Connect with us

ಹುಟ್ಟುಹಬ್ಬದ ಸಂಭ್ರಮದಲ್ಲಿ ಕರ್ನಾಟಕ ಮುಖ್ಯಮಂತ್ರಿ: ಗಣ್ಯಾತಿಗಣ್ಯರಿಂದ ಶುಭಾಶಯಗಳ ಸುರಿಮಳೆ

Published

on

78ನೇ ವಸಂತಕ್ಕೆ ಕಾಲಿಟ್ಟ ಸಿಎಂ ಯಡಿಯೂರಪ್ಪ: ಇಂದು ಅಭಿನಂದನ ಗ್ರಂಥ ಬಿಡುಗಡೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು 78ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರದಾನ ಮಂತ್ರಿ ನರೇಂದ್ರ ಮೋದಿ ಸಹಿತ ಆನೇಕ ಗಣ್ಯರು ಸಿ.ಎಂಗೆ ಶುಭ ಹಾರೈಸಿದ್ದಾರೆ.

ಯಡಿಯೂರಪ್ಪ ಅವರ ಅಭಿಮಾನಿಗಳು ನಗರದ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ. ಯಡಿಯೂರಪ್ಪ ಅವರ ಸಾಮಾಜಿಕ ಮತ್ತು ರಾಜಕೀಯ ಹೋರಾಟ ಜೀವನದ ಕುರಿತ ಅಭಿನಂದನಾ ಗ್ರಂಥ ಕೂಡ ಬಿಡುಗಡೆಯಾಗಲಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಭಾಗವಹಿಸಲಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಬಿಎಸ್‌ವೈ, ‘ಹುಟ್ಟು ಹಬ್ಬದ ಸಂದರ್ಭದಲ್ಲಿ ಹಾರ, ತುರಾಯಿ ಮತ್ತು ನೆನಪಿನ ಕಾಣಿಕೆಗಳನ್ನು ತರಬಾರದು. ಜೀವನದ ಎಲ್ಲ ಘಟ್ಟಗಳಲ್ಲೂ ನಿಮ್ಮೆಲ್ಲರ ಪ್ರೀತಿಯ ಮಹಾಪೂರದಲ್ಲಿ ಮಿಂದು ಪುನೀತನಾಗಿದ್ದೇನೆ’ ಎಂದಿದ್ದಾರೆ.

ದಕ್ಷ ಹಾಗೂ ಪ್ರಮಾಣಿಕರಾದ ಯಡಿಯೂರಪ್ಪ ನಡೆಸಿದ್ದು ಅವಿರತ ಹೋರಾಟ. ರಾಜ್ಯ ರಾಜಕಾರಣದಲ್ಲಿ ಇಷ್ಟೊಂದು ಸಂಘರ್ಷಮಯ ವ್ಯಕ್ತಿತ್ವ ಹೊಂದಿದ ವ್ಯಕ್ತಿ ಇನ್ನೊಬ್ಬರಿಲ್ಲ ಎನ್ನಲಾಗಿದೆ.

ಸಿಡುಕಿನ ಸ್ವಭಾವದವರಾದರೂ ಇನ್ನೊಬ್ಬರಿಗೆ ಕೆಡುಕು ಬಯಸದ ವ್ಯಕ್ತಿತ್ವ. ರಾಜ್ಯದಲ್ಲಿ ಕೇವಲ 2 ಸ್ಥಾನ ಮಾತ್ರ ಗೆಲ್ಲುವುದಕ್ಕೆ ಸೀಮಿತವಾಗಿದ್ದ ಬಿಜೆಪಿ ತನ್ನ ಸಂಖ್ಯಾಬಲವನ್ನು ಶತಕದ ಗಡಿದಾಟಿಸುವಷ್ಟರ ಮಟ್ಟಿಗೆ ಬೆಳೆಯುವುದರ ಹಿಂದೆ ಯಡಿಯೂರಪ್ಪ ಶ್ರಮ ಗಣನೀಯ.

ನಾಲ್ಕನೇ ಬಾರಿಗೆ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದರೂ, ಅವರ ಆಳ್ವಿಕೆ ಅವಧಿ ಮಾತ್ರ ಮೂರುವರೆ ವರ್ಷಕ್ಕಿಂತ ಹೆಚ್ಚಿಲ್ಲ.

ಮೊದಲ ಬಾರಿಗೆ 9 ದಿನ, ಎರಡನೇ ಬಾರಿಗೆ 3 ವರ್ಷ, ಮೂರನೇ ಬಾರಿಗೆ 3 ದಿನಗಳ ಅವಧಿಗೆ ಮುಖ್ಯಮಂತ್ರಿಯಾಗಿದ್ದರು.

ದೇಶದಲ್ಲಿ ಕೃಷಿಗಾಗಿ ಪ್ರತ್ಯೇಕ ಬಜೆಟ್‌ ಮಂಡಿಸಿದ ಮೊದಲ ಮುಖ್ಯಮಂತ್ರಿ ಎಂಬ ಖ್ಯಾತಿಗೂ ಅವರು ಭಾಜನರಾಗಿದ್ದರು.

ಶೇ.1ರ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡುವ ನಿರ್ಣಯವನ್ನು ತಮ್ಮ ಅವಧಿಯಲ್ಲಿ ತೆಗೆದುಕೊಂಡರು. ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತದೆ ಎಂಬಷ್ಟರ ಮಟ್ಟಿಗೆ ಅವರ ಹೋರಾಟದ ವೈಖರಿ ಪ್ರಕರವಾಗಿತ್ತು.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending