Connect with us

bangalore

ನ.1 ರಂದು ನಟ ಪುನೀತ್ ರಾಜ್ ಕುಮಾರ್‌ಗೆ ‘ಕರ್ನಾಟಕ ರತ್ನ’-CM ಘೋಷಣೆ

Published

on

ಬೆಂಗಳೂರು: ಚಿತ್ರನಟ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಇವರು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ ‘ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು.

ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

1922 ರಿಂದ ಫಲಪುಷ್ಪ ಪ್ರದರ್ಶನ ನಿರಂತರವಾಗಿ ನಡೆಯುತ್ತಿದೆ. ಪ್ರತಿ ವರ್ಷ ಅತಿ ಹೆಚ್ವು ಜನರನ್ನು ಆಕರ್ಷಿಸುತ್ತಿದೆ. ಈ ಬಾರಿ ಸ್ವಾತಂತ್ರ್ಯೋತ್ಸವದ ಅಮೃತ ವರ್ಷಾಚರಣೆಯ ಅಂಗವಾಗಿ ಸಂಭ್ರಮ ತುಂಬಿದೆ ಎಂದರು.

Click to comment

Leave a Reply

Your email address will not be published. Required fields are marked *

bangalore

ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಶಾಕ್; ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ದರ ಏರಿಕೆ

Published

on

ಬೆಂಗಳೂರು : ಹೊಸ ವರ್ಷದ 3ನೇ ತಿಂಗಳು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಹೌದು, ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಸಿಲಿಂಡರ್ ದರದ ಬೆಲೆ ಏರಿಕೆಯಾಗಿದೆ. ಮಾರ್ಚ್ 1 ರ ಶುಕ್ರವಾರದಿಂದಲೇ ಜಾರಿಗೆ ಬರುವಂತೆ 19 ಕೆ.ಜಿ,ಯ ವಾಣಿಜ್ಯ ಸಿಲಿಂಡರ್ ಗಳ ಬೆಲೆ 25 ರೂ. ಏರಿಕೆ ಮಾಡಲಾಗಿದೆ. ಆದರೆ, ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಪ್ರತಿ ತಿಂಗಳ ಮೊದಲ ದಿನವೇ ಸಿಲಿಂಡರ್ ಬೆಲೆಯಲ್ಲಿ ಏರಿಳಿತ ಆಗುತ್ತದೆ. ಈ ಬಾರಿ ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ ಏರಿಕೆಯಾಗಿದೆ. ಅಲ್ಲದೇ,ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಶುಕ್ರವಾರದಿಂದಲೇ ಸಿಲಿಂಡರ್ ಗೆ ಹೆಚ್ಚು ಹಣ ಪಾವತಿ ಮಾಡಬೇಕಿದೆ.

ಎಲ್ಲಿ?ಎಷ್ಟು?

ಇಂದಿನಿಂದ ವಾಣಿಜ್ಯ ಬಳಕೆ ಎಲ್ ಪಿ ಜಿ ಸಿಲಿಂಡರ್ ದೆಹಲಿಯಲ್ಲಿ 1,769.50 ರೂ. ಇದ್ದ ಬೆಲೆ 1795 ರೂ. ಏರಿಕೆ ಕಂಡಿದೆ. ಕೋಲ್ಕತ್ತಾದಲ್ಲಿ 1,887ರ ಬದಲಿಗೆ 1,911 ರೂ.ಗೆ ಲಭ್ಯವಾಗಲಿದೆ.ಮುಂಬೈನಲ್ಲಿ 1,749 ರೂ., ಹಾಗೂ ಚೆನ್ನೈನಲ್ಲಿ 1,960 ರೂ.ಗೆ ಲಭ್ಯವಾಗಲಿದೆ. ದೇಶೀಯ ಗ್ಯಾಸ್ ಸಿಲಿಂಡರ್ ದೆಹಲಿಯಲ್ಲಿ 903 ರೂ. ಮತ್ತು ಕೋಲ್ಕತ್ತಾದಲ್ಲಿ 929 ರೂ., ಮುಂಬೈನಲ್ಲಿ 902.50 ರೂ., ಚೆನ್ನೈನಲ್ಲಿ 918.50 ರೂ. ಗೆ ಹೆಚ್ಚಳ ಕಂಡಿದೆ.

Continue Reading

bangalore

ವಿಧಾನ ಪರಿಷತ್ ನಲ್ಲಿ ಕೋಲಾಹಲ..ಕೈ ಕೈ ಮಿಲಾಯಿಸೋ ಹಂತಕ್ಕೆ ಹೋದ ನಾಯಕರು

Published

on

ಬೆಂಗಳೂರು : ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ವಿಧಾನ ಪರಿಷತ್ ಕಲಾಪದಲ್ಲೂ ಭಾರೀ ಕೋಲಾಹಲ ಹುಟ್ಟು ಹಾಕಿತು.


ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವಿಷಯ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದರು. ಪಾಕಿಸ್ತಾನ ಪರ ಘೋಷಣೆ ಹಾಕಿರುವ ವಿಚಾರಕ್ಕೆ ಕಿಡಿಕಾರಿದ ಪರಿಷತ್​ ಸದಸ್ಯ ಎನ್​ ರವಿಕುಮಾರ್ ​​ ಇದು “ದೇಶದ್ರೋಹಿ ಸರ್ಕಾರ” ಎಂದರು. ಇದರಿಂದ ಕೆರಳಿದ ಕಾಂಗ್ರೆಸ್​​​ ಸದಸ್ಯ ಅಬ್ದುಲ್ ಜಬ್ಬಾರ್ “ಅವನ ಬಾಯಿ ಬಂದ್ ಮಾಡಿ” ಎಂದು ರವಿಕುಮಾರ್​ ಅವರನ್ನು ಏಕವಚನದಲ್ಲೇ ಉಲ್ಲೇಖಿಸಿದ್ದು, ಪರಿಷತ್ ನಲ್ಲಿ ಕೋಲಾಹಲ ಎಬ್ಬಿಸಿತು. ಅಬ್ದುಲ್ ಜಬ್ಬಾರ್ ಮಾತಿಗೆ ರೊಚ್ಚಿಗೆದ್ದ ಬಿಜೆಪಿ ಸದಸ್ಯರು ಏಕವಚನದಲ್ಲಿ ಮಾತಾಡಿದರೆ ಸರಿ ಇರಲ್ಲವೆಂದರು. ಬಳಿಕ ರವಿಕುಮಾರ್ ಎದ್ದು ಅಬ್ದುಲ್​ ಜಬ್ಬರ್​ ಬಳಿ ಹೋದರು. ರವಿಕುಮಾರ್ ಜೊತೆ ತುಳಸಿ ಮುನಿರಾಜುಗೌಡ ಮುನ್ನುಗ್ಗಿ ಹೋದರು. ಎರಡೂ ಕಡೆಯ ಸದಸ್ಯರು ಸಭಾಪತಿಗಳ ಮುಂದೆಯೇ ಕೈಕೈ ಮಿಲಾಯಿಸಲು ಮುಂದಾದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಮಾರ್ಷಲ್‌ಗಳು ಹರಸಾಹಸಪಟ್ಟರು. ಮಧ್ಯ ಪ್ರವೇಶಿಸಿದ ಸಚಿವ ಹೆಚ್‌.ಕೆ.ಪಾಟೀಲ್‌ ಎರಡೂ ಕಡೆಯವರನ್ನು ಸಮಾಧಾನಪಡಿಸಿ ಕ್ಷಮೆ ಕೇಳುವಂತೆ ಸಲಹೆ ನೀಡಿದರು. ಇದಕ್ಕೆ ಎನ್​. ರವಿಕುಮಾರ್​ ದೇಶದ ಪರವಾಗಿ ಮಾತನಾಡಿದ್ದೇನೆ, ಅದು ಕ್ಷಮೆ ಕೇಳುವ ವಿಷಯವಾ ಎಂದರು. ಇತ್ತ ಅಬ್ದುಲ್ ಜಬ್ಬಾರ್ ನಿಮ್ಮ ಮೂಲಕ ನಾನು ಆಡಿದ ಮಾತು ವಾಪಸ್ ಪಡೆಯುತ್ತೇನೆ ಎಂದರು.

Continue Reading

bangalore

ಪಾಕ್ ಪರ ಘೋಷಣೆ ಆರೋಪ: ವಿಧಾನ ಸಭೆಯಲ್ಲಿ ವಾಕ್ಸಮರ

Published

on

ಬೆಂಗಳೂರು : ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಬಿಜೆಪಿಗರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಬುಧವಾರ ವಿಧಾನಸಭೆಯ ಕಲಾಪದಲ್ಲೂ ಈ ವಿಚಾರ ಕೋಲಾಹಲ ಸೃಷ್ಟಿಸಿತು. ಕಲಾಪ ಆರಂಭಕ್ಕೂ ಮೊದಲು ಬಿಜೆಪಿ ನಾಯಕರು ರಾಷ್ಟ್ರಧ್ವಜ ಹಿಡಿದು ವಿಧಾನಸಭೆಗೆ ಪ್ರವೇಶಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಯು.ಟಿ.ಖಾದರ್, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತು. ರಾಜ್ಯದ ಏಳು ಕೋಟಿ ಜನರ ಆತ್ಮ ವಿಧಾನಸೌಧದಲ್ಲಿದೆ. ಇಂತಹ ಸ್ಥಳದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. ಅಂಥವರಿಗೆಲ್ಲ ಇಲ್ಲಿಗೆ ಬರಲು ಅವಕಾಶ ಮಾಡಿಕೊಟ್ಟವರು ಯಾರು? ಇದರಿಂದ ರಾಜ್ಯದ ಜನತೆ ಆತಂಕ್ಕೊಳಗಾಗುವಂತಾಗಿದೆ. ಅವರಿಗೆ ರೆಡ್ ಕಾರ್ಪೆಟ್ ಹಾಸಿ ಇಲ್ಲಿಗೆ ಕರೆಸಿಕೊಂಡಿದ್ದಲ್ಲದೆ, ಅವರನ್ನು ಕಳುಹಿಸಿಕೊಟ್ಟವರು ಯಾರು? ಅವರಿಗೆ ಬಿರಿಯಾನಿ ತಿನ್ನಿಸಿ ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದೆ.

ಈ ವೇಳೆ ಮಾತನಾಡಿದ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್, ಪಾರ್ಲಿಮೆಂಟ್‍ನಲ್ಲಿ ನುಗ್ಗಿದ್ದರಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರ್. ಅಶೋಕ್ ಅವರು, ಸಂಸತ್‍ನಲ್ಲಿ ನುಗ್ಗಿದವರನ್ನು ಹಿಡಿದು ಚೆನ್ನಾಗಿ ರುಬ್ಬಿದರು. ನೀವೇನಾದರೂ ಅವರಿಗೆ ಹೊಡೆದಿರಾ? ಎಂದು ವ್ಯಂಗ್ಯವಾಡಿದರು.

ಸರ್ಕಾರ ಏನೂ ಆಗಿಲ್ಲ ಎಂಬಂತಿದೆ :
ಆ ರೀತಿ ಘೋಷಣೆ ಕೂಗಿದವರನ್ನು ವಿಧಾನಸೌಧಕ್ಕೆ ಯಾರು ಕರೆತಂದರು? 500 ಪೊಲೀಸರು, ಐಪಿಎಸ್, ಐಎಎಸ್ ಅಧಿಕಾರಿಗಳು ಇರುವ ಈ ಸ್ಥಳದಲ್ಲಿ ಆ ರೀತಿ ಘೋಷಣೆ ಕೂಗಲು ಎಷ್ಟು ಧೈರ್ಯವಿರಬೇಕು? ದೇಶದ ಗಡಿಯಲ್ಲಿ ಸೈನಿಕರು ಜೀವದ ಹಂಗು ತೊರೆದು ಗಡಿ ಹಾಗೂ ದೇಶ ರಕ್ಷಣೆ ಮಾಡುತ್ತಿದ್ದಾರೆ. ಅವರಿಗೆ ನಾವು ಯಾವ ಉತ್ತರ ಕೊಡಬೇಕು? ಅಲ್ಲಿ ಈ ರೀತಿ ಘೋಷಣೆ ಕೂಗಿದರೆ ಅವರನ್ನು ಗುಂಡಿಟ್ಟು ಕೊಲ್ಲುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಘೋಷಣೆ ಕೂಗಿದವರು ವಿಧಾನಸೌಧದಿಂದ ಹೊರಹೋಗಲು ವಾಹನ ಮಾಡಿಕೊಟ್ಟವರು ಯಾರು? ಇಷ್ಟೆಲ್ಲಾ ನಡೆದಿದ್ದರೂ ಸರ್ಕಾರ ಏನೂ ಆಗಿಲ್ಲ ಎಂಬಂತಿದೆ. ಒಂದು ಸಣ್ಣ ಕೇಸೂ ಕೂಡ ದಾಖಲಿಸಿಲ್ಲ. ಕಾಂಗ್ರೆಸ್‍ನ ಮತ್ತೊಬ್ಬ ಅಭ್ಯರ್ಥಿ ಜಿ‌.ಸಿ‌. ಚಂದ್ರಶೇಖರ್ ಗೆದ್ದಾಗ ಈ ರೀತಿ ಘೋಷಣೆ ಕೂಗಿಲ್ಲ. ಬಿಜೆಪಿ ಅಭ್ಯರ್ಥಿ ಗೆದ್ದಾಗ ನಮ್ಮ ಪಕ್ಷದವರು ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಕೂಗಿದ್ದೇವೆ. ಆದರೆ ಸಯ್ಯದ್ ನಾಸಿರ್ ಹುಸೇನ್ ಗೆದ್ದ ಸಂದರ್ಭದಲ್ಲಿ ಯಾಕೆ ಈ ರೀತಿ ಘೋಷಣೆ? ಎಲ್ಲಿದೆ ಸುರಕ್ಷತೆ, ಯಾವ ಸೇಫ್ಟಿ ಇದೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಆಕ್ಷೇಪಿಸಲು ಮುಂದಾಗುತ್ತಿದ್ದಂತೆ, ಸ್ಪೀಕರ್ ಯು.ಟಿ. ಖಾದರ್ ಮಧ್ಯ ಪ್ರವೇಶಿಸಿ ಗಂಭೀರವಾದ ವಿಚಾರ ಚರ್ಚೆ ಮಾಡುವಾಗ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು. ರಾಜಕೀಯವನ್ನು ಬಿಡಬೇಕು. ರಾಷ್ಟ್ರ, ರಾಜ್ಯದ ಹಿತದ ಬಗ್ಗೆ ಮಾತನಾಡುವಾಗ ಗಂಭೀರವಾಗಿ ಆಲಿಸಬೇಕು, ಗಂಭೀರವಾದ ವಿಚಾರ ಪ್ರಸ್ತಾಪವಾಗುತ್ತಿದೆ, ಸರ್ಕಾರ ಉತ್ತರ ಕೊಡಲಿದೆ ಎಂದು ಸಲಹೆ ನೀಡಿದರು.
ಕಳೆದ ಬಾರಿ ಬಜೆಟ್ ಮಂಡಿಸುವಾಗ ಕಿವಿಯ ಮೇಲೆ ಹೂವು ಇಟ್ಟುಕೊಂಡು ಬಂದಿದ್ದರು. ಆದರೆ ನಿನ್ನೆ ಘೋಷಣೆ ಕೂಗಿದ ವಿಚಾರ ನೋಡಿಲ್ಲ, ಕೇಳಿಲ್ಲ ಎನ್ನುತ್ತಾರೆ. ಮಾಧ್ಯಮಗಳಲ್ಲಿ ಅದನ್ನು ತೋರಿಸಿದ್ದಾರೆ. ಪಾಕಿಸ್ತಾನದ ಪರ ಘೋಷಣೆ ಕೂಗಿದವರು ಪಾಕಿಸ್ತಾನದವರೇ ಇರಬೇಕು. ಬೇರೆಯವರು ಆ ರೀತಿ ಘೋಷಣೆ ಕೂಗುವುದಿಲ್ಲ. ಏಕೆಂದರೆ ಭಾರತ ಮಾತೆ ಅನ್ನ ತಿಂದವರು, ನೀರು ಕುಡಿದವರು ಆ ರೀತಿ ಕೂಗುವುದಿಲ್ಲ, ಇನ್ನೆಷ್ಟು ಜನ ಬಂದಿದ್ದಾರೋ ಗೊತ್ತಿಲ್ಲ, ಇದು ನಾಡಿನ ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಒಂದು ವೇಳೆ ಮಾಧ್ಯಮದ ವರದಿ ಸುಳ್ಳಾಗಿದ್ದರೆ ಅವರನ್ನು ಜೈಲಿಗೆ ಹಾಕಿ, ನನ್ನ ಮೇಲೂ ಕೇಸು ಹಾಕಿ. ಈ ಘಟನೆ ಬಗ್ಗೆ ಸಣ್ಣ ಕ್ರಮ ಕೈಗೊಂಡಿಲ್ಲ. ಇದರ ಬಗ್ಗೆ ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಬೇಕಿತ್ತು ಎಂದರು.

ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದು ಸದನದಲ್ಲಿ ಗೊಂದಲದ ವಾತಾವರಣ ಉಂಟಾದಾಗ ಸ್ಪೀಕರ್ ಸದನದ ಕಾರ್ಯಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು.

 

ಕಲಾಪ ಮುಂದೂಡಿಕೆ :

ಸದನದ ಬಾವಿಗಿಳಿದು ವಿಪಕ್ಷ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು. ಸ್ಪೀಕರ್ ಪೀಠದ ಎದುರು ಬಿಜೆಪಿ ಸದಸ್ಯರು ಕಾಗದ ಹರಿದು ಎಸೆದಿರುವ ಘಟನೆ ನಡೆಯಿತು. ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 9 ಗಂಟೆಗೆ ಸ್ಪೀಕರ್ ಯುಟಿ ಖಾದರ್ ಮುಂದೂಡಿದರು. ವಿಧಾನಸಭೆ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆ ಆಯಿತು. ನಿಗದಿಯಂತೆ ಇಂದು ವಿಧಾನಸಭೆ ಕಲಾಪ ಮುಕ್ತಾಯವಾಗಬೇಕಿತ್ತು.

Continue Reading

LATEST NEWS

Trending