ಆಟವಾಡಲು ಹೋಗೋದಾಗಿ ಹೇಳಿ ಹೋಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ಕಾಸರಗೋಡು ಜಿಲ್ಲೆಯ ಬೇಡಡ್ಕ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕಾಸರಗೋಡು: ಆಟವಾಡಲು ಹೋಗೋದಾಗಿ ಹೇಳಿ ಹೋಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ಕಾಸರಗೋಡು ಜಿಲ್ಲೆಯ ಬೇಡಡ್ಕ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕುಂಡಂಗುಳಿ ನಿವಾಸಿ ವಿನೋದ್ ಮತ್ತು ಶಾಲಿನಿ ದಂಪತಿಯ ಪುತ್ರ ಅಭಿನವ್ (17)ಮೃತ ಬಾಲಕನಾಗಿದ್ದಾನೆ.
ಮಾ.7ರಂದು ಅಭಿನವ್ ಶಾಲೆಯಿಂದ ಮನೆಗೆ ಬಂದು ಸಂಜೆ ಆಟವಾಡಲು ಹೋಗುವುದಾಗಿ ಹೇಳಿ ಹೋಗಿದ್ದ ಬಾಲಕ ಮರಳಿ ಮನೆಗೆ ಬಂದಿರಲಿಲ್ಲ.
ಸಂಜೆಯಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ.
ರಾತ್ರಿ 8 ಗಂಟೆ ಸುಮಾರಿಗೆ ಮನೆ ಸಮೀಪದ ಶಾಲೆಯ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ.
ಬಾಲಕನ ಸಾವಿನ ಬಗ್ಗೆ ಆಘಾತಗೊಂಡು ಕುಟುಂಬ ಸಂಶಯವನ್ನು ಕೂಡ ವ್ಯಕ್ತಪಡಿಸಿದೆ.
ಬೇಡಡ್ಕ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.