ ಹೊಡೆದು ಸುಮಾರು 12 ಅಡಿ ಆಳದ ಅಂಡರ್ ಪಾಸ್ ಕೆಳಗಡೆ ಬಿದ್ದಿದೆ.
ಅಪಘಾತದಿಂದ ಬೈಕ್ ಸವಾರ ಸಹಿತ ಬೊಲೆರೋ ಪಿಕಪ್ ನಲ್ಲಿದ್ದ ವಾಹನದ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
ಮಂಗಳೂರು : ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ. ಮೇರಿ ಹಿಲ್‌ನಲ್ಲಿ ನಿರ್ಮಾಣವಾಗಲಿರುವ ಈ ಪ್ರಾದೇಶಿಕ ಕೇಂದ್ರ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರಗಳಿಗೆ ಪೂರಕವಾಗಲಿರುವ ವ್ಯವಸ್ಥೆಗಳು ಈ ಕೇಂದ್ರದಲ್ಲಿ ಇರಲಿದೆ. ಇದು ವಿದ್ಯಾರ್ಥಿಗಳಿಂದ ಹಿಡಿದು ಸಂಶೋಧನೆ ನಡೆಸುವ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಏಷ್ಯಾದಲ್ಲೇ ಅತೀ ದೊಡ್ಡ ಸಂಸ್ಥೆಯಾಗಿದ್ದು, ಮಂಗಳೂರಿನಲ್ಲಿ ನಿರ್ಮಾಣವಾಗುವ ಪ್ರಾದೇಶಿಕ ಕೇಂದ್ರ ದೇಶದಲ್ಲೇ ದೊಡ್ಡ ಕೇಂದ್ರವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಕೇಂದ್ರ ಸ್ಥಾಪನೆಗೆ 2024-25ರ ಬಜೆಟ್‌ನಲ್ಲಿ ಅನುದಾನ ನೀಡಲಾಗಿದ್ದು, ಈಗ ಚಾಲನೆ ನೀಡಲಾಗುತ್ತಿದೆ. ಈ ಕೇಂದ್ರ ಸ್ಥಾಪನೆ ಬಳಿಕ ಕರಾವಳಿ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರವಾಗಿ ಬೆಂಗಳೂರಿಗೆ ಹೋಗುವುದು ತಪ್ಪಲಿದೆ ಎಂದು ಹೇಳಿದ್ದಾರೆ.
ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಬೇಕು ಎಂಬ ಚಿಂತನೆ ಸರ್ಕಾರಕ್ಕೆ ಇದೆ. ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಿದ್ದರು.
ಮಂಗಳೂರು/ಮುಂಬೈ : ಕೆಲವು ನಟಿಯರು ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸುತ್ತಾರೆ. ಈ ಬಗ್ಗೆ ಸಿನಿಮಾ ಒಪ್ಪಿಕೊಳ್ಳುವ ಮೊದಲೇ ಮಾತುಕತೆ ನಡೆಸಿರುತ್ತಾರೆ. ಇದನ್ನು ಬಾಲಿವುಡ್‌ನ ಈ ಸ್ಟಾರ್ ನಟಿ ಕೂಡ ಅನುಸರಿಸುತ್ತಿದ್ದರು.
ಆದರೆ ಆ ಒಬ್ಬ ನಟ ಬಲವಂತವಾಗಿ ಕಿಸ್ ಮಾಡಿದಕ್ಕೆ ವಾಂತಿ ಮಾಡಿ 100 ಸಲ ಮುಖ ತೊಳೆದಿದ್ದೆ ಎಂದು ಸ್ಟಾರ್ ನಟಿ ಹೇಳಿದ್ದಾರೆ.
ಬಾಲಿವುಡ್ ನಟಿ ರವೀನಾ ಟಂಡನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ರವಿನಾ ಟಂಡನ್ ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸಿದ ನಟಿಯರಲ್ಲಿ ರವೀನಾ ಟಂಡನ್ ಕೂಡ ಒಬ್ಬರು.
ಆದರೆ ಸಿನಿಮಾವೊಂದರ ಶೂಟಿಂಗ್ ವೇಳೆ ಸಹ ನಟರೊಬ್ಬರು ಆಕಸ್ಮಿಕವಾಗಿ ರವೀನಾ ಟಂಡನ್ ತುಟಿಗಳಿಗೆ ಮುತ್ತಿಟ್ಟ ಘಟನೆ ನಡೆದಿತ್ತು. ಆ ನಂತರ ಏನಾಯಿತು ಎಂಬುದನ್ನು ಸ್ವತಃ ರವೀನಾ ಅವರೇ ಹೇಳಿದ್ದಾರೆ.
ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ರವೀನಾ ಮಾತನಾಡಿದ್ದಾರೆ. ರವೀನಾ ಟಂಡನ್ ಅವರೊಂದಿಗೆ ಒಂದು ಘಟನೆ ನಡೆದಿತ್ತಂತೆ. ಅವರ ಸಹ ನಟರೊಬ್ಬರು ತಪ್ಪಾಗಿ ಅವರನ್ನು ಚುಂಬಿಸಿದ್ದರಂತೆ. ಈ ದೃಶ್ಯವು ಸ್ಕ್ರಿಪ್ಟ್ ನ ಭಾಗವೂ ಆಗಿರಲಿಲ್ಲ. ಇದಾದ ನಂತರ ರವೀನಾ ಟಂಡನ್ ತುಂಬಾ ಅನ್‌ಕಂಫರ್ಟ್ ಫೀಲ್ ಮಾಡಿಕೊಂಡರಂತೆ.
ಆ ಬಳಿಕ ವಾಂತಿ ಕೂಡ ಮಾಡಿದರಂತೆ. 100 ಸಲ ತಮ್ಮ ಬಾಯಿ ತೊಳೆದುಕೊಂಡಿದ್ದಾರಂತೆ. ನಂತರ ಆ ನಟ ರವೀನಾ ಟಂಡನ್ ಅವರ ಬಳಿಕ ಕ್ಷಮೆಯಾಚಿಸಿದರಂತೆ. ಸಂದರ್ಶನ ಸಮಯದಲ್ಲಿ ರವೀನಾ ಟಂಡನ್ ಈ ವಿಚಾರ ಹೇಳಿದ್ದಾರೆ. ಸಿನಿಮಾಗಳಲ್ಲಿ ಕಿಸ್ ಮಾಡದಿರುವುದು ನನ್ನ ಆಯ್ಕೆ ಎಂದು ರವೀನಾ ಟಂಡನ್ ಹೇಳಿದ್ದಾರೆ.