bangalore
ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
Published
1 year agoon
By
Admin68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಹಿನ್ನೆಲೆ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ.
ಬೆಂಗಳೂರು : 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಹಿನ್ನೆಲೆ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಶಸ್ತಿ ವಿಜೇತರು ಮತ್ತು ಪ್ರಶಸ್ತಿ ವಿಜೇತ ಸಂಘ ಸಂಸ್ಥೆಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.
68ನೇ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ವಿವಿಧ ಸಾಧಕರು ಹಾಗೂ ಸಂಘಸಂಸ್ಥೆಗಳು ಸೇರಿ ಒಟ್ಟು 68 ಸಾಧಕರು, 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗಿದೆ.
ಪತ್ರಿಕೋದ್ಯಮ ಕ್ಷೇತ್ರದ ದಿನೇಶ್ ಅಮೀನ್ ಮಟ್ಟು, ಯಕ್ಷಗಾನದಲ್ಲಿ ಲೀಲಾವತಿ ಬೈಪಡಿತ್ತಾಯ, ಸಿನಿಮಾ ಕ್ಷೇತ್ರದ ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ್, ಸಾಹಿತ್ಯ ಕ್ಷೇತ್ರದ ಸಿ.ನಾಗಣ್ಣ, ಸುಬ್ಬು ಹೊಲೆಯಾರ್,
ಮಾಯಾ ಶರ್ಮಾ, ಸೇರಿದಂತೆ 68 ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ.
bangalore
ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು; 590 ಪುಟ, 53 ಸಾಕ್ಷಿ
Published
2 days agoon
01/12/2024ಮಂಗಳೂರು/ಬೆಂಗಳೂರು: ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕನ ವಿರುದ್ಧ ಮತ್ತೊಂದು ಬ್ಲ್ಯಾಕ್‌ಮೇಲ್ ಕೇಸ್ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ.
ಅ*ಶ್ಲೀಲ ವಿಡಿಯೋ ಸೃಷ್ಟಿಸಿ ಲಗ್ಗೆರೆ ವಾರ್ಡ್ ಮಾಜಿ ಕಾರ್ಪೋರೇಟರ್‌ವೊಬ್ಬರ ಪತಿಗೆ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಮುನಿರತ್ನ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಶನಿವಾರ (ನ.30) ಎಫ್‌ಐಆರ್ ದಾಖಲಿಸಿದ್ದಾರೆ. ಈ ಸಂಬಂಧ ನಾಳೆ (ಡಿ.2) ಮುನಿರತ್ನ ಜಾಮೀನು ಕೋರಿ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಆರೋಪ ಏನು ?
ಮುನಿರತ್ನ ವಿರುದ್ಧ ಮತ್ತೊಂದು ಕೇಸ್ :
ಜಾತಿ ನಿಂದನೆ ಪ್ರಕರಣದ ತನಿಖೆ ಪೂರ್ಣಗೊಳಿಸಿ ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ದೋಷಾರೋಪ ಪಟ್ಟಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ (ನ.30) ಸಲ್ಲಿಸಿದೆ.
‘ತಮಗೆ ಜಾತಿ ನಿಂದನೆ ಮಾಡಿ ಬೆದರಿಸಿದ್ದಾರೆ’ ಎಂದು ಆರೋಪಿಸಿ ಮುನಿರತ್ನ ವಿರುದ್ದ ವೈಯಾಲಿಕಾವಲ್ ಠಾಣೆಗೆ ಲಕ್ಷ್ಮೀದೇವಿ ನಗರ ವಾರ್ಡ್‌ನ ಮಾಜಿ ಕಾರ್ಪೋರೇಟರ್ ವೇಲು ದೂರು ನೀಡಿದರು. ‘ಸಾರ್ವಜನಿಕವಾಗಿ ಜಾತಿನಿಂದನೆ ಮಾಡಿ ಸಾಕ್ಷಿದಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಸಿರುವ ಹಾಗೂ ಜಾತಿಗಳ ನಡುವೆ ವೈಷಮ್ಯವನ್ನುಂಟು ಮಾಡಿರುವ ಆರೋಪ ತನಿಖೆಯಲ್ಲಿ ಸಾಬೀತಾಗಿದೆ’ ಎಂದು ಎಸ್‌ಐಟಿ ಹೇಳಿದೆ. ಮುನಿರತ್ನ ವಿರುದ್ಧ ಅತ್ಯಾಚಾರ, ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಮಾಜಿ ಕಾರ್ಪೋರೇಟರ್‌ಗೆ ಜಾತಿ ನಿಂದನೆ ಆರೋಪ ಸಂಬಂಧ 3 ಎಫ್‌ಐಆರ್‌ಗಳು ದಾಖಲಾಗಿದ್ದು, ಈಗ ಜಾತಿನಿಂದನೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಗಿಸಿದೆ. ಇನ್ನುಳಿದ ಪ್ರಕರಣಗಳ ತನಿಖೆ ಭಾಗಶಃ ಮುಕ್ತಾಯವಾಗಿದ್ದು, ಶೀಘ್ರದಲ್ಲೇ ಆರೋಪ ಪಟ್ಟಿ ಸಲ್ಲಿಕೆಯಾಗಲಿದೆ.
590 ಪುಟಗಳ ಆರೋಪಕ್ಕೆ 53 ಸಾಕ್ಷಿ :
ಜಾತಿ ನಿಂದನೆ ದೂರಿನ ಅನ್ವಯ ಮುನಿರತ್ನ ವಿರುದ್ಧ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989 ಮತ್ತು ಕಲಂ 153, 153ಎ(1) (ಎ)(ಬಿ), 504, 509 2.2.4. ರಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಮುನಿರತ್ನ ವಿರುದ್ದ ಪ್ರಕರಣಗಳ ತನಿಖೆಗೆ ಎಸ್‌ಐಟಿಯನ್ನು ಸರ್ಕಾರವು ರಚಿಸಿತು. ಅಂತೆಯೇ ತನಿಖೆಗಿಳಿದ ಎಸ್‌ಐಟಿ, ಜಾತಿ ನಿಂದನೆ ಪ್ರಕರಣದ ತನಿಖೆ ಮುಗಿಸಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಆರೋಪ ಪಟ್ಟಿ ಸಲ್ಲಿಸಿದೆ. ಇದರಲ್ಲಿ 53 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿದೆ. ಈ ಸಾಕ್ಷಿಗಳ ಪೈಕಿ ಮೂವರು ಪ್ರತ್ಯಕ್ಷದರ್ಶಿಗಳು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎಂದು ಎಸ್‌ಐಟಿ ತಿಳಿಸಿದೆ.
bangalore
ಕೇರಳ ಹುಡುಗ, ಅಸ್ಸಾಂ ಹುಡುಗಿ ಪ್ರೇಮ್ ಕಹಾನಿ; ಪ್ರೇಯಸಿಯ ಕೊಂ*ದು ಪ್ರೇಮಿ ಪರಾರಿ
Published
1 week agoon
26/11/2024ಮಂಗಳೂರು/ಬೆಂಗಳೂರು: ಕೇರಳದ ಹುಡುಗ ಹಾಗೂ ಅಸ್ಸಾಂ ಹುಡುಗಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಪ್ರೀತಿಗೆ ಬಿದ್ದಿದ್ದಾರೆ. ಆದರೆ, ಅಪಾರ್ಟ್ಮೆಂಟ್‌ನಲ್ಲಿ ಪ್ರೇಮಿಯೇ ತನ್ನ ಪ್ರೇಯಸಿಯನ್ನು ಕೊ*ಲೆ ಮಾಡಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ಇಂದಿರಾನಗರ ರಾಯಲ್ ಲಿವಿಂಗ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಕೊ*ಲೆಯಾದ ಯುವತಿ ಅಸ್ಸಾಂ ರಾಜ್ಯದ ಮಾಯಾ. ಆರೋಪಿಯನ್ನು ಕೇರಳದ ಆರವ್ ಅನಾಯ್ ಎಂದು ಗುರುತಿಸಲಾಗಿದೆ.
ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯೊoದರಲ್ಲಿ ಜೊತೆಯಾಗಿ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಉಂಟಾದ ಪರಿಚಯದಿಂದ ಸ್ನೇಹ ಬೆಳೆದು ಪ್ರೀತಿಯಾಗಿತ್ತು. ನಂತರ, ಇಬ್ಬರೂ ಮನೆಯನ್ನು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರಿಂದ ನಗರದ ವಿವಿಧೆಡೆ ಸುತ್ತಾಡುತ್ತಿದ್ದರು. ನಾಲ್ಕೈದು ದಿನಗಳ ಹಿಂದೆ ಇಂದಿರಾನಗರದ ದಿ ರಾಯಲ್ ಲಿವಿಂಗ್ ಎಂಬ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರೂ ಒಟ್ಟಿಗೆ ಇದ್ದರು.
ಈ ವೇಳೆ, ಏನೋ ಕ್ಷುಲ್ಲಕ ಕಾರಣಕ್ಕೆ ಮೂರು ದಿನಗಳ ಹಿಂದೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಆಗ ಉಂಟಾದ ಜಗಳದ ವೇಳೆ ಪ್ರೇಮಿ ಆರವ್ ತನ್ನ ಪ್ರೇಯಸಿ ಮಾಯಾಗೆ ಚಾ*ಕುವಿನಿಂದ ಇರಿದು ಕೊ*ಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕೊ*ಲೆ ನಡೆದು ಮೂರು ದಿನಗಳ ನಂತರ ಮನೆಯಿಂದ ದು*ರ್ವಾಸನೆ ಬಂದ ನಂತರ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು, ಚಾ*ಕುವಿನಿಂದ ಇರಿದು ಕೊ*ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
bangalore
ಬಿಗ್ ಬಾಸ್ ನಿಂದ ಧರ್ಮ ಎಲಿಮಿನೆಟ್ ಆಗಿದ್ದು ಯಾಕೆ ಗೊತ್ತಾ ?
Published
1 week agoon
25/11/2024By
NEWS DESK3ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ರ ರಿಯಾಲಿಟಿ ಶೋ 119ನೇ ದಿನಕ್ಕೆ ಕಾಲಿಡುತ್ತಿದೆ. ಅದರ ನಡುವೆ ವಾರ ವಾರ ಎಲಿಮಿನೇಟ್ ಪ್ರಕ್ರಿಯೆ ತೀವ್ರ ಕೂತುಹಲ ಕೆರಳಿಸಿದೆ. ಈ ವಾರ ಬಿಗ್ ಬಾಸ್ ನಿಂದ ಧರ್ಮ ಕೀರ್ತಿರಾಜ್ ಎಲಿಮೀನೆಟ್ ಆಗಿ ಹೊರಬಂದಿದ್ದಾರೆ.
ಸದಾ ನಗುಮುಖದಲ್ಲೇ ಕಾಣಿಸಿಕೊಳ್ಳುವ ಧರ್ಮ, ಯಾರ ತಂಟೆಗೂ ಹೊಗುತ್ತಿರಲಿಲ್ಲ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಹಾಗೂ ಅನುಷಾ ಒಟ್ಟಿಗೆ ದೊಡ್ಮನೆ ಸೇರಿದ್ದರು. ಆದರೆ ಧರ್ಮ ಮತ್ತು ಅನುಷಾ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದರು. ಆದರೆ ಅನುಷಾ ಈ ಮೊದಲೇ ಎಲಿಮಿನೇಟ್ ಆಗಿದ್ದರು. ಇದು ಧರ್ಮ ಅವರಿಗೆ ಬೇಸರ ಮೂಡಿಸಿತ್ತು.
ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದರು. ಕೊನೆಯ ಹಂತದಲ್ಲಿ ಧರ್ಮ ಹಾಗೂ ಚೈತ್ರಾ ಉಳಿದುಕೊಂಡಿದ್ದರು. ಫೈನಲ್ ಆಗಿ ಧರ್ಮ ಮನೆಯಿಂದ ಹೊರಬಂದರು. ಧರ್ಮ ಬೇಸರದಿಂದಲೇ ಹೊರನಡೆದರು.
ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಎಡವಟ್ಟು; 50 ಅಡಿ ಆಳಕ್ಕೆ ಕಾರು ಬಿದ್ದು ಮೂವರ ದುರ್ಮ*ರಣ
ಧರ್ಮ ಸದಾ ಕೂಲ್ ಆಗಿಯೇ ಇರುತ್ತಾರೆ. ಅವರು ಯಾವುದೇ ಕಿತ್ತಾಟಕ್ಕೂ ಹೋಗುತ್ತಿರಲಿಲ್ಲ. ತಾಳ್ಮೆ ಕಳೆದುಕೊಂಡು ಒಂದು ದಿನ ಕೂಗಾಡಿದವರಲ್ಲ. ಇನ್ನೊಂದು ಕಡೆ, ಧರ್ಮ ಎಲ್ಲಿಯೂ ಕೂಡ ಹೈಲೈಟ್ ಆಗುತ್ತಿರಲಿಲ್ಲ. ಇವರಿಗಿಂತ ನಂತರ ವೈಲ್ಡ್ ಕಾರ್ಡ್ ನಲ್ಲಿ ಬಂದ ಹನುಮಂತ, ರಜತ್ ಹಾಗೂ ಶೋಭಾ ಶೆಟ್ಟಿ ಈಗಗಾಲೇ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ.
ಧರ್ಮ ಶಾಂತತೆಯ ಸ್ವರೂಪವನ್ನು ಹೊಂದಿರುವ ವ್ಯಕ್ತಿತ್ವ. ಈ ಮೊದಲು ಎಲಿಮಿನೇಟ್ ಆಗಿರುವ ಲಾಯರ್ ಜಗದೀಶ್ ವಿರುದ್ದ ಇಡೀ ಮನೆಯೇ ತಿರುಗಿ ಬಿದ್ದಾಗಲೂ ಧರ್ಮ ಫೈಟ್ ಗೆ ಹೋಗಿರಲಿಲ್ಲ. ಇದು ಅವರ ಮುಗ್ದತೆ ಮತ್ತು ತಾಳ್ಮೆಯ ಸ್ವರೂಪವನ್ನು ತೋರಿಸುತ್ತದೆ.
ಬಿಗ್ ಬಾಸ್ ಮನೆ ಎಂದರೆ ನೆನಪಾಗುವುದೇ ಜಗಳ, ಕೋಪ ಮತ್ತು ಮಾತುಗಾರಿಕೆ. ಎಲ್ಲೋ ಒಂದು ಕಡೆ ಧರ್ಮ ಅವರಿಗೆ ತಮ್ಮ ತಾಳ್ಮೆಯೇ ಮುಳುವಾಗಿ ಎಲಿಮಿನೇಟ್ ಆಗಲು ಕಾರಣವಾಯಿತು ಎಂದು ಹೇಳಬಹುದು.
LATEST NEWS
ಬಿಗ್ಬಾಸ್ ಮನೆಯಿಂದ ದಿಢೀರ್ ಹೊರ ಬಂದ ಚೈತ್ರಾ ಕುಂದಾಪುರ
ತಾಯಿಯ ಆಸೆ ಈಡೇರಿಸಲು ಹೋಗಿ ಕಂಬಿ ಎಣಿಸುತ್ತಿರುವ ಮಗ !
ಬಾಡಿಗೆಗೆ ಸಿಗ್ತಾರೆ ಬಾಯ್ಪ್ರೆಂಡ್ಸ್; ಎಲ್ಲಾ ಕೆಲಸಕ್ಕೂ ಎತ್ತಿದ ಕೈ !!
Hair care: ಸ್ನಾನ ಮಾಡುವಾಗ ಈ ಟಿಪ್ಸ್ ಪಾಲಿಸಿದರೆ ಕೂದಲು ಉದುರುವುದಿಲ್ಲ..!
ಮನೆ ಮರ್ಯಾದೆಗಾಗಿ ಪೊಲೀಸ್ ಅಕ್ಕನನ್ನು ಕ*ತ್ತಿಯಿಂದ ಕ*ಡಿದು ಕೊಂ*ದ ತಮ್ಮ !
ದೊಡ್ಮನೆಯಿಂದ ಹೊರಬಂದು ಸುದೀಪ್ಗೆ ಸುದೀರ್ಘ ಪತ್ರ ಬರೆದ ಶೋಭಾ ಶೆಟ್ಟಿ
Trending
- BANTWAL5 days ago
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
- FILM4 days ago
ಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ; ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ
- Ancient Mangaluru6 days ago
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು
- LATEST NEWS5 days ago
ನಾನ್ ವೆಜ್ ತಿನ್ನಬೇಡ ಎಂದ ಪ್ರಿಯತಮ: ಆ*ತ್ಮಹತ್ಯೆಗೆ ಶರಣಾದ ಏರ್ ಇಂಡಿಯಾ ಪೈಲಟ್ !