Connect with us

DAKSHINA KANNADA

ಸುಳ್ಯ ಕಾಂಗ್ರೆಸ್‌ ಭಿನ್ನಮತ ಶಮನಕ್ಕೆ ರೈ ನೇತೃತ್ವದಲ್ಲಿ ಸಭೆ: ಎರಡೂ ಬಣಗಳ ಮಧ್ಯೆ ಮಾತಿನ ಚಕಮಕಿ

Published

on

ಸುಳ್ಯ: ಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ವಿಷಯದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆ ಮೇರೆಗೆ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ತಂಡ ಸುಳ್ಯಕ್ಕೆ ಆಗಮಿಸಿ, ಭಿನ್ನಮತ ಶಮನಕ್ಕೆ ಯತ್ನಿಸಿದ್ದಾರೆ.

ಇಂದು ಮಧ್ಯಾಹ್ನದ ವೇಳೆ ಹಿರಿಯ ಮುಖಂಡ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣೆಗೆ ಆಗಮಿಸಿದ್ದಾರೆ.

ಈ ಸಭೆಯಲ್ಲಿ ಟಿಕೆಟ್‌ ವಂಚಿತ ನಂದಕುಮಾರ್ ಹಾಗೂ ಅಭ್ಯರ್ಥಿ ಕೃಷ್ಣಪ್ಪ  ಬಣಗಳ  ಅಭಿಮಾನಿಗಳು ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಎರಡೂ ಬಣಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು. ನಂದಕುಮಾರ್ ಅವರಿಗೆ ಬಿಫಾರಂ ನೀಡಬೇಕು ಎಂದು ಅವರ ಬೆಂಬಲಿಗರು ಒತ್ತಾಯಿಸಿದರು.

ಈ ವೇಳೆ  ಆಕ್ರೋಶಗೊಂಡ ಕೆಲ ಕಾರ್ಯಕರ್ತರನ್ನು ನಂದಕುಮಾರ್‌ ಅವರೇ ಸಮಾಧಾನಪಡಿಸಲು ಯತ್ನಿಸಿದರು. ಸದ್ಯ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ವರದಿ ಸಲ್ಲಿಸಲಿದ್ದಾರೆ.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending