Connect with us

    ಕೊರೊನಾ ಸೋಂಕಿತರಿಗೆ ಗುಡ್ ನ್ಯೂಸ್: ಕರ್ಣಾಟಕ ಬ್ಯಾಂಕ್ ನಿಂದ ವಿಶೇಷ ಸೌಲಭ್ಯ…!

    Published

    on

    ಕೊರೊನಾ ಸೋಂಕಿತರಿಗೆ ಗುಡ್ ನ್ಯೂಸ್: ಕರ್ಣಾಟಕ ಬ್ಯಾಂಕ್ ನಿಂದ ವಿಶೇಷ ಸೌಲಭ್ಯ…!

    ಮಂಗಳೂರು: ಇಡೀ ವಿಶ್ವಕ್ಕೆ ಮಾರಕವಾಗಿರುವ ಮಹಾಮಾರಿ ಕೊರೊನಾ ಸೋಂಕು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಬ್ಯಾಂಕ್ ನಲ್ಲಿ ಕೂಡ ವಿಮೆ ಯೋಜನೆ ಕೈಗೊಳ್ಳಲಾಗಿದೆ.

    ಹೌದು.. ಕರ್ಣಾಟಕ ಬ್ಯಾಂಕ್, ಸಾರ್ವಜನಿಕರಿಗೆ ಆರೋಗ್ಯ ರಕ್ಷಾಕವಚ ನೀಡುವ ವಿಶೇಷ ಕೊರೊನಾ ವಿಮಾ ಯೋಜನೆ ಜಾರಿಗೊಳಿಸಿದೆ.

    ‘ಕೊರೊನಾ ಸೋಂಕಿನಿಂದ ಪೀಡಿತರಾದವರಿಗೆ ಅವರ ಸಂಕಷ್ಟದ ಕಾಲದಲ್ಲಿ ನೆರವಾಗುವ ನಿಟ್ಟಿನಲ್ಲಿ ಯುನಿವರ್ಸಲ್ ಸೋಂಪೊ ಜನರಲ್ ಇನ್ಶುರೆನ್ಸ್ ಕಂಪನಿ ಸಹಯೋಗದೊಂದಿಗೆ ವಿಮೆ ಯೋಜನೆ ಆರಂಭಿಸಲಾಗಿದೆ.

    ಆಸ್ಪತ್ರೆಯ ವೆಚ್ಚಗಳಿಗಾಗಿ ಕೇವಲ ರೂ. 399 (ಎಲ್ಲ ತೆರಿಗೆಗಳೂ ಸೇರಿ) ಕಂತನ್ನು ನೀಡುವ ಮೂಲಕ ಈ ವಿಮೆ ಪಡೆಯಬಹುದಾಗಿದೆ’ ಎಂದು ಬ್ಯಾಂಕ್‌ ನ ಸಿಇಒ ಮಹಾಬಲೇಶ್ವರ ಎಂ.ಎಸ್. ತಿಳಿಸಿದ್ದಾರೆ.

    ‘ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ಸೇರಬೇಕಾದ ಪರಿಸ್ಥಿತಿ ಉಂಟಾದಲ್ಲಿ ವಿಮಾದಾರರಿಗೆ ರೂ.3 ಲಕ್ಷದವರೆಗೆ ಆಸ್ಪತ್ರೆಯ ಖರ್ಚನ್ನು

    ಹಾಗೂ ಹೊರ ರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ರೂ.3 ಸಾವಿರದವರೆಗಿನ ಔಷಧಿಗಳ ಖರ್ಚನ್ನು ಅಥವಾ 14 ದಿನಗಳ ಕ್ವಾರಂಟೈನ್‌ಗೆ ಒಳಪಟ್ಟಲ್ಲಿ,

    ದಿನವೊಂದಕ್ಕೆ ರೂ.1 ಸಾವಿರದವರೆಗೆ ಸರ್ಕಾರಿ ಅಥವಾ ಮಿಲಿಟರಿ ಆಸ್ಪತ್ರೆಗಳ ಕ್ವಾರಂಟೈನ್ ವೆಚ್ಚ ಭರಿಸಲು ಅವಕಾಶವಿದೆ’ ಎಂದು ಹೇಳಿದ್ದಾರೆ.

    ‘ವಿಮೆಯ ಅವಧಿ 120 ದಿನಗಳು. ಈ ವಿಮೆಯ ಸೌಲಭ್ಯ 18 ರಿಂದ 65 ವಯಸ್ಸಿನ ವಯೋಮಿತಿಯ ಬ್ಯಾಂಕಿನ ಎಲ್ಲ ಗ್ರಾಹಕರಿಗೆ ಲಭ್ಯವಿದೆ.

    ಗ್ರಾಹಕರಲ್ಲದವರೂ, ಗ್ರಾಹಕರಾಗಿ ವಿಮಾ ಕಂತನ್ನು ಪಾವತಿಸಿ, ವಿಮೆ ಪಡೆಯುವ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ತಿಳಿಸಿದ್ದಾರೆ.

    ‘ಸಮೂಹ ವಿಮೆಯ ಈ ಯೋಜನೆಯ ಬಗ್ಗೆ ನಿಮ್ಮ ಹತ್ತಿರದ ಕರ್ಣಾಟಕ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿದಲ್ಲಿ ಸಿಬ್ಬಂದಿ ಮಾಹಿತಿ ನೀಡಲಿದ್ದಾರೆ.

    ಅವಶ್ಯಕತೆ ಇರುವವರೆಲ್ಲರೂ ಈ ಸೌಲಭ್ಯವನ್ನು ಹೊಂದುವ ಮೂಲಕ ನೆಮ್ಮದಿಯಿಂದ ಇರಬಹುದು’ ಎಂದು ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ದಸರಾ ಆನೆಗಳ ಮುಂದೆ ಸೆಲ್ಫೀ, ರೀಲ್ಸ್, ಫೋಟೋಶೂಟ್’ಗೆ ಇಲ್ಲ ಅವಕಾಶ

    Published

    on

    ಬೆಂಗಳೂರು : ಈಗೀಗ ಮೊಬೈಲ್ ಕ್ರೇಝ್ ಹೆಚ್ಚಾಗಿದೆ. ಹಾಗಾಗಿ ಸಿಕ್ಕ ಸಿಕ್ಕಲ್ಲಿ ರೀಲ್ಸ್, ಸೆಲ್ಫಿಗಳದೇ ಕಾರುಬಾರು.  ಅಲ್ಲದೇ, ಕ್ಯಾಮೆರಾ ಹಿಡಿದು ಫೋಟೋಕ್ಕೆ ಫೋಸು ಕೊಡುವವರೇ ಹೆಚ್ಚು. ಆದರೆ, ಈ ಬಾರಿ ನೀವು ಮೈಸೂರು ದಸರಾ ಉತ್ಸವದ ಮೆರವಣಿಗೆಗೆ ಹೋಗಿ ಫೋಟೋ  ತೆಗೆಯೋಣ, ಸೆಲ್ಫಿ ತೆಗೆಯೋಣ ಅಂದ್ಕೊಂಡ್ರೆ ಅವಕಾಶವಿಲ್ಲ.

    ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ಗಳಿಗೆ ಅವಕಾಶ ನೀಡಬಾರದು ಎಂದಿದ್ದಾರೆ.

    ಶುಕ್ರವಾರ(ಸೆ.20) ಮೈಸೂರಿನಲ್ಲಿ ದಸರಾ ಆನೆಗಳ ನಡುವಿನ ಕಾದಾಟ ನಡೆದಿತ್ತು. ಆ ಬಳಿಕ ಸಚಿವ ಈಶ್ವರ್ ಖಂಡ್ರೆ ಈ ಆದೇಶ ಹೊರಡಿದ್ದಾರೆ. ಯಾವುದೇ ಕಾರಣಕ್ಕೂ ಸಾರ್ವಜನಿಕರು ಆನೆಗಳ ಬಳಿ ದಂತ ಹಿಡಿದುಕೊಂಡು ಫೋಟೋ ಶೂಟ್ ಮಾಡಿಸುವುದು, ವೀಡಿಯೋ ಮಾಡುವುದು, ಸೆಲ್ಫೀ ಕ್ಲಿಕ್ಕಿಸುವುದು ಹಾಗೂ ರೀಲ್ಸ್‌ಗೆ ಮುಂದಾಗುವಂತಹ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಇದನ್ನೂ ಓದಿ : ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ಘೋಷಣೆ- ಯಾರದು?

    ಮೈಸೂರು ದಸರಾ ಮಹೋತ್ಸವದ ಪ್ರಮುಖ ಸಾಕಾನೆಗಳ ಬಳಿ ಫೋಟೋಶೂಟ್ ಮತ್ತು ರೀಲ್ಸ್ ಮಾಡಲು ಅಧಿಕಾರಿಗಳೇ ಅವಕಾಶ ನೀಡಿದ್ದು, ಇದರಿಂದ ಆನೆಗಳು ವಿಚಲಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಾಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟ ನಡೆದಿತ್ತು.

    Continue Reading

    LATEST NEWS

    ಫರಂಗಿಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರಿಗೆ ಗಾಯ

    Published

    on

    ವಿಟ್ಲದಿಂದ ಮಂಗಳೂರು ವಿಮಾನ ನಿಲ್ದಾಣದ ಕಡೆಗೆ ಸಾಗುತ್ತಿದ್ದ ಕಾರೊಂದು ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಸಂಭವಿಸಿದೆ.

    ಬೆಳಗ್ಗೆ 6.15 ರ ವೇಳೆಗೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಮೂವರು ಪ್ರಯಾಣಿರಿಗೆ ತುರ್ತಾಗಿ ವಿಮಾನ ನಿಲ್ದಾಣಕ್ಕೆ ಹೋಗಬೇಕಾಗಿದ್ದರಿಂದ ಅವರನ್ನು ಆಟೋ ರಿಕ್ಷಾದಲ್ಲಿ ವಿಮಾನ ನಿಲ್ದಾಣಕ್ಕೆ ಕಳುಹಿಸಿ ಕೊಡಲಾಯಿತು.

    ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ಮನೆಯೊಂದರ ಅಂಗಳದಲ್ಲಿ ಮಗುಚಿ ಬಿದ್ದಿದೆ. ಬೆಳಗ್ಗಿನ ವೇಳೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿರ ಬೇಕೆಂದು ಶಂಕಿಸಲಾಗಿದೆ.

    Continue Reading

    LATEST NEWS

    ಮೆಟ್ರೋ ನಿಲ್ದಾಣದಲ್ಲಿಅನಾಹುತ; ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

    Published

    on

    ದೆಹಲಿ/ಮಂಗಳೂರು: ದೆಹಲಿಯ ಲೋಕ ಕಲ್ಯಾಣ್ ಮಾರ್ಗದ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಡೆದಿದೆ. 28 ವರ್ಷದ ದೇವೇಂದ್ರಕುಮಾರ್ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

    ರಾಜಸ್ಥಾನ್‌ ಅಲ್ವಾರ್ ನಿವಾಸಿಯಾಗಿರುವ ದೇವೆಂದ್ರ ಕುಮಾರ್ ಲೋಕಕಲ್ಯಾಣ್ ಮಾರ್ಗ ಮೆಟ್ರೋ ನಿಲ್ದಾಣದ ಪ್ಲಾಟ್‌ ಫಾರ್ಮ್‌ ಸಂಖ್ಯೆ 2ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಶವವನ್ನು ಆರ್‌ಎಂಎಲ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

    Continue Reading

    LATEST NEWS

    Trending