Connect with us

    DAKSHINA KANNADA

    ಮತದಾನಕ್ಕೆ ಮೂರೇ ದಿನಗಳು ಬಾಕಿ: ಲೋಕ್‌ಪೋಲ್‌ ಮೆಗಾ ಸಮೀಕ್ಷೆ ಪ್ರಕಟ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

    Published

    on

    ಬೆಂಗಳೂರು: ರಾಜ್ಯ ಚುನಾವಣೆ ಮತದಾನ ದಿನಕ್ಕೆ 3 ದಿನಗಳು ಬಾಕಿ ಇರುವಂತೆ ಮತ್ತೊಂದು ಚುನಾವಣೆ ಪೂರ್ವ ಸಮೀಕ್ಷೆ ವರದಿ ಪ್ರಕಟಗೊಂಡಿದೆ. ಲೋಕ್‌ಪೋಲ್‌ ಎಂಬ ಸಂಸ್ಥೆ ನಡೆಸಿದ ಈ ಸಮೀಕ್ಷೆ ಪ್ರಕಾರ, ಕಾಂಗ್ರೆಸ್‌ ಭರ್ಜರಿ ಮುನ್ನಡೆ ಪಡೆದುಕೊಂಡು ಅಧಿಕಾರಕ್ಕೇರಲಿದೆ.

    ರಾಜ್ಯ ಚುನಾವಣೆ ಮತದಾನ ಮೇ 10ಕ್ಕೆ ನಿಗದಿಯಾಗಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಮತದಾನಕ್ಕೆ ನಾಲ್ಕು ದಿನ ಬಾಕಿ ಇರುವಂತೆ ರಾಷ್ಟ್ರೀಯ ಸಮೀಕ್ಷಾ ಸಂಸ್ಥೆಯಾದ ಲೋಕ್‌ಪೋಲ್‌ ತನ್ನ ಸಮೀಕ್ಷೆಯನ್ನು ನೀಡಿದೆ. ಮೊದಲ ಸ್ಥಾನದಲ್ಲಿ ಕಾಂಗ್ರೆಸ್‌ ಬಹುಮತಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಉಳಿದಂತೆ ಬಿಜೆಪಿ ಎರಡನೇ ಸ್ಥಾನ ಪಡೆದುಕೊಳ್ಳಲಿದ್ದು, ಮೂರನೇ ಸ್ಥಾನದಲ್ಲಿ ಜೆಡಿಎಸ್‌ ಇರಲಿದೆ.

    ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

    ಕಾಂಗ್ರೆಸ್‌ 129 -134 ಸ್ಥಾನಗಳು, ಬಿ

    ಜೆಪಿ 59-65 ಸ್ಥಾನಗಳು

    ಜೆಡಿಎಸ್‌ 23 – 28 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು.

    ಇನ್ನು ಪಕ್ಷೇತರ/ಸ್ವತಂತ್ರ ಅಭ್ಯರ್ಥಿಗಳು 0-2 ಸ್ಥಾನಗಳಿಸಬಹುದು ಎಂದು ಲೋಕ್‌ಪೋಲ್‌ ತನ್ನ ಸಮೀಕ್ಷೆ ವರದಿಯಲ್ಲಿ ತಿಳಿಸಿದೆ.

    ಸದ್ಯ ಅಧಿಕಾರಕ್ಕೇರಲು ಮ್ಯಾಜಿಕ್‌ ನಂಬರ್‌ 113 ಇದ್ದು, ಕಾಂಗ್ರೆಸ್‌ ಬಹುಮತ ಪಡೆಯುವುದು ಮಾತ್ರವಲ್ಲ ಸುಮಾರು 20 ಸ್ಥಾನಗಳು ಹೆಚ್ಚು ಪಡೆಯಬಹುದು ಎಂದು ಅಂದಾಜಿಸಲಾಗಿದೆ.

     ಮತ ಹಂಚಿಕೆ ಎಷ್ಟು ?

    ಚಲಾವಣೆಯಾಗುವ ಮತಗಳಲ್ಲಿ ಶೇ. 42 ರಿಂದ 45 ರಷ್ಟು ಕಾಂಗ್ರೆಸ್‌ ಪಡೆದುಕೊಳ್ಳಲಿದೆ. ಬಿಜೆಪಿ ಶೇ 31 ರಿಂದ 32 ರಷ್ಟು ಹಾಗೂ ಜೆಡಿಎಸ್‌ ಶೇ 14 ರಿಂದ 18 ರಷ್ಟು ಮತಗಳನ್ನು ಪಡೆದುಕೊಳ್ಳಲಿದೆ. ಉಳಿದಂತೆ ಶೇ.5 ರಿಂದ 9 ರಷ್ಟು ಮತಗಳು ಇತರೆ ಪಕ್ಷಗಳ/ ಸ್ವತಂತ್ರ ಅಭ್ಯರ್ಥಿಗಳ ಪಾಲಾಗಲಿವೆ ಎಂದು ಲೋಕ್‌ಪೋಲ್‌ ತಿಳಿಸಿದೆ.

    ಸಮೀಕ್ಷೆಯ ವಿಧಾನ ?

    ಲೋಕ್‌ಪೋಲ್‌ 150 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಪ್ರಾಯ ಸಂಗ್ರಹ ಮಾಡಿದೆ. ಇದಕ್ಕಾಗಿ 15,000 ಕರೆಗಳನ್ನು ಮಾಡಿ ಆ ಮೂಲಕ ಮಾಹಿತಿ ಪಡೆಯಲಾಗಿದೆ. ಕಳೆದ ಎರಡು ತಿಂಗಳಿಂದಲ್ಲಿ ರಾಜ್ಯದ ಹಲವು ಕ್ಷೇತ್ರಗಳಲ್ಲಿ ತಳಮಟ್ಟದಿಂದ 65 ಸಾವಿರ ಮಾದರಿ ಸಂಗ್ರಹ ಮಾಡಲಾಗಿದೆ. ಒಟ್ಟಾರೆ ಈ ಹಿಂದಿನ ಎಲ್ಲಾ ಮಾಹಿತಿ ಸಂಗ್ರಹ ಮಾಡಿ ಅಂತಿಮ ವರದಿ ಪ್ರಕಟಿಸಲಾಗಿದೆ ಎಂದು ಸಮೀಕ್ಷಾ ಸಂಸ್ಥೆ ತಿಳಿಸಿದೆ.

    ಮೂರನೇ ಸಮೀಕ್ಷೆ

    ಫೆಬ್ರವರಿ, ಮಾರ್ಚ್‌ ತಿಂಗಳಲ್ಲಿಯೂ ಈ ಲೋಕ್‌ಪೋಲ್‌ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿತ್ತು. ಆ ಸಂದರ್ಭದಲ್ಲಿಯೂ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂದು ತಿಳಿಸಿತ್ತು. ಕಳೆದ ಎರಡೂ ಸಮೀಕ್ಷೆ ವರದಿಗಿಂತಲೂ ಮೇ 6 ರಂದು ಬಂದ ಅಂತಿಮ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಿಸಲಿದೆ ಎಂದು ತಿಳಿಸಲಾಗಿದೆ.

    9 Comments

    9 Comments

    1. Nagaraj SK

      07/05/2023 at 4:24 PM

      Congress party 🪣 media, save this survey. Congress will get 78 seats, JDS 32, BJP between 98-105

    2. Shishir

      07/05/2023 at 5:07 PM

      What is this your doing joke right suvarna news they done two survey with Janki bath fist of all Janki bath is a not local Chanel it’s a national Chanel
      Then what is way of doing survey by phone this is a nonsense survey and moreover we are not fool🙏🙏🙏
      Give your number because after the counting i will tell the who got mejority and who got 55-70 seats.

    3. Poorna

      07/05/2023 at 10:45 PM

      ಜೆಡಿಎಸ್42 ಬಿಜೆಪಿ 90 ಕಾಂಗ್ರೆಸ್ 85 others 1

    4. Prasanna

      08/05/2023 at 10:13 AM

      In the 2018 election there was anti incumbency+ BSY + PM Modi wave in favour of BJP .They got 104 seats .This time no wave and anti incumbency.

    5. Ravikumar

      08/05/2023 at 10:51 AM

      No chance to Congress…
      BJP 132 – 139
      Congress – 70- 75
      JDS – 19 – 22
      AAP – 1
      Others – 2- 5

    6. Cheluvaraj D

      08/05/2023 at 10:56 AM

      BJP will win 120 to 130 seats… No chance to Congress n JDS

    7. Raghu

      08/05/2023 at 11:05 AM

      BJP will get 110 to 130 seats as per professional channels survey

    8. Manjula R

      08/05/2023 at 1:11 PM

      Congress yes

    9. H. B. Murugeshi

      08/05/2023 at 5:31 PM

      No party will cross magic number 112,but there is neck to neck fight between bjp & congress,where in Former I.e bjp get 98 Cong 90 JDS 30 others get 06.totalling 224.

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending