Saturday, November 26, 2022

ಮಂಜೇಶ್ವರದಲ್ಲಿ ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಎತ್ತಿ ಎಸೆದ ಯುವಕ : ಆರೋಪಿ ಬಂಧನ..!

ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಅಪರಿಚಿತ ಯುವಕನೋರ್ವ ಎತ್ತಿ ಎಸೆದ ಅಮಾನವೀಯ ಘಟನೆ ಕಾಸರಗೋಡಿನ ಮಂಜೇಶ್ವರ(manjeshwar) ದಲ್ಲಿ ನಡೆದಿದೆ.

ಕಾಸರಗೋಡು: ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಅಪರಿಚಿತ ಯುವಕನೋರ್ವ ಎತ್ತಿ ಎಸೆದ ಅಮಾನವೀಯ ಘಟನೆ ಕಾಸರಗೋಡಿನ ಮಂಜೇಶ್ವರ(manjeshwar) ದಲ್ಲಿ ನಡೆದಿದೆ.


ಆರೋಪಿ ಮಂಜೇಶ್ವರ ಕುಂಜತ್ತೂರಿನ ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದ್ದು, ಮಂಜೇಶ್ವರ(manjeshwar) ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಗಾಯಗೊಂಡಿರುವ 9 ರ ಹರೆಯದ ಬಾಲಕಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯ ಹತ್ತಿರ ಬಂದ ಈತ ಬಾಲಕಿಯನ್ನು ಮೇಲಕ್ಕೆತ್ತಿ ಎಸೆದಿದ್ದು, ಕೃತ್ಯದ ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದ.

ಬಾಲಕಿಯ ಪೋಷಕರು ನೀಡಿದ ದೂರಿನಂತೆ ಮಂಜೇಶ್ವರ(manjeshwar)  ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...