ಮಂಗಳೂರು: ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಾಣಗೊಳ್ಳಲಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡದ ಅಧಿಕೃತ ಶಿಲಾನ್ಯಾಸ ಕಾರ್ಯಕ್ರಮವು
ಫೆಬ್ರವರಿ 26ರಂದು ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ತೊಕ್ಕೊಟ್ಟು ಬಸ್ ಸ್ಟ್ಯಾಂಡ್ ಬಳಿ ಜರಗಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ‘ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ರವರು ಶಿಲಾಫಲಕ ಅನಾವರಣವನ್ನು ನೆರವೇರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ರವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ವಿಧಾನ ಸಭೆ ವಿಪಕ್ಷ ಉಪನಾಯಕರಾದ ಯು.ಟಿ.ಖಾದರ್ ರವರು ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಂಗಾರ ಎಸ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು, ಕೋಟ ಶ್ರೀನಿವಾಸ ಪೂಜಾರಿ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಕರ್ನಾಟಕ ಸರಕಾರ, ವಿ. ಸೋಮಣ್ಣ, ವಸತಿ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವರು,
ಡಾ. ಭರತ್ ಶೆಟ್ಟಿ ವೈ. ಶಾಸಕರು, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ, ಹರೀಶ್ ಪೂಂಜ ಶಾಸಕರು, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ, ರಾಜೇಶ್ ನಾಯ್ಕ್ ಯು. ಶಾಸಕರು,
ಬಂಟ್ವಾಳ ವಿಧಾನ ಸಭಾ ಕ್ಷೇತ್ರ, ಸಂಜೀವ ಮಠಂದೂರು ಶಾಸಕರು, ಪುತ್ತೂರು ವಿಧಾನ ಸಭಾ ಕ್ಷೇತ್ರ, ಉಮಾನಾಥ ಎ. ಕೋಟ್ಯಾನ್ ಶಾಸಕರು, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರ, ಡಿ. ವೇದವ್ಯಾಸ ಕಾಮತ್ ಶಾಸಕರು,
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ, ಬಿ.ಎಂ. ಫಾರೂಕ್ ಶಾಸಕರು, ಕರ್ನಾಟಕ ವಿಧಾನ ಪರಿಷತ್ , ಸಿ.ಟಿ. ರವಿ ಶಾಸಕರು,
ಚಿಕ್ಕಮಂಗಳೂರು ವಿಧಾನ ಸಭಾ ಕ್ಷೇತ್ರ ಹಾಗೂ ಮಾಜಿ ಸಚಿವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ, ಹರಿಕೃಷ್ಣ ಬಂಟ್ವಾಳ ಅಧ್ಯಕ್ಷರು ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್), ಕರ್ನಾಟಕ ಗೃಹ ಮಂಡಳಿ,
ಡಾ. ರಾಜೇಂದ್ರ ಕೆ.ವಿ ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಎನ್. ಶಶಿಕುಮಾರ್ ಪೊಲೀಸ್ ಆಯುಕ್ತರು, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಇವರುಗಳು ಭಾಗವಹಿಸಲಿದ್ದಾರೆ
ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ರವರು ಪತ್ರಿಕಾ ಪ್ರಕಟಣೆಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯಾಚರಿಸದೆ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಅಕಾಡೆಮಿಯಾಗಿರುವುದರಿಂದ ಯಾವುದೇ ಧಾರ್ಮಿಕ ಚಟುವಟಿಕೆಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.
ಕೇವಲ ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮುಂತಾದ ಚಟುವಟಿಕೆಗಳ ಬಗ್ಗೆ ಮಾತ್ರ ಕಾರ್ಯಾಚರಿಸುತ್ತಿರುವ ಅಪ್ಪಟ ಸರ್ಕಾರಿ ಕಚೇರಿಯಾಗಿ ಈ ಕಟ್ಟಡವು ಕಾರ್ಯನಿರ್ವಹಿಸಲಿದ್ದು,
ಈ ಕಟ್ಟಡದ ಕುರಿತು ಯಾವುದೇ ಗೊಂದಲಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.