ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಕಳೆದ ಆಗಸ್ಟ್ 1 ರಿಂದ 10ರವರೆಗೆ, ಬೆಂಗಳೂರಿನಲ್ಲಿ 10 ದಿನದಲ್ಲಿ 505 ಮಕ್ಕಳಿಗೆ ಕೊರೋನಾ ಸೋಂಕು ( Corona Virus ) ತಗುಲಿದೆ. ಇವರಲ್ಲಿ 246 ಹೆಣ್ಣ ಮಕ್ಕಳು, 259 ಗಂಡು ಮಕ್ಕಳು ಸೇರಿದ್ದಾರೆ.ಇದು ಮೂರನೇ ಅಲೆಯ ಪ್ರಭಾವ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ,
ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗಿದ್ದು, ಶ್ರಾವಣ ಮಾಸದ ಸೋಮವಾರ ಮತ್ತು ಭೀಮನ ಅಮಾವಾಸ್ಯೆ ದಿನ ಜನ ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದರು.
ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾದ್ರೆ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಬಳಿಕ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.ರಾಜ್ಯದಲ್ಲಿ ಮಹಾಮಾರಿ ಕೊರೋನಾ 3ನೇ ಅಲೆಯ ( Corona 3rd Wave ) ಭೀತಿ ಶುರುವಾಗಿದೆ.
ಅದರಲ್ಲೂ ಬೆಂಗಳೂರಿನಲ್ಲಿ ಕೋವಿಡ್-19 3ನೇ ಅಲೆಯ ಹೊಡೆತ ಹೆಚ್ಚಾಗಿದೆ. ಮಕ್ಕಳಲ್ಲಿಯೇ ಹೆಚ್ಚು ಈ ಬಾರಿ ಕೊರೋನಾ ಕೇಸ್ ಪತ್ತೆಯಾಗಿರೋದು ವರದಿಯಿಂದ ತಿಳಿದು ಬಂದಿದೆ. ಈ ಮೂಲಕ ಸಿಲಿಕಾನ್ ಸಿಟಿಯ ಜನರಲ್ಲಿ ಆತಂಕ ಉಂಟು ಮಾಡಿದೆ.