ಕಡಬ : ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ದ.ಕ ಜಿಲ್ಲೆಯ ಕಡಬ ತಾಲೂಕಿನ ಇತಿಹಾಸ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ಧಾರೆ.
ಕ್ಷೇತ್ರದಲ್ಲಿ ಶ್ರೀ ದೇವರ ದರುಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆಗೆ ಇಂದು ಸಂಕಲ್ಪ ಮಾಡಿದ್ದು ನಾಳೆ ಪೂಜೆ ನೆರವೇರಲಿದೆ.
ಹೀಗಾಗಿ ರಾಜ್ಯಪಾಲರ ಕುಟುಂಬ ಇಂದು ಕ್ಷೇತ್ರದಲ್ಲೇ ತಂಗಲಿದ್ದಾರೆ.ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ರಾಜ್ಯಪಾಲರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು,
ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ರು.ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಋಷಿಕೇಶಿ ಸೋಣವಾಣೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ರು.