Connect with us

STATE

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಯಾವಾಗ? ಎಲ್ಲಿ? ಇಲ್ಲಿದೆ ಡಿಟೇಲ್ಸ್

Published

on

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳ ಜನತೆ ರಣ ಬಿಸಿಲಿನಿಂದ ತತ್ತರಿಸಿ ಹೋಗಿದ್ದಾರೆ. ಅಷ್ಟೇ ಅಲ್ಲದೇ, ಭೀಕರ ಬರಗಾಲದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿಬಿಟ್ಟಿದೆ. ಇದರ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಾರ್ಚ್‌ ಎರಡನೇ ವಾರದಿಂದ ವರುಣ ಕರುಣೆ ತೋರುವ ಮೂಲಕ ಕಾದಿದ್ದ ಭೂಮಿಗೆ ತಂಪೆರೆದಿದ್ದಾರೆ. ಅಲ್ಲದೇ ಮಾರ್ಚ್‌ 22 ರಿಂದ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಸಿಕ್ಕಿದೆ.

Untitled design – 1

ಎಲ್ಲೆಲ್ಲಿ ಮಳೆ?
ಮಾರ್ಚ್​ 22 ರಿಂದ 3 ದಿನಗಳ ಕಾಲ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೊಡಗು, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ.
ಇನ್ನು ಇಂದು (ಮಾರ್ಚ್‌ 17) ಬೆಂಗಳೂರು, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಿದೆ.

ಹಾಗೆಯೇ ಮಾರ್ಚ್​ 22ರಿಂದ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಶನಿವಾರ ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.

LATEST NEWS

ಮದುವೆಯಲ್ಲಿ ಅವಧಿ ಮುಗಿದ ಐಸ್ ಕ್ರೀಂ​ ಸೇವನೆ.. 80ಕ್ಕೂ ಹೆಚ್ಚು ಜನರು ಅಸ್ವಸ್ಥ!

Published

on

ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಸಾತನೂರು ಸರ್ಕಲ್ ಬಳಿಯ ಟಿಪ್ಪುನಗರದ ಮಿಲನ್ ಶಾದಿ ಮಹಲ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ 80 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚನ್ನಪಟ್ಟಣದ ವಧು ಮತ್ತು ಮಾಗಡಿಯ ವರನ ವಿವಾಹ ಸಮಾರಂಭ ಮಿಲನ್ ಶಾದಿ ಮಹಲ್ ನಲ್ಲಿ ನಡೆದಿತ್ತು. ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದ ಜನರು ಇದ್ದಕ್ಕಿದ್ದಂತೆಯೇ ಅಸ್ವಸ್ಥಗೊಂಡಿದ್ದಾರೆ. ಊಟದ ನಂತರ ಐಸ್ ಕ್ರೀಂ ತಿಂದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. 50ಕ್ಕೂ ಹೆಚ್ಚು ಜನರಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಹೆಚ್ಚಿನವರು ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳು ಎಂದು ಗುರುತಿಸಲಾಗಿದೆ.

ಐಸ್​ ಕ್ರೀಂ ತಿಂದು ಆಸ್ವಸ್ಥಗೊಂಡವರಲ್ಲಿ 40 ಜನರು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದವರು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅವಧಿ ಮುಗಿದಿದ್ದ ಐಸ್ ಕ್ರೀಂ ತಿಂದಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಅಸ್ವಸ್ಥಗೊಂಡವರ ಕುಟುಂಬಸ್ಥರು ಆಗಮಿಸಿದ್ದಾರೆ. ಎಲ್ಲರಿಗೂ ಡ್ರಿಪ್ಸ್ ಹಾಕಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

Continue Reading

LATEST NEWS

ಅಮೇಥಿಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ.! ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Published

on

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿದ್ದು ಕಾಂಗ್ರೆಸ್ ಕಚೇರಿ ಹೊರಗಡೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿ ಗದ್ದಲ ಸೃಷ್ಟಿಸಿದೆ.

ಮುಂದೆ ಓದಿ..; ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ? 

ಸುದ್ದಿ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿ ಬಳಿಕ ಪಕ್ಷದ ಕಾರ್ಯಕರ್ತರ ಜತೆಗೂಡಿ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.  ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾರೀ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರು.

ಈ ವೇಳೆ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗತೊಡಗಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸುವ ಭರವಸೆಯನ್ನು ಹಿರಿಯ ಪೊಲೀಸ್ ಅಧಿಕಾರಿ ನೀಡಿದ್ದಾರೆ. ದುಷ್ಕರ್ಮಿಗಳು ದಾಳಿ ನಡೆಸಿದ ವಿಡಿಯೋ ಅನ್ನು ಸಾಮಾಜಿಕ ಜಾಲತಾಣ x ನಲ್ಲಿ ಹಂಚಿಕೊಂಡ ಕಾಂಗ್ರೆಸ್ ಅಮೇಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಸೋಲಿನ ಭೀತಿಯಿಂದ ಬಿಜೆಪಿ ಹಿಂಸಾಚಾರ ನಡೆಸುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರನ್ನು ಉಲ್ಲೇಖಿಸಿ ಆರೋಪ ಮಾಡಿದೆ.

Continue Reading

LATEST NEWS

ಮೊಸಳೆ ಇದ್ದ ನಾಲೆಗೆ ಕಂದಮ್ಮನನ್ನು ಎಸೆದ ಹೆತ್ತ ತಾಯಿ..! ಗಂಡ-ಹೆಡತಿ ಜಗಳದಲ್ಲಿ ಮೊಸಳೆ ಪಾಲಾದ ಮಗು..!

Published

on

ಉತ್ತರ ಕನ್ನಡ/ಮಂಗಳೂರು: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

child death

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾ(ಏ.5) ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಮುಂದೆ ಓದಿ..; ನಡುರಸ್ತೆಯಲ್ಲಿ ಗರ್ಭಿಣಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ದುಷ್ಕರ್ಮಿಗಳು..!

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

Continue Reading

LATEST NEWS

Trending