Connect with us

DAKSHINA KANNADA

ಗಡಿನಾಡಿನಲ್ಲಿ ಸಂಭ್ರಮಿಸಲ್ಪಟ್ಟ ಕನ್ನಡ ಜಾಗೃತಿ ಸಾಂಸ್ಕೃತಿಕ ಉತ್ಸವ

Published

on

ಉಳ್ಳಾಲ: ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಮಂಜುನಾಥ್ ಎಜ್ಯುಕೇಷನ್ ಟ್ರಸ್ಟ್ ಮಂಗಳೂರು ಇವುಗಳ ಸಹಯೋಗದಲ್ಲಿ ಸೋಮವಾರ ಬೆಳಿಗ್ಗೆ ತಲಪಾಡಿ ತೊಕ್ಕೊಟ್ಟು ಉಚ್ಚಿಲ ಇಲ್ಲಿನ ಶ್ರೀ ಕೃಷ್ಣ ಕಲ್ಯಾಣ ಮಂಟಪದ ಸಂಕೋಳಿಗೆ ಸಭಾಗೃಹದಲ್ಲಿ ಜರುಗಿದ ಗಡಿನಾಡ ಕನ್ನಡ ಜಾಗೃತಿ ಸಾಂಸ್ಕೃತಿಕ ಉತ್ಸವವನ್ನು ಕರ್ನಾಟಕ ವಿಧಾನಸಭಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕ ಯು.ಟಿ ಖಾದರ್ ಉದ್ಘಾಟಿಸಿದರು.

ಉದ್ಘಾಟಿಸಿ ನಂತರ ಮಾತನಾಡಿದ ಅವರು “ಸಾಮರಸ್ಯದ ಬಾಳಿಗೆ ಗಡಿನಾಡುಗಳೇ ಆಡಿಪಾಯವಾಗಿವೆ. ಆದುದರಿಂದ ಭಾಷೆಗಳ ಒಳಗಿನ ದ್ವೇಷ ಸಲ್ಲದು.

ಗಡಿನಾಡಿನ ಭಾಗದಲ್ಲಿನ ಸಾಹಿತಿಗಳು, ಕಲಾವಿದರು, ಪತ್ರಕರ್ತರು ಅಲ್ಲದೆ ಎಲ್ಲಾ ಪ್ರತಿಭೆಗಳನ್ನು ಗುರುತಿಸುವಂತಾದಾಗ ನಮ್ಮ ಭಾಷೆಗಳು ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ.

ಕನ್ನಡ ನಾಡು ನುಡಿಯ ಸೇವೆ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಎಂಇಟಿಎಂ ಅಧ್ಯಕ್ಷ ಇಂ ಕೆ.ಪಿ ಮಂಜುನಾಥ್ ಸಾಗರ್ ಅಧ್ಯಕ್ಷತೆಯಲ್ಲಿ ಜರುಗಿದ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ನಗರಸಭೆಯ ಆಯುಕ್ತ ಮಧು ಎಸ್.ಮನೋಹರ್,

ಅತಿಥಿ ಅಭ್ಯಾಗತರುಗಳಾಗಿ ಸ್ವಾಮಿ ಎಂಟರ್‌ಪ್ರೈಸಸ್, ಬೆಂಗಳೂರು ಇದರ ಆಡಳಿತ ನಿರ್ದೇಶಕ ಗೋ.ನಾ.ಸ್ವಾಮಿ, ರೋಟರಿ ಕ್ಲಬ್ ಮೊಡಂಕಾಪು ಘಟಕದ ಅಧ್ಯಕ್ಷ ಎಲಿಯಾಸ್ ಸಾಂಕ್ತೀಸ್, ಅರಣ್ಯ ಅಧಿಕಾರಿ ಸೋಮಶೇಖರ್ ಹಿಪ್ಪರಗಿ, ಗುರುಪ್ರಸಾದ್ ಕೋಟೆಕಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಮನಾಥ ಸಾಂಸ್ಕೃತಿಕ ಭವನ ಸಮೂಹದ ನಾಡಗೀತೆಯೊಂದಿಗೆ ಉತ್ಸವ ಆದಿಗೊಂಡಿತು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಅಧ್ಯಕ್ಷ ಶಿವರಾಮ ಕಾಸರಗೋಡು ಸ್ವಾಗತಿಸಿ ಪ್ರಸ್ತಾವನೆಗೈದರು.

ಅರ್ಚನಾ ಬಂಗೇರ ಕುಂಪಲ ಮತ್ತು ಕೀರ್ತನ ಸನಿಲ್ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ಆರೀಫ್ ಕಲ್ಕಟ್ಟ ವಂದಿಸಿದರು.

ಸಾಂಸ್ಕೃತಿಕ ಉತ್ಸವದ ಅಂಗವಾಗಿ ನಾಡು ನುಡಿಯ ಕುರಿತು ಕವನ ವಾಚನ, ರಾಮನಾಥ ಸಾಂಸ್ಕೃತಿಕ ಭವನ ಸಮೂಹ ಕಾಸರಗೋಡು ಇವರಿಂದ ಸಮೂಹ ಗಾನ,

ಸರೋಜ ರಾವ್ ಮತ್ತು ತಂಡ ಮಂಗಳೂರು ಇವರಿಂದ ಜಾನಪದ ನೃತ್ಯ, ಹರಿದಾಸ ಜಯಾನಂದ ಕುಮಾರ್ ಸಂಯೋಜನೆಯಲ್ಲಿ ಜಯ ಜನನಿ ನಿನಾದ ಕಾಸರಗೋಡು ತಂಡದಿಂದ ಕವಿಗಾನ ಕನ್ನಡಗಾನ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಗೊಂಡವು.

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

LATEST NEWS

Trending