Connect with us

DAKSHINA KANNADA

ಅಂತರ್ ರಾಜ್ಯ ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರ..! ಆದರೆ ಕಾಸರಗೋಡು..!?

Published

on

ಅಂತರ್ ರಾಜ್ಯ ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರ..! ಆದರೆ ಕಾಸರಗೋಡು..!?

ಬೆಂಗಳೂರು: ರಾಜ್ಯಕ್ಕೆ ಬರುವ ಅಂತಾರಾಜ್ಯ ಪ್ರಯಾಣಿಕರಿಗೆ ಸರ್ಕಾರ ಶುಭ ಸುದ್ದಿ ನೀಡಿದೆ. ಈ ಹಿನದಿನ ಎಲ್ಲಾ ಆದೇಶಗಳನ್ನು ರದ್ದುಗೊಳಿಸಿ ಪರಿಷ್ಕೃತ ಆದೇಶ ಹೊರಡಿಸಿದ್ದು, ಅದರ ಪ್ರಕಾರ ರಾಜ್ಯಕ್ಕೆ ಆಗಮಿಸುವ ಎಲ್ಲಾ ಅಂತರ ರಾಜ್ಯ ಪ್ರಯಾಣಿಕರಿಗೆ ಕೋವಿಡ್-19 ರೋಗ ಲಕ್ಷಣಗಳಿಲ್ಲದಿದ್ದಲ್ಲಿ 14 ದಿನಗಳ ಕ್ವಾರಂಟೈನ್ ಅಗತ್ಯವಿರುವುದಿಲ್ಲ, 

ಸೇವಾ ಸಿಂಧು ಆ್ಯಪ್‍ನಲ್ಲಿ ರಿಜಿಸ್ಟರ್ ಮಾಡುವ ಅಗತ್ಯವಿಲ್ಲ ಮತ್ತು ಅವರು ರಾಜ್ಯಕ್ಕೆ ಆಗಮಿಸಿದ ಬಳಿಕ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

ಈ ಪರಿಷ್ಕೃತ ಸುತ್ತೋಲೆ ಅನ್ವಯ ಕರ್ನಾಟಕಕ್ಕೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಆಗಮಿಸುವ ವ್ಯಾಪಾರಿಗಳು, ವಿದ್ಯಾರ್ಥಿಗಳು ಕೆಲಸಕ್ಕೆ ಬರುವ ಕಾರ್ಮಿಕರು, ಸಾರಿಗೆ ಮಧ್ಯಂತರ ಪ್ರಯಾಣಿಕರು ಇತರರಿಗೆ ಅನ್ವಯಿಸುತ್ತದೆ. ಅವರ ಭೇಟಿ ಉದ್ದೇಶ ಅಥವಾ ರಾಜ್ಯದಲ್ಲಿ ಉಳಿದುಕೊಳ್ಳುವ ಅವಧಿಯನ್ನು ಲೆಕ್ಕಿಸದೇ, ಎಲ್ಲ ಜಿಲ್ಲಾಧಿಕಾರಿಗಳು, ಇದನ್ನು ತ್ವರಿತವಾಗಿ ಯಾವುದೇ ಬದಲಾವಣೆಯಿಲ್ಲದೆ ಜಾರಿಗೆ ತರಲು ಸೂಚಿಸಲಾಗಿದೆ.

ಆದರೆ ರಾಜ್ಯಕ್ಕಾಗಮಿಸಿದ ದಿನದಿಂದ 14 ದಿನಗಳವರೆಗೆ ಕೊರೋನ ರೋಗ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ಗಂಟಲುನೋವು, ಉಸಿರಾಟದ ತೊಂದರೆ ಇತ್ಯಾದಿಗಳ ಮೇಲೆ ಸ್ವಯಂ-ನಿಗಾ ವಹಿಸಬೇಕು.

ಈ ವೇಳೆಯಲ್ಲಿ ರೋಗ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯಕೀಯ ಸಮಾಲೋಚನೆ ಪಡೆಯಬೇಕು ಅಥವಾ ಆಪ್ತಮಿತ್ರ ಸಹಾಯವಾಣಿ 14410 ಗೆ ಕರೆ ಮಾಡಬೇಕಾಗಿದೆ.

ಅದೇ ರೀತಿ ಕೋವಿಡ್-19 ಲಕ್ಷಣಗಳಿದ್ದಲ್ಲಿ ತಕ್ಷಣವೇ ಸ್ವಯಂ ಪ್ರತ್ಯೇಕವಾಗಿರಬೇಕು ಮತ್ತು ತಪ್ಪದೇ ವೈದ್ಯಕೀಯ ಸಮಾಲೋಚನೆ ಪಡೆಯುವುದು ಅಥವಾ ಆಪ್ತಮಿತ್ರ ಸಹಾಯವಾಣಿ 14410 ಗೆ ಕರೆ ಮಾಡಬೇಕು.

ರೋಗವನ್ನು ತಡೆಗಟ್ಟಲು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, 2 ಮೀಟರ್ ದೈಹಿಕ ಅಂತರ ಕಾಪಾಡಬೇಕು,

ಸಾಬೂನಿನಿಂದ ಆಗಾಗ ಕೈ ತೊಳೆಯುತ್ತಿರಬೇಕು, ಕೈ ಸ್ಯಾನಿಟೈಸರ್ ಬಳುವುದು, ಕೆಮ್ಮುವಾಗ ಶಿಷ್ಟಾಚಾರ ಪಾಲಿಸುವುದು ಇತ್ಯಾದಿ ಮುನ್ನಚ್ಚರಿಕಾ ಕ್ರಮಗಳನ್ನು ಸಾರ್ವಜನಿಕ ಹಾಗೂ ಕೆಲಸದ ಸ್ಥಳದಲ್ಲಿ ಪಾಲಿಸಬೇಕು ಎಂದು ಹೇಳಲಾಗಿದೆ.

ಅಲ್ಲದೆ, ಇತರೆ ರಾಜ್ಯಗಳಿಂದ ಬರುವವರಿಗೆ ರೋಗ ಲಕ್ಷಣದ ಸ್ವಯಂ ವರದಿ ಮಾಡುವಿಕೆಯ ಮಹತ್ವ, ಸ್ವಯಂ ಪ್ರತ್ಯೇಕತೆ ಹಾಗೂ ರೋಗ ಲಕ್ಷಣಗಳುಳ್ಳ ವ್ಯಕ್ತಿಗಳು ಕೋವಿಡ್-19 ಪರೀಕ್ಷೆ ಮಾಡಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಬಿಬಿಎಂಪಿ ಸೂಕ್ತ ಐಇಸಿ ಅಭಿಯಾನ ಆಯೋಜಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending