LATEST NEWS
ಹಿಜಾಬ್ ತೀರ್ಪು ವಿರೋಧಿಸಿ ನಾಳೆ ಮುಸ್ಲಿಂ ಸಮುದಾಯದಿಂದ ಸ್ವಯಂ ಪ್ರೇರಿತ ಕರ್ನಾಟಕ ಬಂದ್ಗೆ ಕರೆ
Published
3 years agoon
By
Adminಮಂಗಳೂರು: ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅತ್ಯಗತ್ಯ ಭಾಗವಲ್ಲ ಎಂದು ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನಾರ್ಥವಾಗಿ ನಾಳೆ ಮುಸ್ಲಿಂ ಸಮುದಾಯ ಸ್ವಯಂ ಪ್ರೇರಿತ ಕರ್ನಾಟಕ ಬಂದ್ಗೆ ಮುಸ್ಲಿಂ ವಿದ್ವಾಂಸ ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿದ್ದಾರೆ.
ನಾಳೆ ಎಲ್ಲರೂ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ವಿರೋಧವನ್ನು ವ್ಯಕ್ತಪಡಿಸಬೇಕು. ನ್ಯಾಯಕ್ಕಾಗಿ ಒತ್ತಾಯಿಸಿ ಈ ಬಂದ್ ಕರೆ ನೀಡಲಾಗಿದ್ದು, ಬಂದ್ ಶಾಂತಿಯುತವಾಗಿರಬೇಕು.
ಬಲವಂತದ ಬಂದ್ ನಡೆಸಬಾರದು. ಜಾಥಾ, ಮೆರವಣಿಗೆ ಕೂಡ ನಡೆಸಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಈ ಬಂದ್ಗೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸಿದೆ. ಈ ಬಗ್ಗೆ ಅಧ್ಯಕ್ಷ ಕೆ.ಅಶ್ರಫ್ ಪತ್ರಿಕಾ ಹೇಳಿಕೆ ನೀಡಿ,
ಈ ತೀರ್ಪು ಸಾಂವಿಧಾನಿಕ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣ ಹಕ್ಕುಗಳನ್ನು ಕಸಿದುಕೊಳ್ಳುವ ಸ್ಥಿತಿಯನ್ನು ನಿರ್ಮಾಣ ಮಾಡಿದೆ.
ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲಿ ಸಹ ಸ್ವಯಂ ಪ್ರೇರಿತವಾಗಿ ಶಾಂತಿಯುತ ವ್ಯವಹಾರ ಸ್ಥಗಿತ ಮಾಡುತ್ತೇವೆ ಎಂದಿದ್ದಾರೆ. ಜೊತೆಗೆ ಪಿಎಫ್ಐನ ಕರ್ನಾಟಕ ರಾಜ್ಯ ಸಮಿತಿ ಸಹ ಬೆಂಬಲ ವ್ಯಕ್ತಪಡಿಸಿದೆ. SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಹ ಸಂಪೂರ್ಣ ಬೆಂಬಲ ನೀಡಿ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದೆ.
Baindooru
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ
Published
4 minutes agoon
23/11/2024By
NEWS DESK2ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೂರು ಉಪಚುನಾವಣೆ ಗೆದ್ದ ಕಾಂಗ್ರೆಸ್ ನಾಯಕರು ವಿಜಯೋತ್ಸವದಲ್ಲಿ ಬ್ಯುಸಿಯಾಗಿದ್ದಾರೆ.
ಕಾಂಗ್ರೆಸ್ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದರೆ ಬಿಜೆಪಿ ನಾಯಕರಿಗೆ ಬಹಳ ದೊಡ್ಡ ನಿರಾಸೆಯಾಗಿದೆ. ಬಿಜೆಪಿ ನಾಯಕರು ನಿರೀಕ್ಷೆ ಮಾಡದ ತೀರ್ಪನ್ನು ಮೂರು ವಿಧಾನಸಭಾ ಕ್ಷೇತ್ರದ ಮತದಾರರು ನೀಡಿದ್ದು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಸೋಲು ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ಬೇಸರಕ್ಕೆ ಕಾರಣವಾಗಿದೆ.
ಬೈಎಲೆಕ್ಷನ್ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ಮನೆಯಲ್ಲಿನ ಟಿವಿ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲ್ಹಾರ ಪಟ್ಟಣದ ವೀರಭದ್ರಪ್ಪ ಬಾಗಿ ಎಂಬುವವರು ಇಂದು ಬೆಳಗ್ಗೆಯಿಂದ ಉಪಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಾ ಇದ್ದರು. 3ಕ್ಕೆ 3 ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದ್ದಂತೆ ಟಿವಿ ಒಡೆದು ರಾಜ್ಯ ಬಿಜೆಪಿ ನಾಯಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕರ ಒಗ್ಗಟ್ಟಿನ ಕೊರತೆಯಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬಿಜೆಪಿ ವರಿಷ್ಠರು ಮೊದಲು ಬಿಜೆಪಿ ನಾಯಕರು, ಮುಖಂಡರ ಸಭೆ ಕರೆಯಬೇಕು. ಬಿಜೆಪಿ ನಾಯಕರ ನಡುವಿನ ಒಡಕಿನಿಂದ ಕಾರ್ಯಕರ್ತರು ಹಾಳಾಗುವ ಪರಿಸ್ಥಿತಿ ಬಂದಿದೆ ಎಂದು ವೀರಭದ್ರಪ್ಪ ಬಾಗಿ ಆಗ್ರಹಿಸಿದ್ದಾರೆ.
Baindooru
ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ
Published
1 hour agoon
23/11/2024By
NEWS DESK2ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.
ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ
ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
DAKSHINA KANNADA
ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !
Published
2 hours agoon
23/11/2024By
NEWS DESK3ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.
ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್ಗೆ ಸಲ್ಲಿಕೆಯಾಗಿಲ್ಲ.
ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.
LATEST NEWS
Viral Video: ಮಿಂಚಿನ ವೇಗದಲ್ಲಿ ಊಟ ಬಡಿಸಿದ ನಾಲ್ವರು ಯುವಕರು
ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ
ಜಾರ್ಖಂಡ್ನಲ್ಲಿ ಬಿಗ್ ಟ್ವಿಸ್ಟ್; ಜೆಎಂಎಂ ಮುನ್ನಡೆ – ಎನ್ಡಿಎ ಹಿಂದಿಕ್ಕಿದ ಇಂಡಿಯಾ ಒಕ್ಕೂಟ
ಕರ್ನಾಟಕ ಉಪಚುನಾವಣೆ : ‘ಕೈ’ ಹಿಡಿದ ಮತದಾರ…ಕಮಲಕ್ಕೆ ಶಾಕ್
ಮಹಾರಾಷ್ಟ್ರದಲ್ಲಿ ಮಹಾಯುತಿಗೆ 200+ ಕ್ಷೇತ್ರಗಳಲ್ಲಿ ಮುನ್ನಡೆ
ಬಾಗಲಕೋಟೆ ಹೇರ್ ಡ್ರೈಯರ್ ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಪ್ರಕರಣದ ಹಿಂದಿದೆ ಪ್ರೇಮ ಪುರಾಣ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- Baindooru1 day ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ