Wednesday, May 18, 2022

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ: ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ವಿರೋಧ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಧಾರ್ಮಿಕ ಹಕ್ಕು ಮತ್ತು ಸಂರಕ್ಷಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.

ನಿನ್ನೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.

ಈ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಲವಂತ, ವಂಚನೆ , ಒತ್ತಾಯ ಮತ್ತು ಆಮಿಷದ ಮೂಲಕ ನಡೆಸುವ ಮತಾಂತರ ನಿಷೇಧ, ಮತಾಂತರಗೊಂಡವರ ಪೋಷಕರು, ಸಹೋದರ, ಸಹೋದರಿ, ಸಹವರ್ತಿ, ಸಹೋದ್ಯೋಗಿಗಲು ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್.ಐ.ಆರ್ ಹಾಗೆಯೇ ಬಲವಂತದ ಮತಾಂತರಕ್ಕೆ 3-5 ವರ್ಷ ಜೈಲು, 25000 ಸಾವಿರ ದಂಡ ಮತ್ತು ಅಪ್ರಾಪ್ತ ವ್ಯಕ್ತಿ , ಮಹಿಳೆ, ಎಸ್‌.ಎಸ್‌ಟಿ ವ್ಯಕ್ತಿಯ ಬಲವಂತದ ಮತಾಂತರಕ್ಕೆ 3-10 ವರ್ಷ ಜೈಲು, 50 ಸಾವಿರ ರೂ ದಂಡ, ಹಾಗೂ ಮತಾಂತರ ಬಯಸುವ ವ್ಯಕ್ತಿ ಕನಿಷ್ಠ 2 ತಿಂಗಳು ಮೊದಲು ಜಿಲ್ಲಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು ಎಂಬಿತ್ಯಾದಿ ವಿಚಾರಗಳನ್ನು ನಮೂದಿಸಲಾಗಿದೆ.

ಬೆಳಗಾವಿ ಅಧಿವೇಶನದ ವೇಳೆ ವಿಧಾನ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರಗೊಂಡಿದೆ. ಆದರೆ ಕಾರಣಾಂತರಗಳಿಂದ ವಿಧಾನಪರಿಷತ್‌ನಲ್ಲಿ ಮಂಡಿಸಿ ಅನುಮೋದನೆ ಪಡೆಯಲು ಸಾಧ್ಯವಾಗಿಲ್ಲ. ಸಂವಿಧಾನ ಸರ್ಕಾರಕ್ಕೆ ನೀಡಿರುವ ಅವಕಾಶವನ್ನು ಬಳಕೆ ಮಾಡಿಕೊಂಡು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಶೀಘ್ರದಲ್ಲಿಯೇ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ರವಾನಿಸಲಾಗುವುದು, ರಾಜ್ಯಪಾಲರು ಅಂಕಿತ ಹಾಕಿದ ಬಳಿಕ ಮತಾಂತರ ನಿಷೇಧ ಕಾಯ್ದೆಯು ರಾಜ್ಯದಲ್ಲಿ ಅನುಷ್ಠಾನಕ್ಕೆ ಬರಲಿದೆ,

ಮುಂದಿನ ಅಧಿವೇಶನದ ವೇಳೆ ವಿಧಾನಪರಿಷತ್‌ನಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗುವುದು. ಈ ಹಿಂದೆ ವಿಧಾನಸಭೆಯಲ್ಲಿ ಮಂಡಿಸಿದ ವೇಳೆ ರೂಪಿಸಿದ ಅಂಶಗಳೇ ಯಥಾವತ್ತಾಗಿ ಸುಗ್ರೀವಾಜ್ಞೆಯಲ್ಲಿ ಇರಲಿವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Hot Topics

ಕಿನ್ನಿಗೋಳಿ: ಗಾಳಿಮಳೆಗೆ ರಸ್ತೆಗೆ ಉರುಳಿದ ಮರ

ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ.ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್...

ಉಡುಪಿ: ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ದಾರುಣ ಸಾವು

ಉಡುಪಿ: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ನಡದಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ...

ಕಾಂಗ್ರೆಸ್‌ ಪಕ್ಷಕ್ಕೆ ‘ಕೈ’ ಕೊಟ್ಟ ಹಾರ್ದಿಕ್‌ ಪಟೇಲ್‌: ಟ್ವಿಟ್ಟರ್‌ನಲ್ಲಿ ಘೋಷಣೆ

ಅಹಮದಾಬಾದ್‌: ಕಾಂಗ್ರೆಸ್‌ ಯುವ ಮುಖಂಡ ಹಾಗೂ ಗುಜರಾತ್‌ನ ಪಾಟಿದಾರ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿಮಾತುಕತೆ ನಡೆಸಿದ...