Connect with us

    bangalore

    ಕಲರ್ ಫುಲ್ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಪ್ರಿಯರಿಗೆ ಶಾಕ್! ಆದೇಶದಲ್ಲಿ ಏನಿದೆ!?

    Published

    on

    ಬೆಂಗಳೂರು : ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿ ಭವಿಷ್ಯ ನಿರ್ಧಾರವಾಗಿದೆ. ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕಲರ್ ಕಾಟನ್‌ ಕ್ಯಾಂಡಿ ನಿಷೇಧಿಸಲಾಗಿದೆ ಎಂದಿದ್ದಾರೆ.

    ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಲರ್ ಕಾಟನ್​ ಕ್ಯಾಂಡಿ ಮಾರಾಟ ಮಾಡುವಂತಿಲ್ಲ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಲರ್ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ ಮಾದರಿಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಸೂಚಿಸಿದ್ದಾರೆ. ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

     

    ಕೃತಕ ಬಣ್ಣ ಬಳಕೆ ಸಾಭೀತು…!

    ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಇವುಗಳಲ್ಲಿ ಕೃತಕ ಬಣ್ಣಗಳನ್ನು ಬಳಸಿರುವುದು ಪತ್ತೆಯಾಗಿದೆ. ಕಲಬೆರಕೆ ಕಲರ್ ಬಳಕೆ ಮಾಡೋದು ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ. ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು.
    ಇದೀಗ ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಗೋಬಿಯಲ್ಲಿ ಕೃತಕ ಬಣ್ಣ ಬಳಸಿದರೇ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

     

    ಆರೋಗ್ಯಕ್ಕೆ ತುಂಬಾ ಅಪಾಯಕಾರಿ!

    ಗೋಬಿ ಮಂಚೂರಿ ಸಸ್ಯಾಹಾರಿ ಪದಾರ್ಥ. ಹೀಗಾಗಿ ನಿಷೇಧ ಮಾಡಲು ಸಾಧ್ಯವಿಲ್ಲ. ಕೃತಕ ಬಣ್ಣ ಬಳಸದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್‌ ಯೆಲ್ಲೊ ಬಣ್ಣ ಮತ್ತು ಟಾಟ್ರಾಜಿನ್‌ ರಾಸಾಯನಿಕ ಅಂಶ ಪತ್ತೆಯಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಆಹಾರ ಸೇವನೆ ಮಾಡುತ್ತಾರೆ. ಇದರಿಂದ ಕ್ಯಾನ್ಸರ್ ಹಾಗೂ ಅಸಾಂಕ್ರಮಿಕ ಖಾಯಿಲೆ ಏರಿಕೆಯಾಗುತ್ತಿದೆ. ಸರಿಯಾದ ಆಹಾರ ತಯಾರು ಮಾಡದಿರುವುದು ಸಮಸ್ಯೆಗೆ ಕಾರಣವಾಗಿದೆ. ಹೆಚ್ಚು ಕೊಬ್ಬುಕಾರಕ, ಉಪ್ಪು ಹಾಗೂ ಸಕ್ಕರೆಯ ಆಹಾರ ಬಳಕೆಯಾಗುತ್ತಿದೆ.

    ಮಾದರಿ ಸಂಗ್ರಹಿಸಿ ಪರೀಕ್ಷೆ :

    ಹೀಗಾಗಿ 171 ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿದ್ದೇವೆ. ಇದರಲ್ಲಿ 107 ಮಾದರಿಯಲ್ಲಿ ಕೃತಕ ಬಣ್ಣ ಕಂಡು ಬಂದಿದೆ. 64 ಸುರಕ್ಷಿತವಾದ ಮಾದರಿಗಳು ಕಂಡು ಬಂದಿದೆ. ಟಾರ್ಟ್ರಾಜಿನ್, ಸನ್​ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್​ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ. ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿ ಎಂದು ತಿಳಿಸಿದರು.


    25 ವಿಧದ ಕಾಟನ್​​ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, 15 ಮಾದರಿಗಳಲ್ಲಿ ಕೃತಕ ಬಣ್ಣ ಬಳಸಿರುವುದು ಕಂಡು ಬಂದಿದೆ. 10ರಲ್ಲಿ ಕೃತಕ ಬಣ್ಣ ಬಳಸಿಲ್ಲ. ಕೃತಕ ಬಣ್ಣ ಬಳಕೆ ಮಾಡಿ ಕ್ಯಾಂಡಿ ತಯಾರು ಮಾಡಬಹುದು. ಆದರೆ, ರೊಡಮೈನ್ ಬಿ, ಟಾರ್ಟ್ರಾಜಿನ್​ನಂತಹ ಯಾವುದೇ ಬಣ್ಣ ಬಳಸಬಾರದು. ಇದು ಆರೋಗ್ಯಕ್ಕೆ ಹಾನಿಕಾರಕ. ಇದು ಸಂಪೂರ್ಣ ಕಾನೂನು ಬಾಹಿರ. ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ. ಇನ್ಮುಂದೆ ಬಳಸುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

    bangalore

    ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ

    Published

    on

    ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

    ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
    ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    bangalore

    ಗೋಬಿ ಮಂಚೂರಿ ಆಯ್ತು..! ಈಗ ಚಿಕನ್‌ ಕಬಾಬ್‌, ಫಿಶ್‌ ಫುಡ್‌ ಮೇಲೆ ಕಣ್ಣು…!

    Published

    on

    ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.


    ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.

    ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.

    Continue Reading

    LATEST NEWS

    Trending