LATEST NEWS
ಕಾರವಾರ ನೌಕಾ ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ..! ಕಾರ್ಮಿಕರ ಕಾಲೋನಿಯ ಮನೆಗಳಿಗೆ ಬೆಂಕಿ..!
ಕಾರವಾರದ ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ ಬ್ಲಾಸ್ಟ್ ಸಂಭವಿಸಿದ್ದು, ಕಾಲೋನಿಯ ಮನೆಗಳಿಗೆ ಬೆಂಕಿ ಆವರಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮುದಗಾ ನೌಕಾನೆಲೆಯಲ್ಲಿ ಈ ಅವಘಡ ಸಂಭವಿಸಿದ್ದು, ಹಲವು ಶೆಡ್ಗಳು ಬೆಂಕಿಗೆ ಆಹುತಿಯಾಗಿದೆ.
ನೌಕಾನೆಲೆಯ ಎನ್ಸಿಸಿ ಗುತ್ತಿಗೆ ಕಂಪೆನಿಯ ಕಾರ್ಮಿಕರಿಗೆ ಇಲ್ಲಿ ತಾತ್ಕಾಲಿಕವಾಗಿ 150 ಶೆಡ್ಗಳ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಬಿ2 ಸಾಲಿನ ಶೆಡ್ನಲ್ಲಿ ಸ್ಫೋಟವಾಗಿದ್ದು, ಶೆಡ್ಗಳಿಗೆ ಬೆಂಕಿ ಆವರಿಸಿಕೊಂಡಿದೆ.ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಈ ಬೆಂಕಿ ಅವಘಡ ನಡೆದಿರುವುದಾಗಿ ತಿಳಿದು ಬಂದಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಮಾಡಿದೆ.
ಬ್ಲಾಸ್ಟ್ ಸದ್ದಿಗೆ ಶೆಡ್ಗಳಿಂದ ಹೊರಗೋಡಿ ಬಂದಿದ್ದ ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರ್ಮಿಕರು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ರೂ ತಾತ್ಕಾಲಿಕ ಶೆಡ್ಗಳಾಗಿದ್ದ ಕಾರಣ ಬೆಂಕಿ ಹಲವು ಶೆಡ್ಗಳಿಗೆ ವ್ಯಾಪಿಸಿಕೊಂಡಿದೆ. ಬಳಿಕ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಂಪೂರ್ಣ ಬೆಂಕಿ ನಂದಿಸಿದೆ. ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ತಗುಲಿ ಶೆಡ್ಗಳಿಗಷ್ಟೇ ಹಾನಿಯಾಗಿದ್ದು ಯಾವುದೇ ಕಾರ್ಮಿಕರಿಗೆ ಅಪಾಯ ಸಂಭವಿಸಿಲ್ಲ.
LATEST NEWS
ಮೂರು ವರ್ಷದ ಮಗುವಿನ ಎದೆಗೆ ಕಾಲಿಟ್ಟು ಕೊಂ*ದ ಪಾಪಿ..! ಬೆಳಗಾವಿಯಲ್ಲೊಂದು ಅಮಾನುಷ ಘಟನೆ
ಬೆಳಗಾವಿ: ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನಡೆದಿದೆ.
ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಮೂರು ವರ್ಷದ ಮೃತಪಟ್ಟಿರುವ ಮಗು. ಜೋತಿಭಾ ತುಕಾರಾಮ ಬಾಬಾಬರ ಎಂಬವನು ಮಗುವನ್ನು ಕೊಂ*ದವರು ಎಂದು ತಿಳಿದು ಬಂದಿದೆ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ಐವತ್ತು ಸಾವಿರ ಸಾಲ ನೀಡಿದ್ದ ಎನ್ನಲಾಗಿದೆ. ಈ ಹಣವನ್ನು ವಾಪಸ್ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.
ಮುಂದೆ ಓದಿ..: ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಸಾ*ವಿನಲ್ಲೂ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!
ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.
ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ
ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ