Thursday, March 23, 2023

ರಾಜ್ಯದಲ್ಲಿ ವೀಕೆಂಡ್‌ ಕರ್ಫ್ಯೂ ಜಾರಿ : ಬೆಂಗಳೂರಿನಲ್ಲಿ ಶಾಲೆಗಳಿಗೆ ರಜೆ..!

ಬೆಂಗಳೂರು : ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ..

ಇಂದು ರಾತ್ರಿ ಕೋವಿಡ್‌ ನಿಯಂತ್ರಣ ಕುರಿತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಕೆಳಕಂಡಂತೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಕೋವಿಡ್‌ನ ಮೊದಲ ಅಲೆ ವೇಳೆ ಸೋಂಕಿತರ ಸಂಖ್ಯೆ ದ್ವಿಗುಣವಾಗಲು 15 ದಿನ ತೆಗೆದುಕೊಂಡರೆ ಎರಡನೇ ಅಲೆ ವೇಳೆ 8 ರಿಂದ 10 ದಿನ ತೆಗೆದುಕೊಂಡಿತ್ತು. ಇದೀಗ ಒಂದರಿಂದ ಎರಡೇ ದಿನಕ್ಕೆ ಸೋಂಕು ದ್ವಿಗುಣವಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ಹೇಳಿದ್ದಾರೆ.

ಸರ್ಕಾರದ ವಿಧಿಸಿದ ನಿರ್ಬಂಧಗಳು ಹೀಗಿವೆ..

1. ಬೆಂಗಳೂರಿನಲ್ಲಿ ಜನವರಿ 6 ರಿಂದ ಮುಂದಿನ 2 ವಾರಗಳ ಕಾಲ 10 ಮತ್ತು 11ನೇ ತರಗತಿ ಹೊರತುಪಡಿಸಿ ಉಳಿದೆಲ್ಲಾ ತರಗತಿಗಳಿಗೆ ಆನ್ಲೈನ್‌ ಕ್ಲಾಸ್.

2. 10 ಮತ್ತು ಪ್ರಥಮ ಪಿಯು ತರಗತಿಗಳು ಯಥಾವತ್ತಾಗಿ ನಡೆಯಲಿದೆ.

3. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್‌ ಕರ್ಫ್ಯೂ ಜಾರಿ

4. ಸಾರ್ವಜನಿಕ ಸ್ಥಳದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಶೇ. 50ರಷ್ಟು ಮಾತ್ರ ಜನರು ಸೇರಲು ಅನುಮತಿ, ಡಬಲ್ ಡೋಸ್‌ ಕಡ್ಡಾಯ

5. ಹೊರಾಂಗಣ ಮದುವೆ ಕಾರ್ಯಕ್ರಮದಲ್ಲಿ 200 ಜನ, ಒಳಾಂಗಣ ಮದುವೆಯಲ್ಲಿ 100 ಜನರು ಪಾಲ್ಗೊಳ್ಳಲು ಅವಕಾಶ

6. ನಮ್ಮ ಮೆಟ್ರೋ, ಬಸ್‌, ರೈಲುಗಳ ಸೀಟು ಸಾಮರ್ಥ್ಯಕ್ಕೆ ಅನುಗುಣವಾಗಿ ಅವಕಾಶ

7. ಚರ್ಚ್‌, ಮಸೀದಿ, ದೇವಸ್ಥಾನಗಳಲ್ಲಿ ಪೂಜೆ, ದರ್ಶನಕ್ಕೆ ಅವಕಾಶ, ಶೇ 50ರಷ್ಟು ಜನ ಸೇರಲು ಅವಕಾಶ

8. ಕ್ರೀಡಾ ಕಾಂಪ್ಲೆಕ್ಸ್‌, ಜಿಮ್‌, ಸ್ವಿಮ್ಮಿಂಗ್‌ ಫೂಲ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ

9. ರಾಜಕೀಯ ರ‍್ಯಾಲಿ, ಧರಣಿ ಹಾಗೂ ಪ್ರತಿಭಟನೆಗಳಿಗೆ ಸಂಪೂರ್ಣ ನಿರ್ಬಂಧ

LEAVE A REPLY

Please enter your comment!
Please enter your name here

Hot Topics

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...