Wednesday, October 5, 2022

ಬಕ್ರೀದ್ ಹಬ್ಬಕ್ಕೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

ಮಂಗಳೂರು: ರಾಜ್ಯದಲ್ಲಿ ನಾಳೆ ನಡೆಯಲಿರುವ ಬಕ್ರೀದ್ ಹಬ್ಬವನ್ನು ಶಾಂತಿ, ಸುವ್ಯವಸ್ಥೆ ಹಾಗೂ ಸಾಮರಸ್ಯದೊಂದಿಗೆ ಅಚರಿಸುವ ಕುರಿತಂತೆ ರಾಜ್ಯ ಸರಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.


ಇದರನ್ವಯ ಹಬ್ಬದ ದಿನ ಸಾಮೂಹಿಕ ಪ್ರಾರ್ಥನೆ ಸಂದರ್ಭದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್‌-19 ನಿಯಂತ್ರಣ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020 ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು ನೆರವೇರಿಸಬೇಕು.

ಖುರ್ಬಾನಿಯನ್ನು ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ- ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವುದನ್ನು ನಿಷೇಧಿಸಲಾಗಿದೆ.

ಜಿಲ್ಲಾಡಳಿತ ಅಥವಾ ಸ್ಥಳೀಯ ಆಡಳಿತ ಸಂಸ್ಥೆಗಳು ನಿಗದಿ ಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿಯನ್ನು ನೆರವೇರಿಸಬೇಕು. ಖುರ್ಬಾನಿಯನ್ನು ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವುದು ಕಡ್ಡಾಯವಾಗಿದೆ.

ಪ್ರಾಣಿ ತ್ಯಾಜ್ಯವನ್ನು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಪರಿಣಾಮಕಾರಿಯಾಗಿ ವಿಲೇವಾರಿ ಮಾಡಬೇಕು.

ಪೊಲೀಸ್‌, ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ಸಾಮಾನ್ಯ ಹಾಗೂ ಸ್ಥಳೀಯವಾಗಿ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಇಷ್ಟೇ ಅಲ್ಲದೆ ಬಕ್ರೀದ್‌ ಆಚರಣೆ ಕುರಿತಂತೆ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರಕಾರದ ಸುತ್ತೋಲೆ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.