Connect with us

DAKSHINA KANNADA

ದೂರದೃಷ್ಟಿ ಇಲ್ಲದ ಒಳಚರಂಡಿ ಯೋಜನೆಗಳಿಂದ ಭವಿಷ್ಯದಲ್ಲಿ ಅಪಾಯ : ಬಿಜೆಪಿ ವಿರುದ್ಧ ರವೂಫ್‌ ಆಕ್ರೋಶ

Published

on

ದೂರದೃಷ್ಟಿ ಇಲ್ಲದ ಒಳಚರಂಡಿ ಯೋಜನೆಗಳಿಂದ ಭವಿಷ್ಯದಲ್ಲಿ ಅಪಾಯ : ಬಿಜೆಪಿ ವಿರುದ್ಧ ರವೂಫ್‌ ಆಕ್ರೋಶ

ಮಂಗಳೂರು : ಯಾವುದೇ ಯೋಜನೆಗಳನ್ನು ಮಾಡುವಾಗ ಹತ್ತುಹದಿನೈದು ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ನಾವು ಯೋಜನೆಗಳನ್ನು ರೂಪಿಸಬೇಕು. ಅದರಲ್ಲೂ ಸರಕಾರದಲ್ಲಿರುವ, ಆಡಳಿತ ನಡೆಸುವವರಿಗೆ ಈ ಹೊಣೆಗಾರಿಕೆ ಹೆಚ್ಚಿದೆ.

ಆದರೆ ಬಿಜೆಪಿ ಯಾವುದೇ ದೂರದೃಷ್ಟಿ ಇರಿಸದೇ ಕಾಮಗಾರಿಗಳನ್ನು ನಡೆಸುತ್ತಿದೆ. ಇದರಿಂದ ಭವಿಷ್ಯದಲ್ಲಿ ಸಮಸ್ಯೆಗಳು ಎದುರಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಅಬ್ದುಲ್‌ ರವೂಫ್‌ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಾಲಿಕೆಯಲ್ಲಿ ಇದೀಗ ಸ್ಮಾರ್ಟ್‌ ಸಿಟಿ ಯೋಜನೆಯಡಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಇದನ್ನು 25 ವರ್ಷಗಳ ದೂರದೃಷ್ಟಿ ಯೋಜನೆ ಇಟ್ಟುಕೊಂಡು ಕೆಲಸ ಮಾಡಬೇಕು. ಒಳಚರಂಡಿಗೆ 12 ಇಂಚಿನ ಪೈಪ್‌ಲೈನ್‌ ಅಳವಡಿಸಬೇಕು.

ಆದರೆ ಬಿಜೆಪಿ ಆಡಳಿತ ಮುಖ್ಯ ರಸ್ತೆಗೆ ಕೇವಲ 8 ಇಂಚಿನ ಪೈಪ್‌ ಅಳವಡಿಸುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಈ ಸಮಸ್ಯೆ ಇನ್ನೂ ಬಿಗಡಾಯಿಸಲಿದೆ.

ಇಂದಿನ ಜನಸಂಖ್ಯೆಯೂ, ಮುಂದಿನ 30 ವರ್ಷಗಳ ಭವಿಷ್ಯದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು 12 ಇಂಚಿನ ಪೈಪ್ ಹಾಕಿ ಕೆಲಸ ಮಾಡಿಸಲಿ ಎಂದು ಆಗ್ರಹಿಸಿದರು.

ಒಳಚರಂಡಿ ಕೆಲಸ ಉಳಿದ ಕೆಲಸದಂತೆ ಅಲ್ಲ. ಅದಕ್ಕೆ ಸೂಕ್ತ ಲೆವೆಲ್‌ ಇರಬೇಕು, ನೀರು ಸಾಗಾಟದ ಮಟ್ಟ  ನೋಡಬೇಕು. ಅದರ ಪರಿಣಿತರನ್ನು ಕರೆಸಿ ಸಮಗ್ರವಾಗಿ ಚರ್ಚಿಸಿ ಅನುಭವ ಇದ್ದವರನ್ನೇ ಕಾಮಗಾರಿಗೆ ನೇಮಿಸಿ ಕೆಲಸವನ್ನು ಮಾಡಿಸಬೇಕು.

ಅನುಭವ ಇಲ್ಲದವರಿಗೆ ಇಂತಹ ಕೆಲಸಗಳನ್ನು ಮಾಡಿಸಿದರೆ ಇದು ಭವಿಷ್ಯದಲ್ಲಿ ಸಮಸ್ಯೆ ಸೃಷ್ಟಿಗೆ ಕಾರಣ. ಇನ್ನಾದರೂ ಇಂತಹ ವಿಚಾರಗಳ ಬಗ್ಗೆ ಗಮನ ನೀಡಲಿ ಎಂದರು. ಪ್ರತಿಪಕ್ಷ ಕಾಂಗ್ರೆಸ್‌ನೊಂದಿಗೆ ಚರ್ಚಿಸಿ ಕೆಲಸ ಮಾಡಲಿ ಎಂದರು.

DAKSHINA KANNADA

ಚೈತ್ರಾ ಹೆಬ್ಬಾರ್ ನಾಪತ್ತೆ ಹಿಂದೆ ಅನ್ಯಕೋಮಿನ ಯುವಕನ ಕೈವಾಡ ಶಂಕೆ- ಆರೋಪಿಯ ಬಂಧಿಸಲು ಹಿಂದೂ‌ ಸಂಘಟನೆ ಒತ್ತಾಯ

Published

on

ಪುತ್ತೂರು: ಮಾಡೂರು ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ, ಲವ್ ಜಿಹಾದ್ ಶಂಕೆಯನ್ನು ವ್ಯಕ್ತಪಡಿಸಿದ ಹಿಂದೂ‌ ಸಂಘಟನೆ ಮುಖಂಡರು, ಇದೀಗ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಆಕೆ ನಾಪತ್ತೆ ಪ್ರಕರಣದ ಹಿಂದೆ ಇದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಪುತ್ತೂರಿನ ಕೂರ್ನಡ್ಕದಲ್ಲಿ ವಾಸವಿದ್ದ ಶಾರೂಕ್ ಶೇಖ್ ಮೂಲತಃ ಬಂಟ್ವಾಳದ ನೇರಳಕಟ್ಟೆಯ ನಿವಾಸಿಯಾಗಿದ್ದಾನೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಶಂಕಿತ ಬರುತ್ತಿದ್ದ. ಚೈತ್ರಾ ಪೋಷಕರಿಗೆ ಮಾಡೂರು ಬಜರಂಗದಳ ಮುಖಂಡರು ಮಾಹಿತಿಯನ್ನೂ ನೀಡಿದ್ದರು. ಇದೀಗ ಮಾಹಿತಿ ನೀಡಿದ ಬಳಿಕ ನಾಪತ್ತೆಯಾದ ಚೈತ್ರಾ ಹೆಬ್ಬಾರ್‌ ಹಿಂದೆ ಈ ಆರೋಪಿ ಇರುವುದು ದೃಢಪಡುತ್ತಿರುವುದರಿಂದ ಎರಡು ದಿನದಲ್ಲಿ ಚೈತ್ರಾಳನ್ನು ಪೊಲೀಸರು ಕರೆ ತರಬೇಕು. ಇಲ್ಲದೇ ಇದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರಾಂತ ಸಂಚಾಲಕ ಮುರಳಿ ಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.

Continue Reading

DAKSHINA KANNADA

Ullala: ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಸ್ಕೂಟರ್ ಪತ್ತೆ..!

Published

on

ಮಂಗಳೂರು: ಉಳ್ಳಾಲದ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ.

ಮಾಡೂರಿನ ಪಿಜಿ ಯಿಂದ ಫೆ.17 ರಂದು ಮುಂಜಾನೆ 9 ಗಂಟೆಗೆ ಚೈತ್ರಾ ಇದೇ ಸ್ಕೂಟರ್‌ನಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದ ಚೈತ್ರಾ ಸುಳಿವು ಸಿಗದೆ ಹಿನ್ನೆಲಯಲ್ಲಿ ಚೈತ್ರಾ ದೊಡ್ಡಪ್ಪ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಹಿಂದೂ ಸಂಘಟನೆಗಳೂ ಇದೊಂದು ಲವ್‌ ಜಿಹಾದ್ ಪ್ರಕರಣವೆಂದು ಆರೋಪಿಸಿ ಹೋರಾಟದ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ತನಿಕೆ ಚುರುಕುಗೊಳಿಸಿ ಪೊಲೀಸರಿಗೆ ಇದೀಗ ಚೈತ್ರಾಳ ಸ್ಕೂಟರ್ ಪತ್ತೆಯಾಗಿದೆ. ಚೈತ್ರ ಪಿಜಿಯಿಂದ ಹೊರಟ ಬಳಿಕ ಪಂಪ್‌ವೆಲ್ ಬಳಿ ಮೊಬೈಲ್ ಆಫ್ ಮಾಡಿಕೊಂಡಿದ್ದು ಬಳಿಕ ಸುರತ್ಕಲ್‌ಗೆ ಬಂದು ಅಲ್ಲಿ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದರು, ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡಿಸಿರುವ ಪೊಲೀಸರು ಶಂಕಿತ ಯುವಕನ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಆದರೆ ಆತನ ಮೊಬೈಲ್ ಕೂಡಾ ಸ್ವಿಚ್‌ ಆಫ್ ಆಗಿರುವ ಕಾರಣ ಚೈತ್ರಾ ಆತನ ಜೊತೆಯಲ್ಲಿ ಹೋಗಿರುವ ಬಲವಾದ ಅನುಮಾನ ಮೂಡಿದೆ. ಕೇರಳ ಅಥವಾ ಬೆಂಗಳೂರಿಗೆ ಹೋಗಿರುವ ಸಾದ್ಯತೆ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading

DAKSHINA KANNADA

Mangaluru: ಮನೆಗೆ ಆಕಸ್ಮಿಕ ಬೆಂಕಿ- ಸೊತ್ತುಗಳು ಸಂಪೂರ್ಣ ನಾಶ..!

Published

on

ಮಂಗಳೂರು: ಮಂಗಳೂರಿನ ಸಸಿಹಿತ್ಲು ಬೀಚ್ ಬಳಿಯ ದಾoಡಿ ಮನೆಯ ಶ್ಯಾಮಲಾ ಎಂಬವರ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಫೆ.24ರಂದು ನಡೆದಿದೆ.

ಮನೆಯಲ್ಲಿ ಶ್ಯಾಮಲಾ ಮತ್ತು ಅವರ ಪುತ್ರ ಮಾತ್ರ ವಾಸಿಸುತ್ತಿದ್ದು, ಇಬ್ಬರೂ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಆಗ್ನಿ ದುರಂತ ನಡೆದಿದೆ. ಬೆಂಕಿ ತಗುಲಿದ್ದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರಿಗೂ ಮಾಹಿತಿ ನೀಡಿದ್ದು, ಬಳಿಕ ಅವರೂ ಬಂದಿದ್ದಾರೆ. ಕ್ಯಾಟರಿಂಗ್ ಸಂಸ್ಥೆಯ 4 ಟ್ಯಾಂಕ್‌ ನೀರನ್ನು ತರಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಲಾಗಿದೆ. ಆದರೆ ಅಷ್ಟರಲ್ಲಿ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು.

ಗ್ಯಾಸ್‌ ಸಂಪರ್ಕವನ್ನು ತೆಗೆದು ಹೊರಗೆ ಇರಿಸಿದ್ದರಿಂದ ಭಾರೀ ದುರಂತ ತಪ್ಪಿದೆ. ಬಟ್ಟೆ ಬರೆಗಳೆಲ್ಲ ಸುಟ್ಟು ಹೋಗಿವೆ. ಕಪಾಟಿನಲ್ಲಿದ್ದ 20 ಸಾವಿರ ರೂಪಾಯಿ ನಗದು ಮತ್ತು ಒಂದು ಲಕ್ಷ ರೂಪಾಯಿ ಅಂದಾಜು ಬೆಲೆಯ ಚಿನ್ನಾಭರಣ ಬೆಂಕಿಗೆ ಆಹುತಿಯಾಗಿದೆ ಎಂದು ಶ್ಯಾಮಲಾ ಅವರು ತಿಳಿಸಿದ್ದಾರೆ. ಮಾಹಿತಿ ಲಭಿಸಿದ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಮನೆ ಮಂದಿಗೆ ತಾತ್ಕಾಲಿಕವಾಗಿ ಪಕ್ಕದ ಬಾಡಿಗೆ ಮನೆಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ.

ನಷ್ಟದ ಪ್ರಮಾಣ ಅಂದಾಜಿಸಿಲ್ಲ. ದೇವರ ದೀಪಕ್ಕೆ ಇರಿಸಿದ್ದ ಹಣತೆಯನ್ನು ಇಲಿ ಮಗುಚಿ ಹಾಕಿದ ಪರಿಣಾಮ ಬೆಂಕಿ ಹಿಡಿದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Continue Reading

LATEST NEWS

Trending