Tuesday, October 19, 2021

ಈ 5 ಜಿಲ್ಲೆ ಹೊರತುಪಡಿಸಿ ರಾಜ್ಯಾದ್ಯಂತ ಇಂದು ಶಾಲಾ ಕಾಲೇಜ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರ ಇಂದಿನಿಂದ 9 ರಿಂದ 12 ನೇ ತರಗತಿಗಳಲ್ಲಿ ಭೌತಿಕ ಪಾಠ ಪ್ರಾರಂಭವಾಗಲಿದೆ. ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ.

ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾಗಿರುವ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ.

ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9 ಮತ್ತು 10 ನೇ ತರಗತಿ ಹಾಗೂ ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗುವುದು.

9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗಿನ ವೇಳೆ ಅರ್ಧ ದಿನ ಮಾತ್ರ ಭೌತಿಕ ತರಗತಿ ನಡೆಯಲಿವೆ.

ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ, ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.50 ರವರೆಗೆ ತರಗತಿಗಳು ನಡೆಯಲಿವೆ.

ವಿದ್ಯಾರ್ಥಿಗಳು ಮತ್ತು ಕೊಠಡಿಯ ಲಭ್ಯತೆ ನೋಡಿಕೊಂಡು 15 ರಿಂದ 20 ಜನರ ತಂಡ ಮಾಡಿ ಭೌತಿಕ ತರಗತಿ ನಡೆಸಲು ತಿಳಿಸಲಾಗಿದೆ.

ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ದಿನ ಆಫ್ಲೈನ್ ಕ್ಲಾಸ್ ಗಳು ಮತ್ತು ಮೂರು ದಿನ ಆನ್ಲೈನ್ ಕ್ಲಾಸ್ ಗಳು ನಡೆಯಲಿವೆ. ಶೇಕಡ 50 ರಷ್ಟು ವಿದ್ಯಾರ್ಥಿಗಳು ಸೋಮವಾರ, ಮಂಗಳವಾರ, ಬುಧವಾರ ತರಗತಿಗೆ ಹಾಜರಾಗಬೇಕಿದೆ. ಉಳಿದ ವಿದ್ಯಾರ್ಥಿಗಳು ಗುರುವಾರ, ಶುಕ್ರವಾರ, ಶನಿವಾರ ಕಾಲೇಜಿಗೆ ಬರಬೇಕಿದ್ದು, ಉಳಿದ ಮೂರು ದಿನ ಆನ್ಲೈನ್ ತರಗತಿ ನಡೆಯಲಿವೆ.

ಮುಂದಿನ ವಾರದಿಂದ ಒಂದರಿಂದ ಎಂಟನೇ ತರಗತಿ ಕೂಡ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ.

ಇಂದಿನಿಂದ ಭೌತಿಕ ತರಗತಿಗಳು ಶುರುವಾಗಲಿದ್ದು, ಈ ಅವಧಿಯಲ್ಲಿ ಮಕ್ಕಳ ಮೇಲೆ ಎದುರಾಗುವ ಪರಿಣಾಮ ಮತ್ತು ಉಂಟಾಗುವ ಸಮಸ್ಯೆಗಳು, ಪರಿಸ್ಥಿತಿ ಆಧರಿಸಿ ಒಂದರಿಂದ ಎಂಟನೇ ತರಗತಿಗಳನ್ನು ಒಂದು ವಾರದ ನಂತರ ಆರಂಭಿಸುವ ಕುರಿತಂತೆ ತೀರ್ಮಾನ ಕೈಗೊಳ್ಳಲಾಗುತ್ತದೆ.

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...