Connect with us

    LATEST NEWS

    ಪೂಜೆ, ಆರಾಧನೆಗಳನ್ನು ನಡೆಸುವ ಬಗ್ಗೆಯೂ ನ್ಯಾಯಾಲಯವೇ ತೀರ್ಮಾನಿಸಬೇಕೆ: ಹೈಕೋರ್ಟ್ ಅಸಮಾಧಾನ

    Published

    on

    ಬೆಂಗಳೂರು: ಪೂಜೆ, ಆರಾಧನೆಗಳನ್ನು ನಡೆಸುವ ಬಗ್ಗೆಯೂ ನ್ಯಾಯಾಲಯವೇ ತೀರ್ಮಾನಿಸಬೇಕೆ. ಸಂವಿಧಾನದ ವಿಧಿ 226 ಇರುವುದು ಶೋಷಿತ ವರ್ಗಗಳ ಕಷ್ಟಕಾರ್ಪಣ್ಯ ಆಲಿಸಲು.

    ಇಂತಹ ಪ್ರಕರಣಗಳನ್ನು ವಿಚಾರಣೆ ನಡೆಸಲಿಕ್ಕೆ ಅಲ್ಲ ಎಂದು ಮಂತ್ರಾಲಯ ಹಾಗೂ ಉತ್ತರಾದಿ ಮಠಗಳ ವಿರುದ್ಧ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ ಎಂದು ಲೀಗಲ್‌ ನ್ಯೂಸ್‌ ವರದಿ ಮಾಡಿದೆ.


    ಕೊಪ್ಪಳದ ಆನೆಗೊಂದಿಯಲ್ಲಿ ಇರುವ ನವವೃಂದಾವನದಲ್ಲಿ ಇದೇ ಡಿಸೆಂಬರ್ 2ರಿಂದ ಆರಂಭವಾಗಲಿರುವ ಪದ್ಮನಾಭ ತೀರ್ಥರ 697ನೇ ಆರಾಧನಾ ಮಹೋತ್ಸವವನ್ನು ಯಾರು ನಡೆಸಬೇಕೆಂಬ ಕುರಿತು ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠ ಹಾಗೂ ಉತ್ತರಾದಿ ಮಠಗಳ ನಡುವಿನ ವಿವಾದಕ್ಕೆ ಸಂಬಂಧಿಸಿದ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
    ವಿಚಾರಣೆ ವೇಳೆ ಉಭಯ ಪಕ್ಷಗಳ ಪರ ವಕೀಲರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ಪೀಠ, ಎರಡೂ ಮಠಗಳಿಗೆ ಅವುಗಳದ್ದೇ ಆದ ಶ್ರೇಷ್ಠ ಪರಂಪರೆ ಇದೆ. ಆದರೆ, ಇಬ್ಬರೂ ಪ್ರತಿಬಾರಿ ಕೋರ್ಟ್ ಆದೇಶ ಪಡೆದುಕೊಂಡೇ ಆರಾಧನೆ ಮಾಡುತ್ತಿರುವುದನ್ನು ನೋಡಿದರೆ ನೀವು ಮಠ ನಡೆಸುತ್ತಿದ್ದೀರೊ ಅಥವಾ ಕಾಲೇಜನ್ನೋ ಎಂಬ ಅನುಮಾನ ಮೂಡುತ್ತದೆ.

    ಈ ವ್ಯಾಜ್ಯವನ್ನು ಶ್ರೇಷ್ಠ ಪರಂಪರೆ ಹೊಂದಿರುವ ಮಠಗಳು ಮುಂದುವರಿಸಿಕೊಂಡು ಹೋಗುವುದು ಸರಿ ಕಾಣುವುದಿಲ್ಲ. ಶೀಘ್ರವೇ ಎರಡೂ ಮಠಗಳ ವ್ಯವಸ್ಥಾಪನಾ ಮಂಡಳಿಗಳು ಒಟ್ಟಿಗೆ ಕೂತು ವಿವಾದ ಬಗೆಹರಿಸಿಕೊಳ್ಳಿ. ಬೇಕಿದ್ದರೆ ಇಲ್ಲೇ ಕೋರ್ಟ್ ಆವರಣದ ಯಾವುದಾದರೂ ಮರದ ಕೆಳಗೆ ಕೂತು ಮಾತನಾಡಿ ಎಂದು ತಾಕೀತು ಮಾಡಿತು
    ಅಲ್ಲದೇ, ಸಂವಿಧಾನದ ವಿಧಿ 226ರ ಅಡಿ ಲಭ್ಯವಿರುವ ಅಧಿಕಾರವನ್ನು ಈ ನೆಲದ ಶೋಷಿತ ವರ್ಗಗಳಿಗೆ ಉಪಯೋಗಿಸಬೇಕೆ ಹೊರತು ಇಂತಹ ವ್ಯಾಜ್ಯಗಳಿಗೆ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

    ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿದ ಪೀಠ, ಪದ್ಮನಾಭ ತೀರ್ಥರ ಆರಾಧನಾ ಮಹೋತ್ಸವದ ಅಗ್ರಪೂಜೆಯನ್ನು ಉತ್ತರಾದಿ ಮಠದವರು ನಡೆಸಬೇಕು ಮತ್ತು ಉತ್ತರಾರ್ಧದಲ್ಲಿ ರಾಘವೇಂದ್ರಸ್ವಾಮಿ ಮಠದವರು ನಡೆಸಬೇಕು ಎಂದು ನಿರ್ದೇಶಿಸಿತು.

    2021ರ ಡಿಸೆಂಬರ್ 2ರಿಂದ ಕೊಪ್ಪಳ ಜಿಲ್ಲೆಯ ಆನೆಗೊಂದಿಯಲ್ಲಿರುವ ನವ ವೃಂದಾವನದಲ್ಲಿ ಪದ್ಮನಾಭ ತೀರ್ಥರ 697ನೇ ಆರಾಧನಾ ಮಹೋತ್ಸವ ನಡೆಯಲಿದೆ. ಪದ್ಮನಾಭ ತೀರ್ಥರು ಮಧ್ವಾಚಾರ್ಯರ ಮೊದಲನೇ ಶಿಷ್ಯರಾಗಿದ್ದು ಅವರ ಆರಾಧನೆ ಡಿಸೆಂಬರ್ 2ರಿಂದ ಮೂರು ದಿನಗಳ ಕಾಲ ನಡೆಯಲಿದೆ.

    https://legalnews.co.in/worship-controversy-high-court-upset-over-mantralaya-and-uttaradhi-math/

    Baindooru

    ಬಿಗ್ ಬಾಸ್ ಗೆ ಮೂರನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ಹಿಂದೂ ಫೈರ್ ಬ್ರಾಂಡ್ ಚೈತ್ರಾ

    Published

    on

    ಮಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರೋ ಈ ಶೋಗೆ ಸ್ಪರ್ಧಿಗಳು ಯಾರಾಗ್ತಾರೆ ಅನ್ನೋ ಕುತೂಹಲವೇ ಹೆಚ್ಚು. ಈ ಬಾರಿ ಅಂದ್ರೆ ಸೀಸನ್ 11 ರ ಸ್ಪರ್ಧಿಗಳು ಯಾರು ಅನ್ನೋ ‘ರಾಜ ರಾಣಿ’ ರಿಯಾಲಿಟಿ ಶೋ ನ ಗ್ರ್ಯಾಂಡ್ ಫಿನಾಲೇಲಿ ರಿವೀಲ್ ಆಗುತ್ತಿದೆ.

    ಎಂಟ್ರಿ ಕೊಟ್ಟ ಚೈತ್ರಾ!

    ಮೊದಲ ಸ್ಪರ್ಧಿಯಾಗಿ ‘ಸತ್ಯ’ ಧಾರಾವಾಹಿ ನಟಿ ಗೌತಮಿ ಜಾಧವ್, 2ನೇ ಸ್ಪರ್ಧಿಯಾಗಿ ಲಾಯರ್ ಜಗದೀಶ್‌ ಬಿಗ್ ಬಾಸ್ ಮನೆ ಸೇರುತ್ತಿದ್ದು, ಇನ್ನೂ 3ನೇ ಸ್ಪರ್ಧಿಯಾಗಿ ‘ಬಿಗ್ ಬಾಸ್‌’ ಮನೆಯೊಳಗೆ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಎಂಟ್ರಿ ಕೊಟ್ಟಿದ್ದಾರೆ.
    ಖಡಕ್‌ ಮಾತುಗಳಿಂದಲೇ, ಹಿಂದುತ್ವದ ಹೆಸರಿನಲ್ಲಿ ಭಾಷಣ ಮಾಡಿ, ತಮ್ಮದೇ ಆದ ಅಪಾರ ಹಿಂಬಾಲಕರನ್ನು ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಚೈತ್ರಾ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
    ಅಲ್ಲದೇ, ಖಾಸಗಿ ವಾಹಿನಿ, ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ಇದೆ.

    ಇದನ್ನು ಓದಿ: ನಟಿ ಸುಕೃತಾ ನಾಗ್ ಸಿಲ್ಕ್ ಸೀರೆಯಲ್ಲಿ ಮಿಂಚಿಂಗ್… ಬಿಗ್ ಬಾಸ್ ಗೆ ಸ್ವಾಗತ ಅಂತಿದ್ದಾರೆ ಜನ!

    ವಂಚನೆ ಪ್ರಕರಣ:
    ಪ್ರಖರ ಭಾಷಣಗಳ ಮೂಲಕ ಗಮನ ಸೆಳೆದಿದ್ದ ಚೈತ್ರಾ ಕಾಂಟ್ರವರ್ಸಿಗಳ ಮೂಲಕವೂ ಸದ್ದು ಮಾಡಿದ್ದಾರೆ. ಅಲ್ಲದೇ, ಬಿಜೆಪಿ ಟಿಕೆಟ್ ಕೊಡುವ ವಿಚಾರದಲ್ಲಿ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದಡಿ ಜೈಲು ಪಾಲಾಗಿದ್ದರು.
    ಸದ್ಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿರುವ ಚೈತ್ರಾ ಅಲ್ಲಿ ಹೇಗಿರ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.

    Continue Reading

    DAKSHINA KANNADA

    ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್

    Published

    on

    ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.

    ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.

    ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.

    ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್

    ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    Continue Reading

    LATEST NEWS

    ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 3 ಮೃ*ತ್ಯು, 7 ಗಾ*ಯ

    Published

    on

    ಮಂಗಳೂರು/ಹರಿಯಾಣ: ಹರಿಯಾಣದ ಸೋನಿಪತ್‌ನಲ್ಲಿ ಇಂದು (ಸೆ.28) ಬೆಳಿಗ್ಗೆ ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋ*ಟವು ಸಂಭವಿಸಿದ್ದು, 3 ಜನರ ಮೃ*ತ್ಯು ಹಾಗೂ 7 ಮಂದಿಗೆ ಗಂ*ಭೀರ ಗಾಯವಾಗಿದೆ.


    ವೇದ್ ಎಂಬುವವರ ಮನೆಯಲ್ಲಿ ಪಟಾಕಿಗಳನ್ನು ತಯಾರಿಸುತ್ತಿದ್ದು, ಮನೆಯಲ್ಲಿ ಸಂಗ್ರಹಿಸಿದ ರಾಸಾಯನಿಕಗಳಿಂದ ಬೆಂ*ಕಿ ಅವ*ಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
    ಮೂವರ ದೇಹವು ಛಿಧ್ರ*ವಾಗಿದ್ದು, ಗಾ*ಯಾಳುಗಳನ್ನು ಆಸ್ಪತ್ರೆಗೆ ಚಿಕಿ*ತ್ಸೆಗಾಗಿ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಪಟಾಕಿ ಕಾರ್ಖಾನೆ ನಡೆಸುತ್ತಿದ್ದ ವೇದ್ ಪರಾರಿಯಾಗಿದ್ದಾನೆ. ಈ ಕುರಿತು ಸೋನಿಪತ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending