ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಉದ್ಯೋಗ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದರು ಆದ್ರೆ ಮಂಗಳೂರಿನಲ್ಲಿ ಉದ್ಯೋಗ ಮಾಡಲು ಅನುವು ,ಮಾಡಿಕೊಡುವಂತೆ ಮುಖ್ಯಮಂತ್ರಿಗಳನ್ನು ಕೋರಿದ್ದರು.
ಪುತ್ತೂರು : ಇತ್ತಿಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿ, ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ರಾಜ್ರ ಸರ್ಕಾರ ಅನುವು ಮಾಡಿಕೊಟ್ಟಿದೆ.
ಈ ಬಗ್ಗೆ ಸಿಎಂ ಬೊಮ್ಮಾಯಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಕುಮಾರಿ ಅವರು ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಉದ್ಯೋಗ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದರು ಆದ್ರೆ ಮಂಗಳೂರಿನಲ್ಲಿ ಉದ್ಯೋಗ ಮಾಡಲು ಅನುವು ,ಮಾಡಿಕೊಡುವಂತೆ ಮುಖ್ಯಮಂತ್ರಿಗಳನ್ನು ಕೋರಿದ್ದರು.
ಬೆಂಗಳೂರಿನಲ್ಲಿ ಉದ್ಯೋಗ ಮಾಡಲು ಕಷ್ಟಕರವೆಂಬ ನೆಲೆಯಲ್ಲಿ ಮಂಗಳೂರಿನ ಸರಕಾರಿ ಇಲಾಖಾ ಕಚೇರಿಯಲ್ಲಿ ಉದ್ಯೋಗ ಕೊಡಿಸುವಂತೆ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ ನಳಿನ್ ಕುಮಾರ್ ಕಟೀಲ್ ಕೂಡ ಸಿಎಂ ಜತೆ ಮಾತನಾಡಿ ಮನವಿ ಸಲ್ಲಿದ್ದರು .
ಇದೀಗ ಕೋರಿಕೆಯಂತೆ ಮಂಗಳೂರಿನಲ್ಲೇ ಗುತ್ತಿಗೆ ಆಧಾರದಲ್ಲಿ ಸಿ ಗ್ರೇಡ್ ಹುದ್ದೆಯ ಭರವಸೆ ಈಡೇರಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಸ್ತು ಅಂದಿದ್ದಾರೆ.