Friday, August 19, 2022

ರಾಜ್ಯದಲ್ಲಿ ಹತೋಟಿಗೆ ಬಾರದ ಕೊರೊನಾ..! 9,386 ಹೊಸ ಕೊರೋನ ಪ್ರಕರಣ-141 ಬಲಿ

ರಾಜ್ಯದಲ್ಲಿ ಹತೋಟಿಗೆ ಬಾರದ ಕೊರೊನಾ..! 9,386 ಹೊಸ ಕೊರೋನ ಪ್ರಕರಣ-141 ಬಲಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಕಡಿಮೆ ಯಾಗುವ ಅಥವಾ ಹತೋಟಿಗೆ ಬರುವ ಯಾವುದೇ ಲಕ್ಷಣಗಳು ಕಾಣಿಸ್ತಿಲ್ಲ.

ಕಳೆದ 24 ಗಂಟೆಗಳಲ್ಲಿ 9,386 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 141 ಜನರು ಸೋಂಕಿಗೆ ಬಲಿಯಾಗಿದ್ದು, 7,866 ಜನರು ಗುಣಮುಖರಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3,09,792ಕ್ಕೆ ತಲುಪಿದೆ. 747 ಸೋಂಕಿತರು ಐಸಿಯುನಲ್ಲಿ ಚಿಕಿತ್ತೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಕೊರೊನಾದಿಂದ ಸತ್ತವರ ಸಂಖ್ಯೆ 5,232ಕ್ಕೆ ತಲುಪಿದೆ.

ಒಟ್ಟುಸಕ್ರಿಯ ಕೊರೋನ ಪ್ರಕರಣಗಳ ಸಂಖ್ಯೆಯೂ   84,987ಕ್ಕೆ ಏರಿಕೆಯಾಗಿದ್ದು,  ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದೇ ವೇಳೆ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಒಂದೆ ದಿನ 3,357 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 59 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 1,18,728 ಸೋಂಕಿತರು ಇದುವರೆಗೆ ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 1,845 ಜನರು ಸೋಂಕಿಗೆ ಬಲಿಯಾಗಿದ್ದಾರೆ. 80,893 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 35,ಕ್ಕೂ ಅಧಿಕ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 75,760 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ.

LEAVE A REPLY

Please enter your comment!
Please enter your name here

Hot Topics

ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 3.50 ಕೋ.ರೂ ವಂಚಿಸಿದ ರಾಮ್‌ಪ್ರಸಾದ್‌ ಸೇರಿ ನಾಲ್ವರ ವಿರುದ್ಧ FIR

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 100ಕ್ಕೂ ಅಧಿಕ ಮಂದಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್‌ ಪ್ರಸಾದ್‌ ಸೇರಿ ಒಟ್ಟು ನಾಲ್ವರ ಮೇಲೆ ಮಂಗಳೂರು ನಗರ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಮ್‌ ಪ್ರಸಾದ್‌...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...