Connect with us

LATEST NEWS

ಜಗದೀಶ್‌ ಶೆಟ್ಟರ್‌ ಜೊತೆ ಬಿಜೆಪಿಯ ಮತ್ತೆರಡು ವಿಕೆಟ್‌ ಪತನ…!

Published

on

ಹುಬ್ಬಳ್ಳಿ: ಇತ್ತ ಕಡೆ ಜಗದೀಶ್‌ ಶೆಟ್ಟರ್‌ ಬಿಜೆಪಿಯಿಂದ ಹೊರಗೆ ಕಾಲಿಡುತ್ತಿದ್ದಂತೆ ಮತ್ತೊಂದೆಡೆ ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್‌ ಸಿಗದೆ ಬಂಡಾಯವೆದ್ದಿರುವ ಶಾಸಕ ನೆಹರು ಓಲೇಕಾರ ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಇಂದು ಶಿರಸಿಗೆ ತೆರಳಿ ಸ್ವೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಅಲ್ಲಿಂದ ಬೆಂಗಳೂರಿಗೆ ತೆರಳುತ್ತಿದ್ದು, ಅಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ಸಂಜೆ ವೇಳೆ ಜೆಡಿಎಸ್‌ ಕಚೇರಿಗೆ ತೆರಳಿ ಪಕ್ಷ ಸೇರುತ್ತೇನೆ ಎಂದು ಹೇಳಿದ್ದಾರೆ.
ಜಿಗಿಯಲು ರೆಡಿಯಾದ ಕರಡಿ ಸಂಗಣ್ಣ
ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡಲು ಪಕ್ಷದ ವರಿಷ್ಠರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಂಸದ ಸಂಗಣ್ಣ ಕರಡಿ ಇಂದು ಬೆಂಬಲಿಗರ ಸಭೆ ಕರೆದಿದ್ದಾರೆ.

ನಿನ್ನೆ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಗಣ್ಣ ಅವರಿಗೆ ಫೋನ್‌ ಕರೆ ಮಾಡಿ ‘ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಭಾನುವಾರ ಎಲ್ಲವೂ ಪರಿಹಾರವಾಗಲಿದೆ’ ಎಂದು ಭರವಸೆ ನೀಡಿದ್ದಾರೆ. ‘ಮೊದಲು ಟಿಕೆಟ್‌ ನೀಡಲಾಗುವುದು ಎಂದು ರಾಜ್ಯ ನಾಯಕರು ನನಗೆ ಭರವಸೆ ಕೊಟ್ಟಿದ್ದರು.

ಬೊಮ್ಮಾಯಿ, ಬಿ.ಎಸ್‌. ಯಡಿಯೂರಪ್ಪ ನನಗೇ ಟಿಕೆಟ್‌ ನೀಡುವಂತೆ ಕೇಂದ್ರ ನಾಯಕರಿಗೆ ಶಿಫಾರಸು ಮಾಡಿದ್ದಾರೆ. ಪಕ್ಷದ ಆಂತರಿಕ ಸಮೀಕ್ಷೆಯ ವರದಿ ನನ್ನ ಪರವಾಗಿಯೇ ಬಂದಿದೆ. ಆದ್ದರಿಂದ ನನಗೇ ಟಿಕೆಟ್‌ ಕೊಡಬೇಕು ಎಂದು ಸಂಗಣ್ಣ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಟಿಕೆಟ್‌ ದೊರೆಯದೇ ಹೋದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

LATEST NEWS

ಲೈಂ*ಗಿಕ ದೌರ್ಜ*ನ್ಯ ಆರೋಪ : ವಿಕಿಪೀಡಿಯಾದಲ್ಲಿ ಸೇವ್ ಆಯ್ತು ಪ್ರಜ್ವಲ್ ರೇವಣ್ಣ ಕೇಸ್!

Published

on

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ಸಾವಿರಾರು ಹೆಣ್ಣುಮಕ್ಕಳ ಮೇಲಿನ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿದ್ದಾರೆ. ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದ ಬೆನ್ನಲ್ಲೆ  ಪ್ರಕರಣದ ವಿವರ ‘ಗೂಗಲ್‌ ವಿಕೀಪಿಡಿಯಾ’ (Wikipedia) ದಲ್ಲಿ ದಾಖಲಾಗಿದೆ.


ಹೌದು, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋಗಳುಳ್ಳ ಪೆನ್‌ಡ್ರೈವ್ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಗೂಗಲ್‌ ನಲ್ಲಿ ಪ್ರಜ್ವಲ್ ರೇವಣ್ಣ ಅವರ ಹಿನ್ನೆಲೆ ತಿಳಿಸುವ Wikipedia Profile ನಲ್ಲೂ ‘ಸೆ*ಕ್ಸ್‌ ಸ್ಕ್ಯಾಂ*ಡಲ್’ ಹೆಸರಿನಲ್ಲಿ ಮಾಹಿತಿ ಅಪ್ಲೋಡ್ ಆಗಿದೆ.

ಸದ್ಯ ಪೆನ್‌ಡ್ರೈವ್ ವಿವಾದದಲ್ಲಿರುವ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಜರ್ಮನಿ ಸೇರಿದ್ದಾರೆ. ಅವರ ಬಾಲ್ಯ, ಶಿಕ್ಷಣ, ರಾಜಕೀಯ ಪ್ರವೇಶ, ಕ್ಷೇತ್ರ, ರಾಜಕೀಯ ಪಕ್ಷ ಸೇರಿದಂತೆ ಇಡೀ ಅವರ ಇತಿಹಾಸ ತಿಳಿಸುವ ಗೂಗಲ್ ವಿಕಿಪೀಡಿಯಾದಲ್ಲಿ ಅವರ ಅಶ್ಲೀಲ ವಿಡಿಯೋ ವಿಚಾರವೂ ಸೇರಿಕೊಂಡಿದೆ.

ವಿಕಿಪೀಡಿಯಾದಲ್ಲಿ ಏನಿದೆ ?

ಸಾಮಾನ್ಯವಾಗಿ ಒಬ್ಬರ ರಾಜಕಾರಣಿಯಾಗಲಿ, ಸೆಲೆಬ್ರೆಟಿಗಳಾಗಲಿ ಅಥವಾ ಇನ್ನಿತರ ಸಾರ್ವಜನಿಕ ಜೀವನದಲ್ಲಿರುವ ಪ್ರಮುಖ ವ್ಯಕ್ತಿಗಳ ಜೀವನ, ಇತಿಹಾಸ ಎಲ್ಲವು ವಿಕಿಪೀಡಿಯಾದಲ್ಲಿ ದಾಖಲಾಗಿರುತ್ತದೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಅವರ ಮಾಹಿತಿಯೂ ಲಭ್ಯವಿತ್ತು. ಆದರೆ, ಪೆನ್‌ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣ ಹೊರ ಬರುತ್ತಿದ್ದಂತೆ, ಅವರ ಗೂಗಲ್ ಪ್ರೊಫೈಲ್ ನಲ್ಲಿ ‘ಸೆ*ಕ್ಸ್ ಸ್ಕ್ಯಾಂ*ಡಲ್-ತನಿಖೆ’ ಉಪ ಶಿರ್ಷಿಕೆಯಡಿ ಪ್ರಕರಣದ ಮಾಹಿತಿ ಅಪ್ಲೋಡ್ ಆಗಿವೆ.

ಸಂಚಲನ ಮೂಡಿಸಿದ ವೀಡಿಯೋ :

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಹಾಸನದಲ್ಲಿ ಏಪ್ರಿಲ್ 26 ರಂದು ನಡೆದಿದೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದಾರೆ. ಚುನಾವಣೆಗೆ ಎರಡು ದಿನಗಳು ಬಾಕಿ ಉಳಿದಿರುವಾಗ ಈ ವೀಡಿಯೋ ದೃಶ್ಯಾವಳಿಗಳ ತುಣುಕುಗಳ ಪೆನ್‌ಡ್ರೈವ್‌ಗಳು ಹಾಸನದಾದ್ಯಂತ ವೈರಲ್ ಆಗಿತ್ತು. ಯುವತಿಯರೊಂದಿಗೆ ಪ್ರಜ್ವಲ್ ಆಕ್ಷೇಪಾರ್ಹ ಸ್ಥಿತಿಯಲ್ಲಿರುವ ವೀಡಿಯೋ ಮತ್ತು ಚಿತ್ರಗಳ ಪೆನ್‌ಡ್ರೈವ್‌ಗಳು ಸಂಚಲನ ಮೂಡಿಸಿದ್ದವು.

Continue Reading

FILM

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೆಮ್ಮೆಯ ಗರಿ; ಜಪಾನ್ ನತ್ತ 777 ಚಾರ್ಲಿ!

Published

on

777 ಚಾರ್ಲಿ ಭಾರೀ ಸದ್ದು ಮಾಡಿದ್ದ ಸಿನಿಮಾ. ಈ ಚಿತ್ರ ನೆಚ್ಚಿಕೊಳ್ಳದವರೇ ಇಲ್ಲ. ನಾಯಿ ಹಾಗೂ ಮನುಷ್ಯನ ನಡುವಿನ ಬಂಧವನ್ನು ಸಾರಿದ ಈ ಚಿತ್ರ ಭಾರೀ ಯಶಸನ್ನು ಬಾಚಿಕೊಂಡಿತ್ತು. ಇದೀಗ ಈ ಚಿತ್ರ ಜಪಾನ್ ನತ್ತ ಪಯಣ ಬೆಳೆಸಿದೆ.

ಜಪಾನ್ ನಲ್ಲಿ 777 ಚಾರ್ಲಿ :

ಪರಂವಃ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬಂದ 777 ಚಾರ್ಲಿ ಈಗಾಗಲೇ 5 ಭಾಷೆಗಳಲ್ಲಿ ರಿಲೀಸ್ ಆಗಿತ್ತು. ಇದೀಗ ಜಪಾನ್ ಸರದಿ. ಜಪಾನೀಸ್ ಭಾಷೆಗೆ ಡಬ್ ಆಗಿ ಬಿಡುಗಡೆ ಆಗುತ್ತಿದೆ. ಜೂ.28 ರಂದು ಜಪಾನ್ ನಗರಗಳಲ್ಲಿ 777 ಚಾರ್ಲಿ ಬಿಡುಗಡೆ ಆಗಲಿದೆ. ಬಾಲಿವುಡ್ ಹಾಗೂ ಟಾಲಿವುಡ್ ಸಿನಿಮಾಗಳು ಈಗಾಗಲೇ ಜಪಾನ್ ನಲ್ಲಿ ಸದ್ದು ಮಾಡಿವೆ. ಇದೀಗ ಚಾರ್ಲಿ ಸರದಿ. ಚಂದನವನದ(Sandalwood) ಪಾಲಿಗಿದು ಹೆಮ್ಮೆಯ ವಿಚಾರವೇ ಸರಿ.

ಜಪಾನ್ ಚಿತ್ರರಂಗದ ದೊಡ್ಡ ಸಂಸ್ಥೆ ‘ಶೋಚಿಕೋ ಮೂವೀ’ ‘777 ಚಾರ್ಲಿ’ ಚಿತ್ರವನ್ನು ಜಪಾನಿನಲ್ಲಿ ವಿತರಣೆ ಮಾಡಲು ಮುಂದಾಗಿದೆ. ಈ ಹಿಂದೆ ಇದೇ ಸಂಸ್ಥೆ ‘Hachi: A Dog’s Tale’ ಸಿನಿಮಾವನ್ನು ಜಪಾನಿನಲ್ಲಿ ವಿತರಣೆ ಮಾಡಿ ಯಶಸ್ಸು ಕಂಡಿತ್ತು.

2023ರಲ್ಲಿ ‘777 ಚಾರ್ಲಿ’ ಸಿನಿಮಾ ಥೈಲ್ಯಾಂಡ್​ನಲ್ಲಿ ಡಬ್ ಆಗಿ ಬಿಡುಗಡೆಗೊಂಡಿತ್ತು. ಈ ಸಿನಿಮಾ ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ಜರ್ಮನಿ, ತೈವಾನ್ ಮುಂತಾದ ದೇಶಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ : PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

ಕಿರಣ್​ ರಾಜ್​ ನಿರ್ದೇಶನದ 2022ರ ಜೂನ್ 10ರಂದು ಭಾರತದ 5 ಭಾಷೆಗಳಲ್ಲಿ ಬಿಡುಗಡೆಯಾಗಿ ಜನಮನಸೂರೆಗೊಂಡಿತ್ತು. ಚಾರ್ಲಿಯಾಗಿ ನಾಯಿಯ ಅಭಿನಯ ಅದ್ಭುತ ಎನಿಸಿತ್ತು. ರಕ್ಷಿತ್ ಶೆಟ್ಟಿ ಮನೋಜ್ಞವಾಗಿ ನಟಿಸಿದ್ದರು. ಚಿತ್ರದಲ್ಲಿ ಸಂಗೀತಾ ಶೃಂಗೇರಿ ಗಮನ ಸೆಳೆದಿದ್ದರು.

Continue Reading

LATEST NEWS

ಮೂರು ವರ್ಷದ ಮಗುವಿನ ಎದೆಗೆ ಕಾಲಿಟ್ಟು ಕೊಂ*ದ ಪಾಪಿ..! ಬೆಳಗಾವಿಯಲ್ಲೊಂದು ಅಮಾನುಷ ಘಟನೆ

Published

on

ಬೆಳಗಾವಿ: ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನಡೆದಿದೆ.

ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಮೂರು ವರ್ಷದ ಮೃತಪಟ್ಟಿರುವ ಮಗು.  ಜೋತಿಭಾ ತುಕಾರಾಮ ಬಾಬಾಬರ ಎಂಬವನು ಮಗುವನ್ನು ಕೊಂ*ದವರು ಎಂದು ತಿಳಿದು ಬಂದಿದೆ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ಐವತ್ತು ಸಾವಿರ ಸಾಲ ನೀಡಿದ್ದ ಎನ್ನಲಾಗಿದೆ. ಈ ಹಣವನ್ನು ವಾಪಸ್‌ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

ಮುಂದೆ ಓದಿ..: ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending