Tuesday, May 30, 2023

ಶುಕ್ರವಾರದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : 3 ವಾರ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ..!

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್ ಬ್ರೇಕ್​​ ಹಾಕಿದ್ದು, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ ಹೊರಡಿಸಿದೆ.

ಬೆಂಗಳೂರು: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್ ಬ್ರೇಕ್​​ ಹಾಕಿದ್ದು, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ ಹೊರಡಿಸಿದೆ.

ಮುಷ್ಕರ ಪ್ರಶ್ನಿಸಿ ಹೈಕೋರ್ಟ್​ಗೆ ಹೆಚ್.ಎಂ.ವೆಂಕಟೇಶ್ ಎಂಬುವರು ಪಿಐಎಲ್​ ಸಲ್ಲಿಸಿದ್ದರು.

ಮಾ.20ರಂದು ಕಾರ್ಮಿಕ ಇಲಾಖೆ ಆಯುಕ್ತರು ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ.

ಏಪ್ರಿಲ್ 6ರಂದು ಮುಂದಿನ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಹೈಕೋರ್ಟ್​​ಗೆ ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಮಾಹಿತಿ ನೀಡಿದ್ದಾರೆ.

ನಾಳಿನ ಮುಷ್ಕರದಿಂದ ಸಾರ್ವಜನಿಕ ಸಾರಿಗೆ ಸ್ಥಗಿತವಾಗಲಿದೆ. ಇದರಿಂದ ವಿದ್ಯಾರ್ಥಿಗಳು, ನೌಕರರು, ಪ್ರಯಾಣಿಕರಿಗೆ ತೊಂದರೆ ಉಂಟಾಗಲಿದೆ.

ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಲಿದೆ.

ಏಪ್ರಿಲ್ 6ರಂದು ಮುಂದಿನ ಸಭೆಯಿರುವ ಹಿನ್ನೆಲೆ‌ 3 ವಾರಗಳ ಕಾಲ ಮುಷ್ಕರಕ್ಕೆ ಮುಂದಾಗದಂತೆ ಸಿಜೆ ಪ್ರಸನ್ನ ಬಿ.ವರಾಳೆ, ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ ಹೋರಾಟದ ಯೂನಿಯನ್‌ಗಳಿಗೆ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

Hot Topics