Monday, October 18, 2021

ಪುತ್ತೂರು: ತನ್ನದೇ ಅಧಿಕಾರಿಗೆ ಸಂಬಳ ನೀಡದೇ ಸತಾಯಿಸುತ್ತಿದೆ ಅರಣ್ಯ ಇಲಾಖೆ

ಪುತ್ತೂರು: ಸರಕಾರಿ ಅಧಿಕಾರಿಯೊಬ್ಬರಿಗೆ ವೈಯಕ್ತಿಕ ಧ್ವೇಷಕ್ಕೆ ಅಮಾನತು ಮಾಡಿ, ಸಂಬಳ ನೀಡದೇ ಸತಾಯಿಸುತ್ತಿದ್ದುದನ್ನು ಪ್ರಶ್ನಿಸಿ ರಾಜ್ಯ ಆಡಳಿತ ನ್ಯಾಯಾಧೀಕರಣ ಮೊರೆ ಹೋಗಿ ಅಧಿಕಾರಿ ಪರವಾಗಿ ತೀರ್ಪು ನೀಡಿದರೂ ಸಂಬಳ ನೀಡದೇ ಸತಾಯಿಸುತ್ತಿರುವ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ.


ಪುತ್ತೂರು ಉಪ ವಲಯ ಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ಅವರನ್ನು ಹಿರಿಯ ಅಧಿಕಾರಿಗಳು ಸರಿಯಾದ ಕಾರಣವಿಲ್ಲದೇ ಅಮಾನತು ಮಾಡಿದ್ದರು.

ಈ ಕ್ರಮವನ್ನು ಪ್ರಶ್ನಿಸಿ ಅಧಿಕಾರಿ ಸಂಜೀವ್‌ ರಾಜ್ಯ ಆಡಳಿತ ನ್ಯಾಯಾಧೀಕರಣ ಮೊರೆ ಹೋಗಿದ್ದರು.

ಈ ವೇಳೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಧೀಕರಣವು ಪುತ್ತೂರು ಉಪ ವಲಯಾಧಿಕಾರಿ ಪರವಾಗಿ ತೀರ್ಪು ನೀಡಿತ್ತು.

ಹೀಗಿದ್ದರೂ ಹಿರಿಯ ಅಧಿಕಾರಿಗಳು ಸಂಬಳ ನೀಡಿದೇ ಮತ್ತೆ ಸತಾಯಿಸುತ್ತಿದ್ದಾರೆ.

ಈ ಮೂಲಕ ನ್ಯಾಯಾಧೀಕರಣ ತೀರ್ಪನ್ನು ಉಲ್ಲಂಘಿಸಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ಸಂಜೀವ ಪೂಜಾರಿ ತಂದಿದ್ದರು.

ಆದರೂ ಕೂಡ ನನಗೆ ಮೇಲಾಧಿಕಾರಿಗಳಿಂದ ಯಾವುದೇ ಪ್ರಯೋಜನವಾಗಿಲ್ಲ.

ವೈಯಕ್ತಿಕ ಧ್ವೇಷದಿಂದಾಗಿ ಈ ರೀತಿ ಮಾಡಲಾಗುತ್ತಿದೆ ಎಂದು ಸಂಜೀವ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...