Connect with us

DAKSHINA KANNADA

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪ್ರಶಸ್ತಿ ಪ್ರಕಟ : ಪಾರ್ತಿಸುಬ್ಬ ಪ್ರಶಸ್ತಿಗೆ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಆಯ್ಕೆ..!

Published

on

ಮಂಗಳೂರು :  ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ ಪ್ರತಿಷ್ಟಿತ ಪಾರ್ತಿಸುಬ್ಬ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನ ಪ್ರಸಂಗಕರ್ತ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು 1 ಲಕ್ಷದ ನಗದು ಪ್ರಶಸ್ತಿ ಫಲಕ, ಪ್ರಮಾಣಪತ್ರವನ್ನು ಒಳಗೊಂಡಿದೆ ಜೊತೆಗೆ 5 ಮಂದಿ ಯಕ್ಷಗಾನ ಸಾಧಕರನ್ನು ಗೌರವ ಪ್ರಶಸ್ತಿಗೆ ಹಾಗು 10 ಯಕ್ಷಗಾನ ಸಾಧಕರನ್ನು “ಯಕ್ಷಸಿರಿ” ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.

ಶಿರಸಿಯ ಟಿ.ಆರ್.ಸಿ.ಸಭಾಭವನದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಕಲಾವಿರಾದ ಹಾಸ್ಯಗಾರ ಸತ್ಯನಾರಾಯಣ , ಮುತ್ತಪ್ಪ ತನಿಯ ಪೂಜಾರಿ, ನರೇಂದ್ರ ಕುಮಾರ್ ಜೈನ್, ಮೂಡಲಗಿರಿಯಪ್ಪ, ಎನ್.ಟಿ.ಮೂರ್ತಾಚಾರ್ಯ ಇವರುಗಳನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಪ್ರಶಸ್ತಿಯು ತಲಾ 50,000 ರೂಪಾಯಿ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರವನ್ನು ಒಳಗೊಂಡಿದೆ.

‘ಯಕ್ಷಸಿರಿ ವಾರ್ಷಿಕ ವಿಭಾಗ ಪ್ರಶಸ್ತಿ’ಗೆ ಹಳ್ಳಾಡಿ ಜಯರಾಮ ಶೆಟ್ಟಿ, ಗೋಪಾಲ ಗಾಣಿಗ ಆಜ್ರಿ, ಬೋಳಾರ ಸುಬ್ಬಯ್ಯ ಶೆಟ್ಟಿ, ಸೀತೂರು ಅನಂತಪದ್ಮನಾಭ ರಾವ್, ಕಡತೋಕ ಲಕ್ಷ್ಮೀನಾರಾಯಣ ಶಂಭು ಭಾಗವತ, ರಾಮ ಸಾಲಿಯಾನ್ ಮಂಗಲ್ಪಾಡಿ, ಕೊಕ್ಕಡ ಈಶ್ವರ ಭಟ್, ಅಡಿಗೋಣ ಭೀರಣ್ಣನಾಯ್ಕ, ಭದ್ರಯ್ಯ, ಬಸವರಾಜಪ್ಪ ಅವರುಗಳು ಆಯ್ಕೆಯಾಗಿದ್ದು ಪ್ರಶಸ್ತಿಯು 25,೦೦೦ರೂಪಾಯಿ ನಗದು, ಪ್ರಮಾಣಪತ್ರ ಒಳಗೊಂಡಿದೆ.

2020ನೇ ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಡಾ.ಕೆ.ರಮಾನಂದ ಬನಾರಿ ಇವರ “ಅರ್ಥಾಯನ” ಎಂಬ ಕೃತಿ ಹಾಗೂ ಡಾ.ಹೆಚ್.ಆರ್.ಚೇತನಾ ಇವರ “ಮೂಡಲಪಾಯ ಯಕ್ಷಗಾನ” ಎಂಬ ಕೃತಿ ಆಯ್ಕೆಯಾಗಿದ್ದು ಪುಸ್ತಕ ಬಹುಮಾನ ಪುರಸ್ಕೃತರಿಗೆ ತಲಾ 25,೦೦೦ರೂಪಾಯಿಗಳ ನಗದು, ಪ್ರಮಾಣಪತ್ರ ನೀಡಿ ಗೌರವಿಸಲಾಗುತ್ತದೆ.

ಪ್ರಶಸ್ತಿ ಪ್ರದಾನ ಸಮಾರಂಭವು 2022 ಮಾರ್ಚ್ ಕೊನೆಯ ವಾರದಲ್ಲಿ ಕಾರ್ಕಳದಲ್ಲಿ ನಡೆಯಲಿದ್ದು ಸಚಿವರುಗಳು ಹಾಗು ಹಲವಾರು ಮಂದಿ ಅತಿಥಿ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಹಿತಿ ನೀಡಿದೆ.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಚುನಾವಣಾ ಆಯೋಗಕ್ಕೆ ದೂರು

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending