ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹಿನ್ನೆಡೆಯಾಗಿದೆ. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಅಕ್ಟೋಬರ್ 21) ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಒಂದಲ್ಲ ಎರಡಲ್ಲ ನಾಲ್ಕು ಕೇಸ್ಗಳ ಪೈಕಿ ಮೂರೂ ಪ್ರಕರಣಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಎರಡು ಅತ್ಯಾಚಾರ, ಒಂದು ಮಹಿಳೆ ಅಶ್ಲೀಲ ದೃಶ್ಯ ಸೆರೆಹಿಡಿದ ಪ್ರಕರಣದ ಜಾಮೀನು ಅರ್ಜಿ ವಜಾಗೊಂಡಿದ್ದು, ಇನ್ನೊಂದು ಅತ್ಯಾಚಾರ ಪ್ರಕರಣದ ಆದೇಶ ಪ್ರಕಟಿಸುವುದು ಬಾಕಿಯಿದೆ.
ಪ್ರಜ್ವಲ್ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಪ್ರಜ್ವಲ್ ಜಾಮೀನು ಕೋರಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ವಜಾ ಮಾಡಿದೆ.
ಇನ್ನು ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಜಿ ಅರುಣ್ ವಕಾಲತ್ತು ಹಾಕಿದ್ದು, ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರೆ. ರಾಜ್ಯ ಸರ್ಕಾರದ ವಿಶೇಷ ತನಿಖಾ ದಳದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಅವರು ಪ್ರತಿವಾದ ಮಂಡಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿನ ಕೆಲಸದಾಕೆಯ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣ ಮತ್ತು ಪುತ್ರನಿಗೆ ಪ್ರತಿಷ್ಠಿತ ಶಾಲೆಯಲ್ಲಿ ಪ್ರವೇಶ ಕಲ್ಪಿಸುವ ನೆಪದಲ್ಲಿ ಹಾಸನದ ಮಹಿಳೆಯ ನಗ್ನ ಚಿತ್ರ/ವಿಡಿಯೊ ಸೆರೆ ಹಿಡಿದ ಆರೋಪಕ್ಕೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಪ್ರಜ್ವಲ್ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ. ಈ ಎರಡೂ ಪ್ರಕರಣಗಳು ಬೆಂಗಳೂರಿನ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿವೆ.
ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಇನ್ನೆರಡು ದಿನದಲ್ಲಿ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.
ಹಾಸನದ ಮೂಲದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಸಂಬಂಧ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಲು ನಿರಾಕರಿಸಿದೆ.
ಕನ್ನಡ ಚಿತ್ರರಂಗ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ದಂಪತಿ ತಮ್ಮ ಚೊಚ್ಚಲ ಮಗುವನ್ನು ಸ್ವಾಗತಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ನವೆಂಬರ್ 12) ಅವಿವಾ ಬಿದ್ದಪ್ಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಸದ್ಯ ಅವಿವಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಗಸ್ಟ್ ತಿಂಗಳಿನಲ್ಲಿ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸಿಹಿ ಸುದ್ದಿ ಹೊರಬಿದಿತ್ತು. ಅದರ ಬೆನ್ನಲ್ಲೇ ಸೆಪ್ಟೆಂಬರ್ 18, 2024ರಂದು ಅವಿವಾ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಅವಿವಾ ಸೀಮಂತದಲ್ಲಿ ಅನೇಕ ಸಿನಿಮಾ ತಾರೆಯರು ಭಾಗಿಯಾಗಿದ್ದು, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.
ಸೀಮಂತ ಕಾರ್ಯಕ್ರಮದ ಅವಿವಾ ಫೋಟೋ ನೋಡಿದ ಅಭಿಮಾನಿಗಳು ಗಂಡು ಮಗುವೇ ಜನಿಸುವುದು ಎಂದು ಗೆಸ್ ಮಾಡಿದ್ದರು. ಅವಿವಾ ಬಿದ್ದಪ್ಪ ಸಾಮಾಜಿಕ ಜಾಲತಾಣದಲ್ಲಿಗಳಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದಾಗಲೂ ಕೂಡ ಅನೇಕರು ಗಂಡು ಮಗು, ಅಂಬರೀಷ್ ಮತ್ತೆ ಹುಟ್ಟಿ ಬರುತ್ತಿದ್ದಾರೆ ಎನ್ನುವ ಕಮೆಂಟ್‌ಗಳನ್ನು ಮಾಡುತ್ತಿದ್ದರು.
ಇದೀಗ ಎಲ್ಲರ ನಿರೀಕ್ಷೆಗಳು ಸರಿಯಾಗಿದ್ದು ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ದಂಪತಿಗೆ ಗಂಡು ಮಗುವಾಗಿದೆ. ಹೀಗಾಗಿ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನಾಗಿ ಅಂಬರೀಷ್ ಅವರೇ ಮತ್ತೆ ಹುಟ್ಟಿ ಬಂದಿದ್ದಾರೆ ಎನ್ನುವ ಮಾತುಗಳು ಎಲ್ಲರ ಬಾಯಲ್ಲಿ ಇದೆ. ಜೊತೆಗೆ ಇನ್ನೊಂದು ವಿಶೇಷವಾದ ವಿಚಾರ ಎಲ್ಲೆಡೆ ಹರಿದಾಡುತ್ತಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನಿಗೆ ಏನು ಹೆಸರಿಡಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದ್ದರೆ. ಮುದ್ದಾದ ಮೊಗ್ಗಗನಿಗೆ ತಾತನ ಹೆಸರೇ ಇಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಅಂದರೆ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಮಗನಿಗೆ ಅಂಬರೀಷ್ ಅವರ ಹೆಸರೇ ಇಡಲಾಗುತ್ತದೆ. ಹಳೆಯ ಸಂಪ್ರದಾಯದಂತೆ ತಾತನ ಹೆಸರನ್ನೇ ಮೊಮ್ಮಗನಿಗೆ ಇಡುವ ಪದ್ಧತಿಯನ್ನು ಸುಮಲತಾ ಹಾಗೂ ಅಭಿಷೇಕ್ ಮುಂದುವರಿಸುತ್ತಾರೆ ಎನ್ನುವ ಗಾಳಿ ಸುದ್ದಿ ಹರಿದಾಡುತ್ತಿದೆ. ಆದರೆ ಕೆಲವರು ಹೊಸ ಹೆಸರಿಟ್ಟು ಸರ್ ನೇಮ್ ಅಂಬರೀಷ್ ಎಂದು ಇಡುವ ಸಾಧ್ಯತೆ ಎಂದು ಸಹ ಹೇಳುತ್ತಿದ್ದಾರೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಜೂನ್ 5, 2023ರಂದು ಪೋಷಕರ ಒಪ್ಪಿಗೆ ಪಡೆದು ಎಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು.
ಮಂಗಳೂರು/ಮುಂಬೈ : ಬಾಲಿವುಡ್ ನಟ ಶಾರುಖ್ ಖಾನ್‌ಗೆ ಕೊ*ಲೆ ಬೆ*ದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್ಗಢದಲ್ಲಿ ಬಂಧಿಸಲಾಗಿದೆ. ವಕೀಲ ಫೈಜಾನ್ ಖಾನ್ ಬಂಧಿತ ಆರೋಪಿ. ಛತ್ತೀಸ್‌ಗಢದ ರಾಯ್‌ಪುರದ ಆತನ ನಿವಾಸದಲ್ಲಿ ಬಾಂದ್ರಾ ಪೊಲೀಸರು ಬಂಧಿಸಿದ್ದಾರೆ.
50 ಲಕ್ಷ ರೂ. ನೀಡುವಂತೆ ಬೆ*ದರಿಕೆ:
ನವೆಂಬರ್ 7 ರಂದು ವ್ಯಕ್ತಿಯೊಬ್ಬ ಬಾಲಿವುಡ್ ನಟ ಶಾರುಖ್ ಖಾನ್‌ಗೆ ಜೀ*ವ ಬೆ*ದರಿಕೆ ಹಾಕಿದ್ದಲ್ಲದೇ, 50 ಲಕ್ಷ ರೂ. ನೀಡುವಂತೆ ಬೇಡಿಕೆಯೊಡ್ಡಿದ್ದ. ಈ ಸಂಬಂಧ ಮುಂಬಯಿಯ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಫೋನ್ ಟ್ರ್ಯಾಕ್ ಮಾಡಿದಾಗ, ಆರೋಪಿ ಛತ್ತೀಸ್‌ಗಢ ರಾಜ್ಯದ ರಾಯ್‌ಪುರದಿಂದ ಕರೆ ಮಾಡಿರುವುದು ತಿಳಿದು ಬಂದಿತ್ತು. ಇದೀಗ ಆರೋಪಿ ವಕೀಲ ಫೈಜಲ್ ಖಾನ್‌ನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ರಾಯ್‌ಪುರದಲ್ಲಿ ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 308(4), 351(3)(4) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನವೆಂಬರ್ 2ರಂದು ತನ್ನ ಮೊಬೈಲ್ ಕಳೆದು ಹೋಗಿದ್ದು, ಈಗಾಗಲೇ ದೂರು ದಾಖಲಿಸಿದ್ದೇನೆ. ಕಳೆದು ಹೋಗಿರುವ ತನ್ನ ಫೋನ್‌ನಿಂದ ಯಾರೋ ಕಿಡಿಗೇಡಿಗಳು ಶಾರುಖ್ ಖಾನ್‌ಗೆ ಬೆ*ದರಿಕೆ ಕರೆ ಮಾಡಿದ್ದಾರೆ. ಇದು ನನ್ನ ವಿರುದ್ಧ ನಡೆದಿರುವ ಪಿತೂರಿಯಾಗಿದೆ ಎಂದು ಫೈಜಲ್ ಖಾನ್ ಪೊಲೀಸರಿಗೆ ತಿಳಿಸಿದ್ದಾನೆ.
ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಇಂದು (ನ.12) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವಿವಾ ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೊಮ್ಮಗನನ್ನು ಹಿಡಿದು ಮಾಜಿ ಸಂಸದೆ ಸುಮಲತಾ ಖುಷಿ ಪಟ್ಟಿದ್ದಾರೆ.
ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದ ಅಭಿಷೇಕ್ ಅಂಬರೀಶ್, ಅವಿವಾ ಬಿದ್ದಪ್ಪ ಜೂನ್ 5,2023 ರಂದು ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬಳಿಕ ಸೆ.18, 2024 ರಂದು ಅವೀವಾ ಸೀಮಂತ ಅದ್ದೂರಿಯಾಗಿ ನಡೆದಿತ್ತು.
ಅವಿವಾ ಬಿದ್ದಪ್ಪ ಫ್ಯಾಷನ್ ಲೋಕದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸ್ವಿಮ್ ಸೂಟ್ ಬ್ರ್ಯಾಂಡ್‌ನ್ನು ಲಾಂಚ್ ಮಾಡಿದ್ದಾರೆ. ಈಗ ಗಂಡು ಮಗುವಿನ ಆಗಮನದಿಂದ ಅಂಬಿ ಕುಟುಂಬ ಸಂತೋಷದಲ್ಲಿದೆ.