Connect with us

LATEST NEWS

ಶೆಟ್ಟರ್‌, ಸವದಿಯವರೇ ಪಕ್ಷ ಏನು ಕಡಿಮೆ ಮಾಡಿದೆ ? ನೀವು ಬಿಜೆಪಿಗೆ ಮೋಸ ಮಾಡಿದ್ದೀರಿ: ಬಿಎಸ್‌ವೈ ಕಿಡಿ

Published

on

ಬೆಂಗಳೂರು: ಜಗದೀಶ್‌ ಶೆಟ್ಟರ್‌ ಅವರಿಗೆ ಪಕ್ಷ ಮುಖ್ಯಮಂತ್ರಿ ಅವಕಾಶ ನೀಡಿದೆ. ಇನ್ನು ಲಕ್ಷಣ ಸವದಿಯವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿದೆ. ಅದಾಗಿಯೂ ಕಾಂಗ್ರೆಸ್‌ ಸೇರಿದ್ದು, ಜನತೆಗೆ ಮಾಡಿದ ದ್ರೋಹ ಎಂದು ಕಿಡಿಕಾರಿದರು. ರಾಜ್ಯಾದ್ಯಂತ ಪ್ರವಾಸ ಮಾಡಿ ಇವರೆಲ್ಲರ ಬಂಡವಾಳ ಬಯಲು ಮಾಡುತ್ತೇನೆ ಎಂದರು.


ಜಗದೀಶ್‌ ಶೆಟ್ಟರ್‌ ಕುಟುಂಬ ಜನಸಂಘದಿಂದ ಇದ್ದವರು. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಸೇರಿ ಎಲ್ಲಾ ಗೌರವ ನೀಡಿದೆ. ಅವರಿಗೂ ಏನು ಕಡಿಮೆ ಮಾಡಿದೆ. ಲಕ್ಷಣ ಸವದಿಯವರು ಚುನಾವಣೆಯಲ್ಲಿ ಸೋತಾಗಲೂ ಅವರನ್ನು ಉಪಮುಖ್ಯ ಮಂತ್ರಿ ಮಾಡಿ ಎಲ್ಲಾ ಸ್ಥಾನಮಾನ ನೀಡಿದ್ದೇವೆ.

ವಿಧಾನಪರಿಷತ್‌ ಸದಸ್ಯ ಸ್ಥಾನವನ್ನು ನೀಡಿದ್ದೇವೆ. ನಿಮಗೆ ಏನು ಅನ್ಯಾಯ ಆಗಿತ್ತು. ಪಕ್ಷ ನಿಮಗೆ ಏನು ಕಡಿಮೆ ಮಾಡಿತ್ತು ಎಂದು ಪ್ರಶ್ನಿಸಿದ ಅವರು ಕಾಂಗ್ರೆಸ್‌ ಪಕ್ಷಕ್ಕೆ ಹೋಗುವ ಪ್ರಯತ್ನ ಜನತೆಗೆ ಮಾಡಿದ ದ್ರೋಹ ಎಂದು ಹೇಳಿದರು.

ನಿನ್ನೆ ಸ್ವತಃ ಹೈಕಮಾಂಡ್‌ ಶೆಟ್ಟರ್‌ ಮನೆಗೆ ತೆರಳಿ ಕೇಂದ್ರದಲ್ಲಿ ಸಚಿವ ಸ್ಥಾನ ನೀಡುತ್ತೇವೆ. ಅಥವಾ ಬೇರೆ ಉನ್ನತ ಹುದ್ದೆ ನೀಡುತ್ತೇವೆ ಎಂದು ಹೇಳಿದರೂ ಕೇಳದ ಜಗದೀಶ್‌ ಶೆಟ್ಟರ್‌ ಅವರು ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಇದನ್ನು ಯಾರೂ ಕ್ಷಮಿಸುವುದಿಲ್ಲ ಎಂದು ಹೇಳಿದರು.

ಅಂಗಾರ-ರಘುಪತಿ ಭಟ್‌ಗೆ ಅಭಿನಂದನೆ

ಈ ಬಾರಿ ಟಿಕೆಟ್‌ ಸಿಗದಿದ್ದರೂ ಸುಳ್ಯ ಶಾಸಕ ಎಸ್‌. ಅಂಗಾರ, ಉಡುಪಿ ಶಾಸಕ ರಘುಪತಿ ಭಟ್‌ ಹಾಗೂ ಕೆ.ಎಸ್‌ ಈಶ್ವರಪ್ಪ ಅವರು ಪಕ್ಷಕ್ಕಾಗಿ ದುಡಿಯುತ್ತೇನೆ ಎಂದಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

 

FILM

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೆಮ್ಮೆಯ ಗರಿ; ಜಪಾನ್ ನತ್ತ 777 ಚಾರ್ಲಿ!

Published

on

777 ಚಾರ್ಲಿ ಭಾರೀ ಸದ್ದು ಮಾಡಿದ್ದ ಸಿನಿಮಾ. ಈ ಚಿತ್ರ ನೆಚ್ಚಿಕೊಳ್ಳದವರೇ ಇಲ್ಲ. ನಾಯಿ ಹಾಗೂ ಮನುಷ್ಯನ ನಡುವಿನ ಬಂಧವನ್ನು ಸಾರಿದ ಈ ಚಿತ್ರ ಭಾರೀ ಯಶಸನ್ನು ಬಾಚಿಕೊಂಡಿತ್ತು. ಇದೀಗ ಈ ಚಿತ್ರ ಜಪಾನ್ ನತ್ತ ಪಯಣ ಬೆಳೆಸಿದೆ.

ಜಪಾನ್ ನಲ್ಲಿ 777 ಚಾರ್ಲಿ :

ಪರಂವಃ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬಂದ 777 ಚಾರ್ಲಿ ಈಗಾಗಲೇ 5 ಭಾಷೆಗಳಲ್ಲಿ ರಿಲೀಸ್ ಆಗಿತ್ತು. ಇದೀಗ ಜಪಾನ್ ಸರದಿ. ಜಪಾನೀಸ್ ಭಾಷೆಗೆ ಡಬ್ ಆಗಿ ಬಿಡುಗಡೆ ಆಗುತ್ತಿದೆ. ಜೂ.28 ರಂದು ಜಪಾನ್ ನಗರಗಳಲ್ಲಿ 777 ಚಾರ್ಲಿ ಬಿಡುಗಡೆ ಆಗಲಿದೆ. ಬಾಲಿವುಡ್ ಹಾಗೂ ಟಾಲಿವುಡ್ ಸಿನಿಮಾಗಳು ಈಗಾಗಲೇ ಜಪಾನ್ ನಲ್ಲಿ ಸದ್ದು ಮಾಡಿವೆ. ಇದೀಗ ಚಾರ್ಲಿ ಸರದಿ. ಚಂದನವನದ(Sandalwood) ಪಾಲಿಗಿದು ಹೆಮ್ಮೆಯ ವಿಚಾರವೇ ಸರಿ.

ಜಪಾನ್ ಚಿತ್ರರಂಗದ ದೊಡ್ಡ ಸಂಸ್ಥೆ ‘ಶೋಚಿಕೋ ಮೂವೀ’ ‘777 ಚಾರ್ಲಿ’ ಚಿತ್ರವನ್ನು ಜಪಾನಿನಲ್ಲಿ ವಿತರಣೆ ಮಾಡಲು ಮುಂದಾಗಿದೆ. ಈ ಹಿಂದೆ ಇದೇ ಸಂಸ್ಥೆ ‘Hachi: A Dog’s Tale’ ಸಿನಿಮಾವನ್ನು ಜಪಾನಿನಲ್ಲಿ ವಿತರಣೆ ಮಾಡಿ ಯಶಸ್ಸು ಕಂಡಿತ್ತು.

2023ರಲ್ಲಿ ‘777 ಚಾರ್ಲಿ’ ಸಿನಿಮಾ ಥೈಲ್ಯಾಂಡ್​ನಲ್ಲಿ ಡಬ್ ಆಗಿ ಬಿಡುಗಡೆಗೊಂಡಿತ್ತು. ಈ ಸಿನಿಮಾ ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ಜರ್ಮನಿ, ತೈವಾನ್ ಮುಂತಾದ ದೇಶಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ : PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

ಕಿರಣ್​ ರಾಜ್​ ನಿರ್ದೇಶನದ 2022ರ ಜೂನ್ 10ರಂದು ಭಾರತದ 5 ಭಾಷೆಗಳಲ್ಲಿ ಬಿಡುಗಡೆಯಾಗಿ ಜನಮನಸೂರೆಗೊಂಡಿತ್ತು. ಚಾರ್ಲಿಯಾಗಿ ನಾಯಿಯ ಅಭಿನಯ ಅದ್ಭುತ ಎನಿಸಿತ್ತು. ರಕ್ಷಿತ್ ಶೆಟ್ಟಿ ಮನೋಜ್ಞವಾಗಿ ನಟಿಸಿದ್ದರು. ಚಿತ್ರದಲ್ಲಿ ಸಂಗೀತಾ ಶೃಂಗೇರಿ ಗಮನ ಸೆಳೆದಿದ್ದರು.

Continue Reading

LATEST NEWS

ಮೂರು ವರ್ಷದ ಮಗುವಿನ ಎದೆಗೆ ಕಾಲಿಟ್ಟು ಕೊಂ*ದ ಪಾಪಿ..! ಬೆಳಗಾವಿಯಲ್ಲೊಂದು ಅಮಾನುಷ ಘಟನೆ

Published

on

ಬೆಳಗಾವಿ: ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನಡೆದಿದೆ.

ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಮೂರು ವರ್ಷದ ಮೃತಪಟ್ಟಿರುವ ಮಗು.  ಜೋತಿಭಾ ತುಕಾರಾಮ ಬಾಬಾಬರ ಎಂಬವನು ಮಗುವನ್ನು ಕೊಂ*ದವರು ಎಂದು ತಿಳಿದು ಬಂದಿದೆ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ಐವತ್ತು ಸಾವಿರ ಸಾಲ ನೀಡಿದ್ದ ಎನ್ನಲಾಗಿದೆ. ಈ ಹಣವನ್ನು ವಾಪಸ್‌ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

ಮುಂದೆ ಓದಿ..: ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಸಾ*ವಿನಲ್ಲೂ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

LATEST NEWS

Trending