Connect with us

    LATEST NEWS

    ದಸರಾ ಸಂಭ್ರಮ: ಅಕ್ಟೋಬರ್ 3 ರಿಂದ 20 ರವರೆಗೆ ಶಾಲೆಗಳಿಗೆ ರಜೆ

    Published

    on

    ಬೆಂಗಳೂರು: ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.

    ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ.

    2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

    ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಬಾಲಕನ ಮರ್ಮಾಂಗದೊಂದಿಗೆ ಸಹಪಾಠಿಗಳ ಆಟ; ಆಸ್ಪತ್ರೆಗೆ ದಾಖಲಾದ ಬಾಲಕ

    Published

    on

    ಸುಳ್ಯ: ಹಾಸ್ಟೇಲ್ನಲ್ಲಿ ಉಳಿದು ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವೆಳೆದು ಗೆಳೆಯರು ಆಟವಾಡಿದ ಪರಿಣಾಮವಾಗಿ ಮರ್ಮಾಂಗಕ್ಕೆ ಹಾನಿಯಾಗಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.


    ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷದ ಬಾಲಕ ಕೆಲ ಸಮಯದಿಂದ ಕೊಡಗು ಸಂಪಾಜೆಯ ಹಾಸ್ಟೇಲ್ನಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ. ಸೆ.14 ರಂದು ಇಬ್ಬರು ಸಹಪಾಠಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವು ಬಂತೆಂದು ಮನೆಗೆ ಮರಳಿದ್ದಾನೆ.
    ತಾಯಿಯೊಡನೆ ವಿಷಯ ಹೇಳಿಕೊಂಡಾಗ ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಾಲಕ ಚೇತರಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ

    Continue Reading

    LATEST NEWS

    ವಿಧಾನ ಪರಿಷತ್ ಚುನಾವಣೆ: ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಡಿ.ಸಿ. ಸೂಚನೆ

    Published

    on

    ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚನೆ ನೀಡಿದ್ದಾರೆ.

    ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚೆಕ್ ಪೋಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆ ಆಗುವ ಎಲ್ಲಾ ನೀತಿ ಸಂಹಿತೆಗಳು ಈ ಚುನಾವಣೆಗೂ ಅನ್ವಯವಾಗಲಿವೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು. ಪ್ರಚಾರ ಸಭೆಗಳಿಗೆ ಅನುಮತಿ ಪಡೆಯಬೇಕಾಗುತ್ತದೆ. ವಿವಿಧ ಅನುಮತಿಗಳು ಒಂದೇ ಕಡೆ ಸಿಗುವಂತಾಗಲು ಏಕಗವಾಕ್ಷಿ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಕ್ಷೇತ್ರದ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್‌ ಕುಮಾರ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಬಿಜೆಪಿಯಿಂದ ನಿತಿನ್ ಕುಮಾರ್ ಮತ್ತು ಗುರುಚರಣ್, ಕಾಂಗ್ರೆಸ್‌ ಪಕ್ಷದ ನೀರಜ್ ಪಾಲ್, ಜೆಡಿಎಸ್‌ ನಿಂದ ಮುನೀರ್ ಮುಕ್ಕಚೇರಿ, ಆಮ್ ಆದ್ಮಿ ಪಾರ್ಟಿಯಿಂದ ಶನೋನ್ ಲಾರೆನ್ಸ್ ಮತ್ತಿತರರು ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಭೂಮಿ ಕುಸಿದು ಗುಂಡಿಯೊಳಗೆ ಬಿದ್ದ ಟ್ರಕ್; ಭಯಾನಕ ವೀಡಿಯೋ ವೈರಲ್

    Published

    on

    ಮಂಗಳೂರು/ ಮಹಾರಾಷ್ಟ್ರ: ಪೋಸ್ಟ್‌ ಆಫೀಸ್‌ ಕಾಂಪ್ಲೆಕ್ಸ್‌ನ ನೆಲ ಏಕಾ ಏಕಿ ಕುಸಿದು ಬಿದ್ದ ಕಾರಣ ಮುನ್ಸಿಪಲ್‌ ಕಾರ್ಪೋರೇಷನ್‌ಗೆ ಸೇರಿದ್ದ ಟ್ರಕ್‌ ಒಂದು ಗುಂಡಿಗೆ ಬಿದ್ದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ನಗರದ ಅಂಚೆ ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದೆ.

    ಟ್ರಕ್‌ ಪುಣೆ ಮುನ್ಸಿಪಲ್ ಕಾರ್ಪೋರೆಷನ್‌ಗೆ ಸೇರಿದ್ದಾಗಿದ್ದು, ಚರಂಡಿ ಸ್ವಚ್ಚಗೊಳಿಸುವ ಕೆಲಸಕ್ಕೆ ಪೋಸ್ಟ್ ಆಫೀಸ್ ಬಳಿ ಬಂದಿತ್ತು. ಈ ವೇಳೆ ಟ್ರಕ್‌ ನಿಲ್ಲಿಸಿದ್ದ ಜಾಗದಲ್ಲೇ ಭೂಮಿ ಕುಸಿದು ಟ್ರಕ್‌ ಭೂಮಿಯ ಒಡಲಿಗೆ ಜಾರಿದೆ. ಈ ವೇಳೆ ಟ್ರಕ್‌ನಲ್ಲಿದ್ದ ಚಾಲಕ ಹಾರಿ ತಪ್ಪಿಸಿಕೊಂಡ ಕಾರಣ ಪ್ರಾ*ಣಾಪಾಯದಿಂದ ಪಾರಾಗಿದ್ದಾನೆ. ಭೂಮಿ ಕುಸಿದ ಕಾರಣ ಸುಮಾರು 40ರಿಂದ50 ಅಡಿ ಆಳದ ಗುಂಡಿ ನಿರ್ಮಾಣವಾಗಿದ್ದು, ಟ್ರಕ್‌ ಇದರಲ್ಲಿ ಸಿಲುಕಿಕೊಂಡಿದೆ.

    ಇದನ್ನೂ ಓದಿ : ವ್ಯಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ

    ಅನಿರೀಕ್ಷಿತವಾಗಿ ಸಂಭವಿಸಿದ ಈ ಘಟನೆಯ ಬಗ್ಗೆ ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪೋಸ್ಟ್ ಆಫೀಸ್ ಮುಂಬಾಗದಲ್ಲಿ ಈ ರೀತಿ ಕುಸಿತ ಆಗಲು ಕಾರಣ ಏನು ಅನ್ನೋ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕ್ರೇನ್‌ ಹಾಗೂ ಜೆಸಿಬಿ ಸಹಾಯದಿಂದ ಟ್ರಕ್‌ ಮೇಲೆತ್ತಲಾಗಿದೆ.

    Continue Reading

    LATEST NEWS

    Trending