Home ಕರ್ನಾಟಕ ವಾರ್ತೆ ಕರ್ನಾಟಕದಲ್ಲಿ ಕೊರೊನಾ ಬ್ಲಾಸ್ಟ್: ಮೊದಲ ಬಾರಿಗೆ ಸಾವಿರದ ಗಡಿ ದಾಟಿದ ಡೆಡ್ಲಿ ಕೊರೊನಾ..!!

ಕರ್ನಾಟಕದಲ್ಲಿ ಕೊರೊನಾ ಬ್ಲಾಸ್ಟ್: ಮೊದಲ ಬಾರಿಗೆ ಸಾವಿರದ ಗಡಿ ದಾಟಿದ ಡೆಡ್ಲಿ ಕೊರೊನಾ..!!

ಕರ್ನಾಟಕದಲ್ಲಿ ಕೊರೊನಾ ಬ್ಲಾಸ್ಟ್: ಮೊದಲ ಬಾರಿಗೆ ಸಾವಿರದ ಗಡಿ ದಾಟಿದ ಡೆಡ್ಲಿ ಕೊರೊನಾ..!!

ಬೆಂಗಳೂರು: ರಾಜ್ಯದಲ್ಲಿ ಭಾನುವಾರ (ಜೂನ್ 28) ಕೊರೊನಾ ಸೋಂಕು ಅಕ್ಷರಶಃ ಸ್ಪೋಟಗೊಂಡಿದ್ದು, ಇದೇ ಮೊದಲ ಬಾರಿಗೆ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟಿದೆ.

ರಾಜ್ಯದಲ್ಲಿ ಇಂದು ಕೊರೊನಾ ಬ್ಲಾಸ್ಟ್ ಆಗಿದ್ದು, ಬರೋಬ್ಬರಿ 1267 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ ದಾಖಲೆಯ 783 ಮಂದಿಗೆ ಸೋಂಕು ತಗುಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 27 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಧಾರವಾಡ, ಮೈಸೂರು ತಲಾ 18, ಬಾಗಲಕೋಟೆ 17, ಉತ್ತರಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8,

ಬೀದರ್, ಚಿತ್ರದುರ್ಗ ತಲಾ 7, ರಾಯಚೂರು, ಮಂಡ್ಯ, ದಾವಣಗೆರೆ ಜಿಲ್ಲೆಯಲ್ಲಿ ತಲಾ 6 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಕೊಡಗು ತಲಾ 3, ತುಮಕೂರು 2, ಯಾದಗಿರಿ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.

ಇಂದಿನ 1267 ಹೊಸ ಪ್ರಕರಣ ಸೇರಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13190 ಕ್ಕೆ ಏರಿಕೆಯಾಗಿದೆ.

7507 ಜನ ಬಿಡುಗಡೆಯಾಗಿದ್ದು, 5472 ಸಕ್ರಿಯ ಪ್ರಕರಣಗಳಿದ್ದು, 243 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಇವತ್ತು 16 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ಇದರೊಂದಿಗೆ ಮೃತಪಟ್ಟವರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ.

RECENT NEWS

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...

ಪಾಣೆಮಂಗಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆ ಶವ ಪತ್ತೆ

ಬಂಟ್ವಾಳ: ಪಾಣೆ ಮಂಗಳೂರು ನೂತನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು...
error: Content is protected !!