Tuesday, January 31, 2023

15,000 ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ..!

ಬೆಂಗಳೂರು : ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿಯಿರುವ 15 ಸಾವಿರಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿತ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಹದಿನೈದು ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇತ್ತೀಚೆಗೆ ಪ್ರಕಟಿಸಲಾಗಿದ್ದು, ಆ ಪೈಕಿ 13,363 ಅಭ್ಯರ್ಥಿಗಳಷ್ಟೇ ಆಯ್ಕೆ ಆಗಿದ್ದರು.

ಉಳಿದ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ ಅವು ಖಾಲಿ ಉಳಿದಿದ್ದವು.

ಈ ಮಧ್ಯೆ ಶಿಕ್ಷಕರ ನೇಮಕಾತಿ ಸಂಬಂಧ ಹೊರಡಿಸಲಾಗಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ವಿರುದ್ಧ ಅಕ್ಷತಾ ಚೌಗಲೆ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಮುಂದಿನ ಆದೇಶದವರೆಗೆ ಅನ್ವಯಿಸುವಂತೆ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ.

ಅರ್ಜಿದಾರರ ಪರವಾಗಿ ವಕೀಲೆ ಲತಾ ಶೆಟ್ಟಿ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

Hot Topics

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಅಧ್ಯಯನಕ್ಕೆ ಡಾ.ಮೋಹನ್‌ ಆಳ್ವ ನೇತೃತ್ವ.!

ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ...

15 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 32ರ ಮಹಿಳೆ..!

ಮುಂಬೈ: ಮಹಿಳೆಯೊಬ್ಬಳು 15 ವರ್ಷದ ಬಾಲಕನ ಮೇಲೇ ಲೈಂಗಿಕ ದೌರ್ಜನ್ಯ (Sexual Abuse) ಎಸಗಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯಲ್ಲಿ ನಡೆದಿದೆ.ಈ ಸಂಬಂಧ ಮಹಿಳೆಯ ವಿರುದ್ಧ ಪೋಸ್ಕೋ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.32...

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...