Connect with us

    BANTWAL

    ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023 – ಬಹಿರಂಗ ಪ್ರಚಾರ ಅಂತ್ಯ..!

    Published

    on

    ಭಾರಿ ಕುತೂಹಲದ ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು “ಮನೆ ಬಾಗಿಲ’ ಪ್ರಚಾರ ಮಾತ್ರ ಇರಲಿದೆ.

    ಬೆಂಗಳೂರು: ಭಾರಿ ಕುತೂಹಲದ ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು “ಮನೆ ಬಾಗಿಲ’ ಪ್ರಚಾರ ಮಾತ್ರ ಇರಲಿದೆ.

    ಸೋಮವಾರ(ಇಂದು) ಸಂಜೆಯಿಂದಲೇ ಮೂರು ದಿನ ದಿನಗಳ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.

    ಮುಂದಿನ 48 ಗಂಟೆಗಳ ಕಾಲ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸಿದ್ದು. ಈ ಅವಧಿಯಲ್ಲಿ ಬಹಿರಂಗ ಪ್ರಚಾರ ಮತ್ತು ಧ್ವನಿವರ್ಧಕಗಳ ಬಳಕೆಗೆ ನಿಷೇಧವಿರುತ್ತದೆ.

    ಜತೆಗೆ ಪ್ರತೀ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. 5ಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ.

    ಆದರೆ ಮನೆ- ಮನೆ ಪ್ರಚಾರಕ್ಕೆ ಇದು ಅನ್ವಯವಾಗುವುದಿಲ್ಲ. ಮನೆ-ಮನೆ ಪ್ರಚಾರದ ವೇಳೆಯಲ್ಲೂ ಚುನಾವಣ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ.

    ಪ್ರತಿಸ್ಪರ್ಧಿಗಳ ಬಗ್ಗೆ ವೈಯಕ್ತಿಕ ಟೀಕೆ, ನಿಂದನೆ ಮಾಡುವಂತಿಲ್ಲ, ದ್ವೇಷದ ಮಾತುಗಳು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮಾತುಗಳಿಗೆ ನಿರ್ಬಂಧವಿರಲಿದೆ.

    ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಸ್ಟಾರ್ ಪ್ರಚಾರಕರು, ಮುಖಂಡರು ಕ್ಷೇತ್ರ ತೊರೆಯಲು ಸೂಚಿಸಲಾಗಿದೆ.

    ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಎಚ್ಚರಿಸಿದೆ.

    ಮತದಾನ ಮೇ 10ರಂದು ಮತದಾನ ನಡೆಯಲಿದ್ದು ಚುನಾವಣಾ ಆಯೋಗ ಮತದಾನ ಸುಸೂತ್ರವಾಗಿ ನಡೆಯಲು ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ.

    ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

    ಸುಮಾರು 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದ್ದು, 84,119 ಸಾವಿರ ರಾಜ್ಯ ಪೊಲೀಸರು, 304 DySP, 991 ಇನ್ಸ್‌ಪೆಕ್ಟರ್, 20610 ಪಿಎಸ್ಐ, 8500 ಹೊರ ರಾಜ್ಯ ಪೊಲೀಸರು, 650 ಸಿಎಪಿಎಫ್ ತುಕಡಿಗಳು ನಿಯೋಜನೆ ಮಾಡಲಾಗಿದೆ.

    ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ ಅಂದೇ ಫಲಿತಾಂಶವೂ ಪ್ರಕಟವಾಗಲಿದೆ.

    ಈ ಬಾರಿ ರಾಜ್ಯದಲ್ಲಿ ದಾಖಲೆಯ ಅಬ್ಬರದ ಪ್ರಚಾರ

    ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಇತರರ ಅಬ್ಬರದ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಕೊನೆಯ ದಿನಗಳಲ್ಲಿ ಮೂರೂ ಪಕ್ಷಗಳು ಪ್ರಚಾರದಲ್ಲಿ ಜಿದ್ದಾಜಿದ್ದಿನ ಪೈಪೋಟಿಗೆ ಬಿದ್ದಿದ್ದವು.

    ಬಿಜೆಪಿ ಪರವಾಗಿಯಂತೂ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಅಖಾಡಕ್ಕೆ ಧುಮುಕಿ ರಾಜ್ಯದಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿದ್ದರು.

    ಬೆಂಗಳೂರಿನಲ್ಲಿ ಮೆಗಾ ರೋಡ್​​ಶೋ ನಡೆಸುವ ಮೂಲಕ ಮತಯಾಚನೆ ಮಾಡಿದ್ದರು.

    ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ರಾಜ್ಯದ ಮೂಲೆ ಮೂಲೆ ಸುತ್ತಿದ್ದರು. ಅತ್ತ ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕೂಡ ಪ್ರಚಾರ ಕೈಗೊಂಡಿದ್ದರು.

    ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು ಇಳಿ ವಯಸ್ಸಿನಲ್ಲಿಯೂ ಉತ್ಸಾಹದಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending